Aus vs Eng ಟಿ20 ಸರಣಿ: ವೈಟ್‌ವಾಶ್ ತಪ್ಪಿಸಿಕೊಳ್ಳಲು ಆಸಿಸ್ ಸಾಹಸ: Live ಸ್ಕೋರ್, ಆಡುವ ಬಳಗ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ಇಂಗ್ಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಈ ಪಂದ್ಯಕ್ಕಾಗಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಎರಡು ತಮಡಗಳು ಕೂಡ ಕೆಲ ಬದಲಾವಣೆಗಳನ್ನು ಮಾಡಿಕೊಂಡಿದೆ. ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾಣೆ ಮಾಡಿಕೊಳ್ಳಲಾಗಿದ್ದು ಸ್ಯಾಮ್ ಕರನ್ ಹಾಘೂ ಕ್ರಿಸ್ ಜೋರ್ಡನ್‌ಗೆ ಹೊರಗುಳಿದಿದ್ದು ಕ್ರಿಸ ವೋಕ್ಸ್ ಹಾಗೂ ಮಾರ್ಕ್ ವುಡ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್‌ಗೆ ವಿಶ್ರಾಂತಿ ನೀಡಲಾಗಿದ್ದು ಸ್ಟೀವ್ ಸ್ಮಿತ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದ್ದು ಪಂದ್ಯ ಕೆಲ ಕಾಲ ಸ್ಥಗಿತಗೊಂಡಿತ್ತು. ಪಂದ್ಯ ಮತ್ತೆ ಮುಂದುವರಿದಿದ್ದು ಎರಡು ತಂಡಗಳಿಗೆ 17 ಓವರ್‌ಗಳನ್ನು ನಿಗದಿಗೊಳಿಸಲಾಗಿದೆ
Live score ಹೀಗಿದೆ

ಮುಖಭಂಗ ಅನುಭವಿಸಿರುವ ಆಸಿಸ್ ಪಡೆ
ಆಸ್ಟ್ರೇಲಿಯಾ ನೆಲದಲ್ಲಿಯೇ ಈ ಸರಣಿ ನಡೆಯುತ್ತಿದ್ದರೂ ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್‌ಗ ಶರಣಾಗಿದೆ. ಹೀಗಾಗಿ ಈ ಸರಣಿಯನ್ನು ಇಂಗ್ಲೆಂಡ್ ತಂಡಕ್ಕೆ ಈಗಾಗಲೇ ಒಪ್ಪಿಸಿರುವ ಆಸ್ಟ್ರೇಲಿಯಾ ಸರಣಿಯಲ್ಲಿ ವೈಟ್‌ವಾಶ್ ಮುಖಭಂಗದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ವಿಶ್ವಕಪ್‌ನ ಹೊಸ್ತಿಲಲ್ಲಿ ತವರಿನಲ್ಲಿ ನಡೆದ ಸರಣಿಯಲ್ಲಿಯೇ ಹಿನ್ನಡೆ ಅನುಭವಿಸಿರುವುದು ಆಸಿಸ್ ಪಾಲಿಗೆ ಬಿಸಿ ತುಪ್ಪವಾಗಿದ್ದು ಅಂತಿಮ ಪಂದ್ಯವನ್ನಾದರೂ ಗೆಲ್ಲುವ ಒತ್ತಡದಲ್ಲಿದೆ.

ಆಸ್ಟ್ರೇಲಿಯಾ ಆಡುವ ಬಳಗ
ಆಸ್ಟ್ರೇಲಿಯಾ: ಆರನ್ ಫಿಂಚ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್
ಬೆಂಚ್: ಡೇವಿಡ್ ವಾರ್ನರ್, ಕೇನ್ ರಿಚರ್ಡ್ಸನ್, ಸೀನ್ ಅಬಾಟ್, ಆಷ್ಟನ್ ಅಗರ್, ಜೋಶ್ ಇಂಗ್ಲಿಸ್, ಕ್ಯಾಮರೂನ್ ಗ್ರೀನ್, ಡೇನಿಯಲ್ ಸ್ಯಾಮ್ಸ್

ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ & ವಿಕಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್,
ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಆದಿಲ್ ರಶೀದ್, ರೀಸ್ ಟೋಪ್ಲಿ
ಬೆಂಚ್: ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್ಸ್ಟೋನ್, ಫಿಲಿಪ್ ಸಾಲ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications