Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ vs ಪಾಕಿಸ್ತಾನ: ಅಂತಿಮ ಟೆಸ್ಟ್, 2ನೇ ದಿನ: ಮುಂದುವರಿದ ಆಸಿಸ್ ಹೋರಾಟ: Live ಸ್ಕೋರ್

Australia va Pakistan, 3rd test, Day 1, Live score, Playing XI details, Lahore

ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಕುತೂಹಲ ಮೂಡಿಸಿದೆ. ಮೊದಲ ದಿನದಾಟದಲ್ಲ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಎರಡೂ ತಂಡಗಳ ಗೌರವ ಹಂಚಿಕೊಂಡಿದೆ. ಆರಂಭದಲ್ಲಿಯೇ ಆಸಿಸ್ ದಾಂಡಿಗರ ವಿರುದ್ಧ ಮೇಲುಗೈ ಸಾಧಿಸಿದ್ದರು ಪಾಕಿಸ್ತಾನದ ವೇಗಿಗಳು. ನಂತರ ಆಸ್ಟ್ರೇಲಿಯಾ ತಂಡದ ಬ್ಯಾಟರ್‌ಗಳು ಉತ್ತಮ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನುಭವಿ ಉಸ್ಮಾನ್ ಖವಾಜ ಮತ್ತೊಮ್ಮೆ ಆಸಿಸ್ ಪರವಾಗಿ ಅದ್ಭುತ ಇನ್ನಿಂಗ್ಸ್ ಕಟ್ಟಿದ್ದಾರೆ. 91 ರನ್‌ಗಳಿಸಿದ ವೇಳೆ ಖವಾಜ ಔಟ್ ಆಗುವ ಮೂಲಕ ಕೇವಲ 9 ರನ್‌ಗಳಿಂದ ಶತಕ ವಂಚಿತವಾಗಿದ್ದಾರೆ.

ಇನ್ನು ಸ್ಟೀವ್ ಸ್ಮಿತ್ ಕೂಡ ಆಸಿಸ್ ಪರವಾಗಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನಡೆಸಿದ್ದಾರೆ. 59 ರನ್‌ಗಳ ಕೊಡುಗೆ ನೀಡಿ ಉಸ್ಮಾನ್ ಖವಾಜಾ ಜೊತೆಗೆ ಮಹತ್ವದ ಜೊತೆಯಾಟದಲ್ಲಿ ಭಾಗಿಯಾಗಿದ್ದರು. ಟ್ರೇವಿಸ್ ಹೆಡ್ 26 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದರೆ ನಂತರ ಕಣಕ್ಕಿಳಿದ ಕ್ಯಾಮರೂನ್ ಗ್ರೀನ್ ಹಾಗೂ ಅಲೆಕ್ಸ್ ಕ್ಯಾರಿ ಮತ್ತೊಂದು ಉತ್ತಮ ಜೊತೆಯಾಟ ನೀಡುವತ್ತ ಸಾಗುತ್ತಿದ್ದಾರೆ. ಪಾಕಿಸ್ತಾನದ ವೇಗಿಗಳಾದ ಶಾಹೀನ್ ಅಫ್ರಿದಿ ಹಾಗೂ ನಸೀಮ್ ಶಾ ತಲಾ ಎಎಡು ವಿಕೆಟ್ ಪಡೆದು ಮಿಂಚಿದ್ದಾರೆ.

Live ಸ್ಕೋರ್‌ಕಾರ್ಡ್ ಹೀಗಿದೆ:

ಇನ್ನು ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳು ಡ್ರಾದಲ್ಲಿ ಅಂತ್ಯ ಕಂಡಿದೆ. ರಾವಲ್ಪಿಂಡಿಯಲ್ಲ ನಡೆದ ಮೊದಲ ಟೆಸ್ಟ್ ಪಂದ್ಯ ನೀರಸವಾಗಿ ಡ್ರಾ ಕಂಡಿದ್ದರೆ ಕರಾಚಿಯಲ್ಲಿ ನಡೆದಿದ್ದ ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ ತಂಡ ಅದ್ಭುತ ಹೋರಾಟ ನಡೆಸಿ ಡ್ರಾ ಮಾಡಿಕೊಳ್ಳಲು ಯಶಸ್ವಿಯಾಗಿತ್ತು. ಇದೀಗ ಅಂತಿಮ ಟೆಸ್ಟ್ ಪಂದ್ಯದಲ್ಲಿ ಯಾವ ರೀತಿಯ ಫಳಿತಾಂಶ ಬರಲಿದೆ ಎಂಬುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟೀ, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಜೋಶ್ ಇಂಗ್ಲಿಸ್

ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ನಸೀಮ್ ಶಾ, ಸಾಜಿದ್ ಖಾನ್, ಹಸನ್ ಅಲಿ, ನೌಮನ್ ಅಲಿ, ಶಾಹೀನ್ ಅಫ್ರಿದಿ
ಬೆಂಚ್: ಶಾನ್ ಮಸೂದ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್ , ಹರಿಸ್ ರೌಫ್, ಮೊಹಮ್ಮದ್ ವಾಸಿಮ್ ಜೂನಿಯರ್, ಜಾಹಿದ್ ಮಹಮೂದ್, ಫಹೀಮ್ ಅಶ್ರಫ್

Story first published: Tuesday, March 22, 2022, 12:12 [IST]
Other articles published on Mar 22, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+