For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಪಾಕಿಸ್ತಾನ: ಕರಾಚಿನ ಟೆಸ್ಟ್‌ನಲ್ಲಿ ಆಸಿಸ್ ಬಿಗಿ ಪಟ್ಟು: ಸಂಕಷ್ಟದಲ್ಲಿ ಪಾಕಿಸ್ತಾನ

Australia va Pakistan, 2nd test, Day 3, Australia hold control against Pakistan, Highlights

ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಆಸ್ಟ್ರೇಲಿಯಾ ಪಾಕಿಸ್ತಾನದ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಬ್ಯಾಟಿಂಗ್ ನಡೆಸಿದ್ದ ಆಸ್ಟ್ರೇಲಿಯಾ 556 ರನ್‌ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದು ಕೇವಲ 148 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 408 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ ಆಸ್ಟ್ರೇಲಿಯಾ.

ಆಸ್ಟ್ರೇಲಿಯಾ ಪರವಾಗಿ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಭರ್ಜರಿ ಶತಕ, ಸ್ಟೀವ್ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ಅವರ ಅರ್ಧ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ಕಳೆದುಕೊಂಡು 556 ರನ್‌ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. ಮೊದಲ ದಿನ ಹಾಗೂ ಎರಡನೇ ದಿನ ಪಾಕಿಸ್ತಾನದ ಬೌಲರ್‌ಗಳನ್ನು ಆಸ್ಟ್ರೇಲಿಯಾ ದಾಂಡಿಗರು ಸಂಪೂರ್ಣವಾಗಿ ಬೆವರಿಳಿಸುವಲ್ಲಿ ಯಶಸ್ವಿಯಾದರು. ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಅದ್ಭುತ ಫಾರ್ಮ್ ಮುಂದುವರಿಸಿದ್ದು ಭರ್ಜರಿ ಶತಕ ದಾಖಲಿಸುವಲ್ಲಿ ಯಶಸ್ವಿಯಾದರು. ಖವಾಜ 160 ರನ್‌ಗಳಿಸಿ ವಿಕೆಟ್ ಒಪ್ಪಿಸಿದ್ದರು. ಸ್ಟೀವ್ ಸ್ಮಿತ್ 72 ರನ್‌ಗಳ ಕೊಡುಗೆ ನೀಡಿದರೆ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ 93 ರನ್‌ಗಳಿಸಿ ಔಟಾದರು. ಈ ಮೂಲಕ 7 ರನ್‌ಗಳಿಂದ ಶತಕವಂಚಿತರಾಗಿದ್ದಾರೆ. ಅಂತಿಮವಾಗಿ 189 ಓವರ್‌ಗಳ ಕಾಳ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 559/9 ರನ್‌ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ ಆರಂಭದಿಂದಲೇ ಮುಗ್ಗರಿಸಲು ಆರಂಭಿಸಿತು. ರಾವಲ್ಪಿಂಡಿ ಟೆಸ್ಟ್ ಪಂದ್ಯದಲ್ಲಿ ಅಬ್ಬರಿಸಿದ್ದ ಪಾಕಿಸ್ತಾನದ ಅಗ್ರ ಕ್ರಮಾಂಕದ ಆಟಗಾರರು ಕರಾಚಿ ಟೆಸ್ಟ್ ಮೊದಲ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ನಾಯಕ ಬಾಬರ್ ಅಜಂ ಗಳಿಸಿದ 36 ರನ್ ಪಾಕಿಸ್ತಾನದ ಪರವಾಗಿ ದಾಖಲಾದ ಅತಿ ಹೆಚ್ಚಿನ ಮೊತ್ತವಾಗಿದೆ. ಅಂತಿಮವಾಗಿ 148 ರನ್‌ಗಳಿಗೆ ಆಲೌಟ್ ಆಯಿತು.

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ 408 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದ ಹೊರತಾಗಿಯೂ ಆಸ್ಟ್ರೇಲಿಯಾ ಫಾಲೋಆನ್ ಹೇರದೆ ಬ್ಯಾಟಿಂಗ್ ನಡೆಸಲು ಆರಂಭಿಸಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಅವರನ್ನು ಅಗ್ಗಕ್ಕೆ ಕಳೆದುಕೊಂಡರೂ ಎರಡನೇ ವಿಕೆಟ್‌ಗೆ ಲ್ಯಾಬುಶೈನ್ ಹಾಗೂ ಖವಾಜಾ ಉತ್ತಮ ಜೊತೆಯಾಟ ನೀಡಿದ್ದಾರೆ. ಮೂರನೇ ದಿನದಾಟದ ಅಂತ್ಯದಲ್ಲಿ ಆಸ್ಟ್ರೇಲಿಯಾ 81 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದ್ದು 489 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದ್ದು ಸುಸ್ಥಿತಿಯಲ್ಲಿದೆ.

ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಹೀಮ್ ಅಶ್ರಫ್, ಹಸನ್ ಅಲಿ, ನೌಮಾನ್ ಅಲಿ, ಶಾಹೀನ್ ಅಫ್ರಿದಿ, ಸಾಜಿದ್ ಖಾನ್
ಬೆಂಚ್: ಇಫ್ತಿಕರ್ ಅಹ್ಮದ್, ನಸೀಮ್ ಶಾ, ಮೊಹಮ್ಮದ್ ವಾಸಿಂ ಜೂನಿಯರ್, ಶಾನ್ ಮಸೂದ್, ಸೌದ್ ಶಕೀಲ್, ಹಾರಿಸ್ ರೌಫ್, ಜಾಹಿದ್ ಮಹಮೂದ್

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟೀ, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್

Story first published: Monday, March 14, 2022, 20:24 [IST]
Other articles published on Mar 14, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+