Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿರುವ ಆಸ್ಟ್ರೇಲಿಯಾ ವೇಳಾಪಟ್ಟಿ ಇಲ್ಲಿದೆ

ಭಾರತದಲ್ಲಿ ಸದ್ಯ ಟಿ20 ವಿಶ್ವಕಪ್‌ ನಡೆಯುತ್ತಿದೆ. ಈ ಮೆಗಾ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಸ್ಥಿರ ಪ್ರದರ್ಶನ ನೀಡುತ್ತಿದ್ದು ಸೂಪರ್ 8 ಹಂತಕ್ಕೆ ಅರ್ಹತೆ ಪಡೆದಿದೆ. ಅಲ್ಲದೆ ಸೂಪರ್ 8 ಹಂತನ ಮೊದಲ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ 76 ರನ್‌ಗಳ ಜಯ ದಾಖಲಿಸಿದೆ. ದಕ್ಷಿಣ ಆಫ್ರಿಕಾ ಚಾಂಪಿಯನ್ ಪಟ್ಟದ ಮೇಲೆ ಕಣ್ಣು ನೆಟ್ಟಿದೆ. ಇನ್ನು ಮಾಜಿ ಚಾಂಪಿಯನ್‌ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್‌ನ ಲೀಗ್‌ ಹಂತದಲ್ಲೇ ಟೂರ್ನಿಗೆ ಗುಡ್ ಬಾಯ್ ಹೇಳಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಸೆಪ್ಟೆಂಬರ್ ನಿಂದ ಅಕ್ಟೋಬರ್ ವರೆಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ.

ಆಸ್ಟ್ರೇಲಿಯಾ ಕ್ರಿಕೆಟ್‌ ತಂಡ ಈ ವರ್ಷದ ಸೆಪ್ಟೆಂಬರ್ ನಿಂದ ಅಕ್ಟೋಬರ್ ವರೆಗೆ ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಬೆಳೆಸಲಿದೆ. ಈ ಪ್ರವಾಸವು ವಿಶ್ವ ಟೆಸ್ಟ್‌ ಚಾಂಪಿಯನ್ ಶಿಪ್‌ ಭಾಗವಾಗಿರಲಿದೆ. ಪ್ರವಾಸದ ಆರಂಭದಲ್ಲಿ ಉಭಯ ತಂಡಗಳು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ನಂತರ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಟೆಸ್ಟ್‌ ಸರಣಿ ಆರಂಭವಾಗಲಿದೆ. ಸ್ಯಾಂಡ್‌ಪೇಪರ್ ಹಗರಣದ ನಂತರ ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಇದೇ ಮೊದಲ ಬಾರಿಗೆ ಮಾಡುತ್ತಿದೆ.

Australia

ಈ ಸರಣಿಯ ಮೊದಲ ಏಕದಿನ ಪಂದ್ಯ ಸೆಪ್ಟೆಂಬರ್ 24 ರಂದು ಪ್ರಾರಂಭವಾಗಲಿದ್ದು, ಎರಡನೇ ಪಂದ್ಯ ಸೆಪ್ಟೆಂಬರ್ 27 ರಂದು,ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ಸೆಪ್ಟೆಂಬರ್ 30 ರಂದು ನಡೆಯಲಿದೆ. ಇದು ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್‌ ದೃಷ್ಟಿಯಿಂದ ಭಾರೀ ಪ್ರಮುಖವಾಗಿದೆ.

ಟೆಸ್ಟ್‌ ವೇಳಾಪಟ್ಟಿ

ಏಕದಿನ ಪಂದ್ಯಗಳ ಬಳಿಕ ಉಭಯ ತಂಡಗಳು ಮಧ್ಯೆ ಒಟ್ಟು 3 ಟೆಸ್ಟ್‌ ಪಂದ್ಯಗಳು ಆರಂಭವಾಗಲಿವೆ. ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಡಿಯಲ್ಲಿ ಆಡಲಾಗುವ ಮೊದಲ ಪಂದ್ಯ ಅಕ್ಟೋಬರ್ 9 ರಿಂದ 13 ರವರೆಗೆ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯ ಅಕ್ಟೋಬರ್ 18 ರಿಂದ 22 ರವರೆಗೆ, ಮೂರನೇ ಪಂದ್ಯ ಅಕ್ಟೋಬರ್ 27 ರಂದು ಪ್ರಾರಂಭವಾಗಿ ಅಕ್ಟೋಬರ್ 31 ರವರೆಗೆ ನಡೆಯಲಿದೆ.

Australia

ಕಳೆದ ಬಾರಿಯ ವಿಶ್ವ ಟೆಸ್ಟ್‌ ಚಾಂಪಿಯನ್ ಶಿಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಸದ್ಯ ದಕ್ಷಿಣ ಆಫ್ರಿಕಾ ಟೆಸ್ಟ್‌ ಚಾಂಪಿಯನ್ ಆಗಿದೆ. ಈ ಸರಣಿಯ ಕೊನೆಯಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್ ಶಿಪ್‌ ಫೈನಲ್‌ ಪಂದ್ಯವನ್ನು ಆಡುವ ಒಂದು ತಂಡ ನಿರ್ಧಾರವಾಗಬಹುದಾಗಿದೆ. ಹೀಗಾಗಿ ಎಲ್ಲ ಅಭಿಮಾನಿಗಳ ಚಿತ್ತ ಈ ಸರಣಿಯ ಮೇಲೆ ನೆಟ್ಟಿದೆ.

Story first published: Monday, February 23, 2026, 18:14 [IST]
Other articles published on Feb 23, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+