ಆಸ್ಟ್ರೇಲಿಯಾ vs ಪಾಕಿಸ್ತಾನ, ಅಂತಿಮ ಟೆಸ್ಟ್, ಟಾಸ್ ಗೆದ್ದ ಆಸಿಸ್ ಬ್ಯಾಟಿಂಗ್ ಆಯ್ಕೆ: Live ಸ್ಕೋರ್, ಪ್ಲೇಯಿಂಗ್ XI

ಪಾಕಿಸ್ತಾನ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಸೆಣೆಸಾಟ ನಡೆಸುತ್ತಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಆಟಗಾರರ ಬಳಗದೊಂದಿಗೆ ಕಣಕ್ಕಿಳಿದಿದೆ. ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು ಫಹೀಮ್ ಅಶ್ರಫ್ ಸ್ಥಾನದಲ್ಲಿ ವೇಗಿ ನಸೀಮ್ ಶಾ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ತಮಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳು ಕೂಡ ಡ್ರಾದಲ್ಲಿ ಅಂತ್ಯ ಕಂಡಿದೆ. ರಾವಲ್ಪಿಂಡಿಯಲ್ಲ ನಡೆದ ಮೊದಲ ಟೆಸ್ಟ್ ಪಂದ್ಯ ನೀರಸವಾಗಿ ಡ್ರಾ ಕಂಡಿದ್ದರೆ ಕರಾಚಿಯಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡ ಅದ್ಭುತ ಹೋರಾಟ ನಡೆಸಿ ಡ್ರಾ ಮಾಡಿಕೊಳ್ಳಲು ಯಶಸ್ವಿಯಾಗಿತ್ತು. ಇದೀಗ ಅಂತಿಮ ಟೆಸ್ಟ್ ಪಂದ್ಯದಲ್ಲಿ ಯಾವ ರೀತಿಯ ಫಳಿತಾಂಶ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟೀ, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಜೋಶ್ ಇಂಗ್ಲಿಸ್
ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ನಸೀಮ್ ಶಾ, ಸಾಜಿದ್ ಖಾನ್, ಹಸನ್ ಅಲಿ, ನೌಮನ್ ಅಲಿ, ಶಾಹೀನ್ ಅಫ್ರಿದಿ
ಬೆಂಚ್: ಶಾನ್ ಮಸೂದ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್ , ಹರಿಸ್ ರೌಫ್, ಮೊಹಮ್ಮದ್ ವಾಸಿಮ್ ಜೂನಿಯರ್, ಜಾಹಿದ್ ಮಹಮೂದ್, ಫಹೀಮ್ ಅಶ್ರಫ್

- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications