ಆಸ್ಟ್ರೇಲಿಯಾ vs ಪಾಕಿಸ್ತಾನ 2ನೇ ಟೆಸ್ಟ್: ಬಾಬರ್ ಅಜಮ್ ಶತಕ, ಪಂದ್ಯ ರಕ್ಷಿಸಲು ಪಾಕ್ ಶತ ಪ್ರಯತ್ನ

ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಕರಾಚಿಯಲ್ಲಿ ನಡೆಯುತ್ತಿದ್ದು ಎರಡನೇ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ ದಿಟ್ಟ ಹೋರಾಟವನ್ನು ಪ್ರದರ್ಶಿಸಿದೆ. ಪಾಕಿಸ್ತಾನದ ನಾಯಕ ಬಾಬರ್ ಅಲಂ ಭರ್ಜರಿ ಶತಕ ಸಿಡಿಸಿದ್ದು ಅಂತಿಮ ದಿನಕ್ಕೆ ಆಟವನ್ನು ಕಾಯ್ದಿರಿಸಿದ್ದಾರೆ. ಆರಂಭಿಕ ಆಟಗಾರ ಅಬ್ದುಲ್ಲಾ ಶಫೀಕ್ ಕೂಡ ಅಜೇಯವಾಗುಳಿದಿದ್ದಾರೆ. ಬಾಬರ್ ಅಜಮ್ 102 ರನ್‌ಗಳಿಸಿದ್ದರೆ ಅಬ್ದುಲ್ಲಾ ಶಫೀಲ್ 226 ಎಸೆತಗಳನ್ನು ಎದುರಿಸಿ 71 ರನ್‌ಗಳಿಸಿ ಔಟಾಗದೆ ಉಳಿದುಕೊಂಡಿದ್ದಾರೆ. ಪಾಕಿಸ್ತಾನ ತನ್ನ ಮೊದಲ ಎರಡು ವಿಕೆಟ್‌ಗಳನ್ನು 21 ರನ್ ಗಳಿಸುವಷ್ಟರಲ್ಲಿ ಕಳೆದುಕೊಂಡಿತ್ತು.
ಕರಾಚಿ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಅಂತ್ಯವಾಗುವ ವೇಳೆಗೆ ಆಸ್ಟ್ರೇಲಿಯಾ ಪಾಕಿಸ್ತಾನದ ವಿರುದ್ಧ ಸಂಪೂರ್ಣ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ ಆಸಿಸ್ ಪಡೆಗೆ ಉತ್ತಮವಾಗಿ ಪ್ರತಿರೋಧವೊಡ್ಡುತ್ತಿದ್ದು ಪಂದ್ಯವನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನ ನಡೆಸುತ್ತಿದೆ. ನಾಲ್ಕನೇ ದಿನದಾಟದಲ್ಲಿ ಈ ಪ್ರಯಯ್ನದಲ್ಲಿ ಪಾಕಿಸ್ತಾನ ಯಶಸ್ಸು ಕೂಡ ಸಾಧಿಸಿದೆ.
ಮೊದಲಿಗೆ ಬ್ಯಾಟಿಂಗ್ ನಡೆಸಿದ್ದ ಆಸ್ಟ್ರೇಲಿಯಾ 556 ರನ್‌ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದು ಕೇವಲ 148 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 408 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿರುವ ಆಸ್ಟ್ರೇಲಿಯಾ ಆತಿಥೇಯರನ್ನು ಸೋಲಿನತ್ತ ಮುಖಮಾಡುವಂತೆ ಮಾಡಿತು.
