Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ vs ಪಾಕಿಸ್ತಾನ, ಅಂತಿಮ ಟೆಸ್ಟ್, 3ನೇ ದಿನದಾಟ, ಕುತೂಹಲ ಮೂಡಿಸಿದ ಪಂದ್ಯ: Live ಸ್ಕೋರ್

Australia va Pakistan, Final test, Day 3, Live score, Playing XI details, Lahore

ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ನಡುವಿನ ಟೆಸ್ಟ್ ಸರಣಿಯ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಲಾಹೋರ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಎರಡೂ ತಮಡಗಳು ಕೂಡ ಸಮಬಲದ ಪ್ರದರ್ಶನ ನೀಡುತ್ತಿದ್ದು ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 391 ರನ್‌ಗಳ ಬೃಹತ್ ಮೊತ್ತ ಪೇರಿಸಿ ಉತ್ತಮ ಸ್ಥಿತಿಯಲ್ಲಿದ್ದರೆ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್‌ಗೆ ಇಳಿದಿರುವ ಪಾಕಿಸ್ತಾನ ಕೂಡ ಎರಡನೇ ದಿನದಾಟದ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 90 ರನ್ ಗಳಿಸಿದ್ದು ಹೋರಾಟದ ಪ್ರದರ್ಶನ ನೀಡುವ ಮುನ್ಸೂಚನೆ ನೀಡಿದೆ.

ಮೊದಲ ದಿನದಾಟದಲ್ಲಿ ಆಸ್ಟ್ರೇಲಿಯಾ ಪರವಾಗಿ ಉಸ್ಮಾನ್ ಖವಾಜಾ ಹಾಗೂ ಸ್ಟೀವ್ ಸ್ಮಿತ್ ಅದ್ಭುತ ಪ್ರದರ್ಶನ ಆಸಿಸ್ ಪಡೆಗೆ ಶಕ್ತಿ ನೀಡಿದರೆ ಎರಡನೇ ದಿನದಾಟದಲ್ಲಿ ಕ್ಯಾಮರೂನ್ ಗ್ರೀನ್ ಹಾಗೂ ಅಲೆಕ್ಸ್ ಕ್ಯಾರಿ ಜೊತೆಯಾಟ ಹೈಲೈಟ್ಸ್ ಆಗಿತ್ತು. ಈ ಜೋಡಿ ಆಸಿಸ್ ಪರವಾಗಿ ಮತ್ತೊಂದು ಬೃಹತ್ ಜೊತೆಯಾಟ ನಿಡಿದರು. ಇಬ್ಬರಯ ಆಟಗಾರರು ಕೂಡ ತಲಾ ಅರ್ಧ ಶತಕ ದಾಖಲಿಸಿದರು. ಕ್ಯಾಮರೂನ್ ಗ್ರೀನ್ 79 ರನ್ ಗಳಿಸಿ ಔಟಾದರೆ ಅಲೆಕ್ಸ್ ಕ್ಯಾರಿ 67 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 391 ರನ್‌ಗಳನ್ನು ಗಳಿಸಿ ಆಲೌಟ್ ಆಗಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
52520

ಪಾಕಿಸ್ತಾನದ ಪರವಾಗಿ ಶಾಹೀನ್ ಅಫ್ರಿದಿ ಹಾಗೂ ನಸೀಮ್ ಶಾ ತಲಾ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು ಆಸ್ಟ್ರೇಲಿಯಾದ ಸವಾಲಿಗೆ ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ 20 ರನ್‌ಗಳಿಸುವಷ್ಟರಲ್ಲಿ ಆರಂಭಿಕ ವಿಕೆಟ್ ಕಳೆದುಕೊಂಡಿದೆ. 11 ರನ್ ಗಳಿಸಿದ್ದ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಎದುರಾಳೀ ತಂಡದ ನಾಯಕ ಪ್ಯಾಟ್ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಎರಡನೇ ವಿಕೆಟ್‌ಗೆ ಅಬ್ದುಲ್ಲಾ ಶಫೀಕ್‌ಗೆ ಜೊತೆಯಾಗಿರುವ ಅಜರ್ ಅಲಿ ಉತ್ತಮ ಮೊತ್ತಗಳಿಸುವ ಸೂಚನೆ ನೀಡಿದ್ದಾರೆ. ಮೂರನೇ ದಿನದಾಟದಲ್ಲಿ ಈ ಜೊಡಿಯಿಂದ ಯಾವ ರೀತಿಯ ಪ್ರದರ್ಶನ ಬರಲಿದೆ ಎಂಬುದು ಕುತೂಹಲ ಮೂಡಿಸಿದೆ.

ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳು ಡ್ರಾ ಫಲಿತಾಂಶದೊಂದಿಗೆ ಅಂತ್ಯ ಕಂಡಿದೆ. ರಾವಲ್ಪಿಂಡಿಯಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯ ನೀರಸವಾಗಿ ಡ್ರಾ ಕಂಡಿದ್ದರೆ ಕರಾಚಿಯಲ್ಲಿ ನಡೆದಿದ್ದ ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ ತಂಡ ಅದ್ಭುತ ಹೋರಾಟ ನಡೆಸಿ ಡ್ರಾ ಮಾಡಿಕೊಳ್ಳಲು ಯಶಸ್ವಿಯಾಗಿತ್ತು. ಇದೀಗ ಸರಣಿಯ ಕೊನೇಯ ಟೆಸ್ಟ್ ಪಂದ್ಯದಲ್ಲಿ ಯಾವ ರೀತಿಯ ಫಲಿತಾಂಶ ಬರಲಿದೆ ಎಂಬುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟೀ, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಜೋಶ್ ಇಂಗ್ಲಿಸ್

ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ನಸೀಮ್ ಶಾ, ಸಾಜಿದ್ ಖಾನ್, ಹಸನ್ ಅಲಿ, ನೌಮನ್ ಅಲಿ, ಶಾಹೀನ್ ಅಫ್ರಿದಿ
ಬೆಂಚ್: ಶಾನ್ ಮಸೂದ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್ , ಹರಿಸ್ ರೌಫ್, ಮೊಹಮ್ಮದ್ ವಾಸಿಮ್ ಜೂನಿಯರ್, ಜಾಹಿದ್ ಮಹಮೂದ್, ಫಹೀಮ್ ಅಶ್ರಫ್

Story first published: Wednesday, March 23, 2022, 11:01 [IST]
Other articles published on Mar 23, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+