ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ಗೂ ಮುನ್ನವೇ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಿನಿ ಸಮರ: ವರದಿ

Australia to tour India for 3 match t20 series says reports

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಭಾರತದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಇದರ ನಡುವೆ ಅಂತರರಾಷ್ಟ್ರೀಯ ಕ್ರಿಕೆಟ್ ಕುರಿತು ಹೊರಬಿದ್ದಿರುವ ವರದಿಯೊಂದು ಕ್ರಿಕೆಟ್ ಪ್ರೇಮಿಗಳ ಸಂತಸಕ್ಕೆ ಕಾರಣವಾಗಿದೆ. ಹೌದು, ಇತ್ತೀಚೆಗಿನ ವಿದ್ಯಾಮಾನದ ಪ್ರಕಾರ ಮುಂಬರುವ ಟಿ ಟ್ವೆಂಟಿ ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದು, 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಇತ್ತಂಡಗಳೂ ಸೆಣಸಾಡಲಿವೆ ಎಂದು ವರದಿಯೊಂದು ತಿಳಿಸಿದೆ.

ಹೌದು, ಕಳೆದ ಬಾರಿ ಯುಎಇಯಲ್ಲಿ ನಡೆದ 2021ರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಆಸ್ಟ್ರೇಲಿಯಾ ಈ ಬಾರಿಯ ವಿಶ್ವಕಪ್ ಟೂರ್ನಿಯ ಆತಿಥ್ಯವನ್ನು ವಹಿಸಿಕೊಳ್ಳಲಿದ್ದು, ಟೂರ್ನಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಜರುಗಲಿದೆ. ಇನ್ನು ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತವರಿನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಗೆದ್ದು ಚಾಂಪಿಯನ್ ಪಟ್ಟವನ್ನು ಕಾಪಾಡಿಕೊಳ್ಳುವ ಯೋಜನೆಯಲ್ಲಿದ್ದರೆ, ಕಳೆದ ಬಾರಿಯ ಟೂರ್ನಿಯಿಂದ ಲೀಗ್ ಹಂತದಲ್ಲಿಯೇ ಹೊರಬಿದ್ದಿದ್ದ ಟೀಮ್ ಇಂಡಿಯಾ ಈ ಬಾರಿ ನೂತನ ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದು ಟ್ರೋಫಿ ಗೆಲ್ಲುವತ್ತ ಚಿತ್ತ ನೆಟ್ಟಿದೆ.

"ಐಪಿಎಲ್ 2022ರ ಅತಿ ಕೆಟ್ಟ ರೀಟೆನ್ಶನ್ ಇದು": ಮುಂಬೈ ಇಂಡಿಯನ್ಸ್ ಸೋಲಿನ ಬಳಿಕ ಅಭಿಮಾನಿಗಳ ಆಕ್ರೋಶ

ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವುದಕ್ಕೂ ಒಂದು ತಿಂಗಳ ಮುನ್ನ ಸೆಪ್ಟೆಂಬರ್ ತಿಂಗಳಿನಲ್ಲಿ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡಲಿದೆ ಎನ್ನಲಾಗುತ್ತಿದೆ. ಹೀಗಾಗಿ ಇತ್ತಂಡಗಳಿಗೂ ಈ ಸರಣಿ ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಯಾರಿ ಮಾಡಿಕೊಳ್ಳಲು ಸಹಕಾರಿಯಾಗಲಿದೆ ಎನ್ನಬಹುದು.

2020ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದಿದ್ದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಭಾರತ ಆಸ್ಟ್ರೇಲಿಯಾವನ್ನು 2 - 1 ಅಂತರದಲ್ಲಿ ಸೋಲಿಸಿ ಸರಣಿಯನ್ನು ವಶಪಡಿಸಿಕೊಂಡಿತ್ತು. ಹಾಗೂ ಇತ್ತಂಡಗಳ ನಡುವೆ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 23 ಟಿ ಟ್ವೆಂಟಿ ಪಂದ್ಯಗಳು ನಡೆದಿದ್ದು ಈ ಪೈಕಿ ಭಾರತ 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಆಸ್ಟ್ರೇಲಿಯಾ 9 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವನ್ನು ಕಾಣದೇ ಅಂತ್ಯಗೊಂಡಿದೆ.

ಕ್ ಮತ್ತು ನೆದರ್ಲೆಂಡ್ಸ್ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ಏಕದಿನ ತಂಡ ಪ್ರಕಟ; ಫಾರ್ಮ್‌ನಲ್ಲಿರುವ ಆಟಗಾರನಿಗಿಲ್ಲ ಸ್ಥಾನ!ಕ್ ಮತ್ತು ನೆದರ್ಲೆಂಡ್ಸ್ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ಏಕದಿನ ತಂಡ ಪ್ರಕಟ; ಫಾರ್ಮ್‌ನಲ್ಲಿರುವ ಆಟಗಾರನಿಗಿಲ್ಲ ಸ್ಥಾನ!

ಪೊಲ್ಲಾರ್ಡ್ ಗೆಟ್ ಔಟ್!! ಮುಂಬೈ ಅಭಿಮಾನಿಗಳಿಂದ ಪೊಲಾರ್ಡ್ ಫುಲ್ ಟ್ರೋಲ್ | Oneindia Kannada

ಟೀಮ್ ಇಂಡಿಯಾ ಸಂಭಾವ್ಯ ಅಡುವ ಬಳಗ: ಆರಂಭಿಕರು: ರೋಹಿತ್ ಶರ್ಮಾ ( ನಾಯಕ ) ಮತ್ತು ಕೆಎಲ್ ರಾಹುಲ್, ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಮತ್ತು ರಿಷಬ್ ಪಂತ್ (ವಿಕಟ್ ಕೀಪರ್) ಮತ್ತು ಬೌಲರ್‌ಗಳು: ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್ ಮತ್ತು ಜಸ್ಪ್ರೀತ್ ಬುಮ್ರಾ

Story first published: Tuesday, May 10, 2022, 15:37 [IST]
Other articles published on May 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X