ಆಸ್ಟ್ರೇಲಿಯಾ ಪರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಭರ್ಜರಿ ಶತಕ, ಸ್ಟೀವ್ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ಅವರ ಅರ್ಧ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ಕಳೆದುಕೊಂಡು 556 ರನ್‌ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಮೊದಲ ದಿನ ಹಾಗೂ ಎರಡನೇ ದಿನ ಪಾಕಿಸ್ತಾನದ ಬೌಲರ್‌ಗಳನ್ನು ಆಸ್ಟ್ರೇಲಿಯಾ ದಾಂಡಿಗರು ಸಂಪೂರ್ಣವಾಗಿ ಬೆವರಿಳಿಸುವಲ್ಲಿ ಯಶಸ್ವಿಯಾದರು. ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಅದ್ಭುತ ಫಾರ್ಮ್ ಮುಂದುವರಿಸಿದ್ದು ಭರ್ಜರಿ ಶತಕ ದಾಖಲಿಸುವಲ್ಲಿ ಯಶಸ್ವಿಯಾದರು. ಖವಾಜ 160 ರನ್‌ಗಳಿಸಿ ವಿಕೆಟ್ ಒಪ್ಪಿಸಿದ್ದರು. ಸ್ಟೀವ್ ಸ್ಮಿತ್ 72 ರನ್‌ಗಳ ಕೊಡುಗೆ ನೀಡಿದರೆ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ 93 ರನ್‌ಗಳಿಸಿ ಔಟಾದರು. ಈ ಮೂಲಕ 7 ರನ್‌ಗಳಿಂದ ಶತಕವಂಚಿತರಾಗಿದ್ದಾರೆ. ಅಂತಿಮವಾಗಿ 189 ಓವರ್‌ಗಳ ಕಾಳ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 559/9 ರನ್‌ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.
ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭದಿಂದಲೇ ಮುಗ್ಗರಿಸಲು ಆರಂಭಿಸಿತು. ರಾವಲ್ಪಿಂಡಿ ಟೆಸ್ಟ್ ಪಂದ್ಯದಲ್ಲಿ ಅಬ್ಬರಿಸಿದ್ದ ಪಾಕಿಸ್ತಾನದ ಅಗ್ರ ಕ್ರಮಾಂಕದ ಆಟಗಾರರು ಕರಾಚಿ ಟೆಸ್ಟ್ ಮೊದಲ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ನಾಯಕ ಬಾಬರ್ ಅಜಂ ಗಳಿಸಿದ 36 ರನ್ ಪಾಕಿಸ್ತಾನದ ಪರವಾಗಿ ದಾಖಲಾದ ಅತಿ ಹೆಚ್ಚಿನ ಮೊತ್ತವಾಗಿದೆ. ಅಂತಿಮವಾಗಿ 148 ರನ್‌ಗಳಿಗೆ ಆಲೌಟ್ ಆಯಿತು.
ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ 408 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದ ಹೊರತಾಗಿಯೂ ಆಸ್ಟ್ರೇಲಿಯಾ ಫಾಲೋಆನ್ ಹೇರದೆ ಬ್ಯಾಟಿಂಗ್ ನಡೆಸಲು ಆರಂಭಿಸಿತು. 2ನೇ ಇನ್ನಿಂಗ್ಸ್‌ನಲ್ಲಿ 97 ರನ್‌ಗಳಿಸಿದ ನಂತರ ಆಸಿಸ್ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ 506 ರನ್‌ಗಳ ಗುರಿ ನಿಗದಿಪಡಿಸಿದೆ ಆಸ್ಟ್ರೇಲಿಯಾ. ಅಂತಿಮ ದಿನ ಪಾಕಿಸ್ತಾನ ಗೆಲ್ಲು 314 ರನ್‌ಗಳ ಅಗತ್ಯವಿದ್ದರೆ ಆಸ್ಟ್ರೇಲಿಯಾ ಉಳಿದ 8 ವಿಕೆಟ್‌ಗಳನ್ನು ಕಬಳಿಸಬೇಕಿದೆ.
ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಹೀಮ್ ಅಶ್ರಫ್, ಹಸನ್ ಅಲಿ, ನೌಮಾನ್ ಅಲಿ, ಶಾಹೀನ್ ಅಫ್ರಿದಿ, ಸಾಜಿದ್ ಖಾನ್
ಬೆಂಚ್: ಇಫ್ತಿಕರ್ ಅಹ್ಮದ್, ನಸೀಮ್ ಶಾ, ಮೊಹಮ್ಮದ್ ವಾಸಿಂ ಜೂನಿಯರ್, ಶಾನ್ ಮಸೂದ್, ಸೌದ್ ಶಕೀಲ್, ಹಾರಿಸ್ ರೌಫ್, ಜಾಹಿದ್ ಮಹಮೂದ್
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟೀ, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications