
ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳು ಎರಡನೇ ಟೆಸ್ಟ್‌ನಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯ ಕರಾಚಿಯಲ್ಲಿ ನಡೆಯುತ್ತಿದೆ. ಎರಡನೇ ದಿನದಾಟ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು ಮೊದಲ ದಿನದಾಟದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ಎರಡನೇ ದಿನ ಬ್ಯಾಟಿಂಗ್ ಮುಂದುವರಿಸಿದೆ. ಮೊದಲ ದಿನದಾಟದಲ್ಲಿ ಆರಂಭೀಕ ಆಟಗಾರ ಉಸ್ಮಾನ್ ಖವಾಜ ಭರ್ಜರಿ ಶತಕ ಸಿಡಿಸಿದ್ದು ಎರಡನೇ ದಿನವೂ ಆಟವನ್ನು ಮುಂದುವರಿಸಿದ್ದಾರೆ.
ಮೊದಲ ದಿನ ಪಾಕಿಸ್ತಾನದ ಬೌಲರ್‌ಗಳನ್ನು ಆಸ್ಟ್ರೇಲಿಯಾ ದಾಂಡಿಗರು ಸಂಪೂರ್ಣವಾಗಿ ಬೆವರಿಳಿಸುವಲ್ಲಿ ಯಶಸ್ವಿಯಾದರು. ಮೊದಲ ವಿಕೆಟ್‌ಗೆ 82 ರನ್‌ಗಳ ಜೊತೆಯಾಟ ಬಂದರೆ ಮಾರ್ನಾಸ್ ಲ್ಯಾಬುಶೈನ್ ರನೌಟ್ ಆಗುವ ಮೂಲಕ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡಿದ್ದು ಆಸಿಸ್ ಪಡೆಗೆ ಸಣ್ಣ ಆಘಾತ ಮೂಡಿಸಿತು. ಆದರೆ ನಂತರ ಉಸ್ಮಾನ್ ಖವಾಜಾ ಅವರನ್ನು ಸೇರಿಕೊಂಡ ಸ್ಟೀವನ್ ಸ್ಮಿತ್ 159 ರನ್‌ಗಳ ಭರ್ಜರಿ ಜೊತೆಯಾಟದಲ್ಲಿ ಭಾಗಿಯಾದರು. ಆದರೆ ದಿನದಾಟದ ಅಂತಿಮ ಹಂತದಲ್ಲಿ ಸ್ಮಿತ್ 72 ರನ್‌ಹಳಿಗೆ ವಿಕೆಟ್ ಕಳೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿದರು. ಈ ಮಧ್ಯೆ ಆಸ್ಟ್ರೇಲಿಯಾ ತಂಡದ ಆರಂಭೀಕ ಆಟಗಾರ ಉಸ್ಮಾನ್ ಖವಾಜಾ ಅದ್ಭುತ ಫಾರ್ಮ್ ಮುಂದುವರಿಸಿದ್ದು ಭರ್ಜರಿ ಶತಕ ದಾಖಲಿಸುವಲ್ಲಿ ಯಶಸ್ವಿಯಾದರು. ಸ್ಮಿತ್ ವಿಕೆಟ್ ಕಳೆದುಕೊಂಡ ನಂತರ ನಥನ್ ಲಿಯಾನ್ ನೈಟ್‌ವಾಚ್‌ಮನ್ ಆಗಿ ಕ್ರೀಸ್‌ಗೆ ಇಳಿದಿದ್ದು ಖವಾಜಾಗೆ ಉತ್ತಮವಾಗಿ ಸಾಥ್ ನೀಡುತ್ತಿದ್ದಾರೆ.
Live ಸ್ಕೋರ್‌ಕಾರ್ಡ್ ಹೀಗಿದೆ
ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಹೀಮ್ ಅಶ್ರಫ್, ಹಸನ್ ಅಲಿ, ನೌಮಾನ್ ಅಲಿ, ಶಾಹೀನ್ ಅಫ್ರಿದಿ, ಸಾಜಿದ್ ಖಾನ್
ಬೆಂಚ್: ಇಫ್ತಿಕರ್ ಅಹ್ಮದ್, ನಸೀಮ್ ಶಾ, ಮೊಹಮ್ಮದ್ ವಾಸಿಂ ಜೂನಿಯರ್, ಶಾನ್ ಮಸೂದ್, ಸೌದ್ ಶಕೀಲ್, ಹಾರಿಸ್ ರೌಫ್, ಜಾಹಿದ್ ಮಹಮೂದ್
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟೀ, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಜೋಶ್