ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ದರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸಿದೆ. ಟಿ20 ವಿಶ್ವಕಪ್ ಗೆದ್ದ ನಾಲ್ಕೇ ದಿನದ ಅಂತರದಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಅನುಭವಿಸಿದ ಈ ದೊಡ್ಡ ಸೋಲು ಇಂಗ್ಲೆಂಡ್ ತಂಡಕ್ಕೆ ಸಹಜವಾಗಿಯೇ ಮುಜುಗರವನ್ನುಂಟು ಮಾಡಿದೆ. ಆದರೆ ಈ ಸೋಲಿನಿಂದಾಗಿ ನಾವು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ ಎಂದು ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಹೇಳಿಕೆ ನೀಡಿದ್ದು ತಂಡದ ಹೋರಾಟದಿಂದಾಗಿ ಖುಷಿ ನೀಡಿದೆ ಎಂದಿದ್ದಾರೆ.
ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 5 ವಿಕೆಟ್‌ಗೆ 118 ರನ್‌ಗಳಿಸಿ ಸಂಕಷ್ಟದ ಪರಿಸ್ಥಿತಿಯಿಂದ ಚೇತರಿಸಿಕೊಂಡು ಅಂತಿಮವಾಗಿ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 287 ರನ್ ಗಳಿಸಿತು. ಡೇವಿಡ್ ಮಲನ್ ಕೆಳ ಕ್ರಮಾಂಕದ ಬ್ಯಾಟರ್ ನೆರವಿನೊಂದಿಗೆ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಸವಾಲಿನ ಮೊತ್ತಕ್ಕೆ ಕಾರಣವಾದರು. ಏಕಾಂಗಿ ಹೋರಾಟ ನಡೆಸಿದ ಮಲನ್ 128 ಎಸೆತಗಳಲ್ಲಿ 134 ರನ್ ಗಳಿಸಿದ್ದರು.
IPL 2023: ನಿವೃತ್ತಿ ಘೋಷಿಸಿದ ಪೊಲಾರ್ಡ್ಗೆ ಸಚಿನ್, ರೋಹಿತ್ ಹೇಳಿದ್ದೇನು?
ಆದರೆ ಆಸ್ಟ್ರೇಲಿಯಾ ತಂಡದ ಅಗ್ರ ಕ್ರಮಾಂಕದ ಆಟಗಾರರ ಅಬ್ಬರದ ಪ್ರದರ್ಶನದ ಕಾರಣದಿಂದಾಗಿ ಇಂಗ್ಲೆಂಡ್ ನೀಡಿದ 289 ರನ್‌ಗಳ ಗುರಿ ಆಸಿಸ್ ಪಾಲಿಗೆ ಸವಾಲೆನಿಸಲಿಲ್ಲ. ಇಂಗ್ಲೆಂಡ್ ಬೌಲಿಂಗ್ ದಾಳಿಯ ವಿರುದ್ಧ ಸಿಡಿದ ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಭರ್ಜರಿಯಾಗಿ ಬ್ಯಾಟ್ ಬೀಸಿ ತಲಾ ಅರ್ಧ ಶತಕದ ಕೊಡುಗೆ ನೀಡಿದರು. ಹೀಗಾಗಿ 6 ವಿಕೆಟ್‌ಗಳ ಅಂತರದಿಂದ ಆಸ್ಟ್ರೇಲಿಯಾ ತಂಡ ಭರ್ಜರಿ ಗೆಲುವು ಸಾಧಿಸಿದೆ.
ಇಂಗ್ಲೆಂಡ್ ಏಕದಿನ ವಿಶ್ವಕಪ್ ಉಳಿಸಿಕೊಳ್ಳಲು ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರಾ ಬೆನ್ ಸ್ಟೋಕ್ಸ್!
ಈ ಪಂದ್ಯದ ಬಳಿಕ ಮಾತನಾಡಿದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಈ ಫಲಿತಾಂಶದಿಂದ ತಲೆಕೆಡಿಸಿಕೊಳ್ಳುವುದಿಲ್ಲ. ಬದಲಾಗಿ ತಂಡ ನೀಡಿದ ಹೋರಾಟದ ಪ್ರದರ್ಶನಕ್ಕೆ ಸಂತಸವಾಗುತ್ತದೆ ಎಂದಿದ್ದಾರೆ "ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಈ ಪಂದ್ಯದಲ್ಲಿ ನಾವು ನೀಡಿದ ಹೋರಾಟ ಪ್ರಮುಖವಾಗುತ್ತದೆ. ಡೇವಿಡ್ ಮಲಾನ್ ಅವರದ್ದು ಅದ್ಭುತವಾದ ಇನ್ನಿಂಗ್ಸ್. ಒಂದು ಹಂತದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದರೂ ಬಳಿಕ ಇಷ್ಟು ಗುರಿ ನೀಡಲು ಸಾಧ್ಯವಾಗಿದ್ದು ಖುಷಿ ನೀಡುತ್ತದೆ. ಮೈದಾನದಲ್ಲಿ ನಾವು ಅಪಾಯಗಳನ್ನು ಮೈಮೇಲೆ ಎಳೆದುಕೊಂಡೆವು ಮತ್ತು ಎಲ್ಲರೂ ಅದಕ್ಕೆ ಸ್ಪಂದಿಸಿದರು" ಎಂದು ಬಟ್ಲರ್ ಹೇಳಿದ್ದಾರೆ.
ಆತ ಟಿ20 ಕ್ರಿಕೆಟ್ನ ಸೂಪರ್ ಸ್ಟಾರ್ ಎಂದು ಕೇನ್ ವಿಲಿಯಮ್ಸನ್ ಹೊಗಳಿದ್ದು ಯಾರನ್ನು?
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೈನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ
ಬೆಂಚ್: ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಶಾನ್ ಅಬಾಟ್
ಇಂಗ್ಲೆಂಡ್ ಪ್ಲೇಯಿಂಗ್ XI: ಜೇಸನ್ ರಾಯ್, ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಜೇಮ್ಸ್ ವಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಡಾಸನ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ಲ್ಯೂಕ್ ವುಡ್, ಆಲಿ ಸ್ಟೋನ್
ಬೆಂಚ್: ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್