For Quick Alerts
ALLOW NOTIFICATIONS  
For Daily Alerts
 

Adelaide Test: ಆಸ್ಟ್ರೇಲಿಯಾ ತಂಡಕ್ಕೆ ಟೀಮ್ ಇಂಡಿಯಾದ ಈ ನಾಲ್ವರ ಚಿಂತೆ!

ಭಾನುವಾರ ಕ್ಯಾನ್​​ಬೆರಾ ಮನುಕಾ ಓವಲ್​ ಮೈದಾನದಲ್ಲಿ ನಡೆದ ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಅಡಿಲೇಡ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನು ಟೀಮ್ ಇಂಡಿಯಾ ಸಿದ್ಧತೆ ಮಾಡಿಕೊಂಡಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯವು ಅಡಿಲೇಡ್‌ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ನಡೆಯಲಿದೆ. ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದ್ದು, ಭಾರತೀಯ ಕಾಲಮಾನ ಬೆಳಗ್ಗೆ 9:30 ಗಂಟೆಗೆ ಆರಂಭವಾಗಲಿದೆ. ಉಭಯ ತಂಡಗಳ ನಡುವಿನ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಹಗಲು-ರಾತ್ರಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಉತ್ತಮ ದಾಖಲೆ ಹೊಂದಿದ್ದರೂ ಭಾರತ ತಂಡವನ್ನು ಎದುರಿಸುವುದು ಸುಲಭದ ಮಾತಲ್ಲ. ಏಕೆಂದರೆ ಟೀಮ್ ಇಂಡಿಯಾ ಆಟಗಾರರು ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಪರ್ತ್‌ನಲ್ಲಿ ಐತಿಹಾಸಿಕ ವಿಜಯದ ನಂತರ, ಟೀಮ್ ಇಂಡಿಯಾ ಈಗ ಅಡಿಲೇಡ್‌ನಲ್ಲಿ ಹಗಲು-ರಾತ್ರಿ ಟೆಸ್ಟ್ ಪಂದ್ಯದ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಅಡಿಲೇಡ್‌ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ನಿದ್ದೆಗೆಡಿಸಿದ್ದಾರೆ. ಇದೀಗ ಕಾಂಗೂರು ಪಡೆಗೆ ಈ ನಾಲ್ವರು ಆಟಗಾರರದೆ ಚಿಂತೆಯಾಗಿದೆ.

Australia Team worries about Virat Kohli Jasprit Bumrah Yashasvi Jaiswal and Rishabh Pant

ವಿರಾಟ್ ಕೊಹ್ಲಿ

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿದ್ದಾರೆ. ಪರ್ತ್‌ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿರುವ ಕೊಹ್ಲಿ ಇದೀಗ ಅಡಿಲೇಡ್‌ನಲ್ಲಿ ದಾಖಲೆ ಸೃಷ್ಟಿಸಲು ಸಜ್ಜಾಗಿದ್ದಾರೆ. ಹಗಲು-ರಾತ್ರಿ ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ದಾಖಲೆಯು ಅತ್ಯುತ್ತಮವಾಗಿದೆ. ಅವರು ಇಲ್ಲಿಯವರೆಗೆ 4 ಹಗಲು-ರಾತ್ರಿ ಟೆಸ್ಟ್ ಪಂದ್ಯಗಳನ್ನು ಆಡಿದ್ದು, 46.16 ಸರಾಸರಿಯಲ್ಲಿ 277 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಕೊಹ್ಲಿ 1 ಶತಕ ಹಾಗೂ 1 ಅರ್ಧಶತಕ ಸಿಡಿಸಿದ್ದಾರೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 143 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 100 ರನ್ ಗಳಿಸಿದ್ದರು. ಅಡಿಲೇಡ್‌ನಲ್ಲಿ ನಡೆಯಲಿರುವ ಡೇ-ನೈಟ್ ಟೆಸ್ಟ್ ಪಂದ್ಯದಲ್ಲೂ ವಿರಾಟ್ ಕೊಹ್ಲಿ ತಮ್ಮ ಫಾರ್ಮ್ ಅನ್ನು ಮುಂದುವರೆಸುವ ನಿರೀಕ್ಷೆಯಲ್ಲಿದ್ದು, ಆಸೀಸ್ ತಂಡಕ್ಕೆ ಕೊಹ್ಲಿ ರನ್ ವೇಗಕ್ಕೆ ಬ್ರೇಕ್ ಹಾಕುವುದು ತಲೆ ನೋವಾಗಿದೆ.

ಜಸ್ಪ್ರೀತ್ ಬುಮ್ರಾ

ಪರ್ತ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕನಾಗಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಯಶಸ್ಸು ಕಂಡಿದ್ದಾರೆ. ಈಗ ಅಡಿಲೇಡ್‌ ಟೆಸ್ಟ್ ಪಂದ್ಯಕ್ಕೂ ಮುನ್ನ ಜಸ್ಪ್ರೀತ್ ಬುಮ್ರಾ ಅವರು ಆಸೀಸ್ ಬ್ಯಾಟರ್‌ಗಳ ನಿದ್ದೆಗೆಡಿಸಿದ್ದಾರೆ. ಪಿಂಕ್ ಬಾಲ್‌ನಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಜಸ್ಪ್ರೀತ್ ಬುಮ್ರಾ ಪ್ರಮುಖ ಕಾರಣವಾಗಿದ್ದರು.
ಪರ್ತ್ ಟೆಸ್ಟ್ ಪಂದ್ಯದಲ್ಲಿ ಒಟ್ಟು 8 ವಿಕೆಟ್‌ಗಳನ್ನು ಕಬಳಿಸಿದ್ದರು. ಪರಿಣಾಮ ಪರ್ತ್ ಟೆಸ್ಟ್ ಪಂದ್ಯವನ್ನು ಭಾರತ 295 ರನ್‌ಗಳಿಂದ ಗೆದ್ದು ಬೀಗಿತ್ತು. ಈಗ ಆಸೀಸ್ ಬ್ಯಾಟರ್‌ಗಳು ಅಡಿಲೇಡ್‌ನಲ್ಲಿ ಬುಮ್ಯಾ ಬೌಲಿಂಗ್ ಎದುರಿಸಲು ತಯಾರಿ ನಡೆಸುತ್ತಿದ್ದಾರೆ.

ಯಶಸ್ವಿ ಜೈಸ್ವಾಲ್

ಟೀಮ್ ಇಂಡಿಯಾದ ಯುವ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಪರ್ತ್ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಬೌಲರ್‌ಗಳಿಗೆ ಬೆವರಿಳಿಸಿದ್ದಾರೆ. ಆದರೆ ಮೊದಲ ಬಾರಿಗೆ ಯಶಸ್ವಿ ಜೈಸ್ವಾಲ್ ಅವರು ಹಗಲು-ರಾತ್ರಿ ಟೆಸ್ಟ್‌ ಪಂದ್ಯವನ್ನು ಆಡುತ್ತಿದ್ದಾರೆ. ಅದರೂ ಅಡಿಲೇಡ್‌ನಲ್ಲಿ ಅವರು ರನ್ ಹೊಳೆ ಹರಿಸುವ ನಿರೀಕ್ಷೆಯಲ್ಲಿದ್ದಾರೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 54.21 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಯಶಸ್ವಿ ಜೈಸ್ವಾಲ್
297 ಎಸೆತಗಳಲ್ಲಿ 15 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ 161 ರನ್ ಗಳಿಸಿದ್ದರು. ಇದೀಗ ಯಶಸ್ವಿ ಜೈಸ್ವಾಲ್ ಹಗಲು-ರಾತ್ರಿ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ಬೌಲರ್‌ಗಳಾದ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್ ಮತ್ತು ಸ್ಕಾಟ್ ಬೋಲ್ಯಾಂಡ್ ಅವರನ್ನು ಕಾಡಬಹುದು.

ರಿಷಬ್ ಪಂತ್

ಅಡಿಲೇಡ್‌ನಲ್ಲಿ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾಕ್ಕೆ ದೊಡ್ಡ ಭಯ ಎಂದರೆ ಅದು ರಿಷಬ್ ಪಂತ್. ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರು ಆಸ್ಟ್ರೇಲಿಯಾ ತಂಡದ ಬೌಲರ್‌ಗಳಿಗೆ ನಡುಕ ಹುಟ್ಟಿಸಬಲ್ಲರು. ರಿಷಬ್ ಪಂತ್ ಅವರ ಗುರಿ ಆಸೀಸ್ ಆಫ್ ಸ್ಪಿನ್ನರ್ ನಾಥನ್ ಲಿಯಾನ್. ರಿಷಬ್ ಪಂತ್ ಈ ಹಿಂದೆ ನಾಥನ್ ಲಿಯಾನ್ ವಿರುದ್ಧ ಸಾಕಷ್ಟು ರನ್ ಗಳಿಸಿದ್ದಾರೆ. ಆಸ್ಟ್ರೇಲಿಯಾ ನೆಲದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ರಿಷಬ್ ಪಂತ್ ಅವರ ದಾಖಲೆ ಅದ್ಭುತವಾಗಿದೆ. ರಿಷಬ್ ಪಂತ್ ಇದುವರೆಗೆ ಆಸ್ಟ್ರೇಲಿಯಾದಲ್ಲಿ 8 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 662 ರನ್ ಗಳಿಸಿದ್ದಾರೆ. ಅಲ್ಲದೆ, 1 ಶತಕ ಮತ್ತು 2 ಅರ್ಧ ಶತಕಗಳನ್ನು ಕಲೆ ಹಾಕಿದ್ದಾರೆ.

Story first published: Monday, December 2, 2024, 12:37 [IST]
Other articles published on Dec 2, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+