For Quick Alerts
ALLOW NOTIFICATIONS  
For Daily Alerts
 

Ind vs Aus: ಸ್ಟೀವ್ ಸ್ಮಿತ್ ಪಡೆದ ಅಮೋಘ ಕ್ಯಾಚ್‌ಗೆ ಅಭಿಮಾನಿಗಳು ಸ್ತಬ್ಧ: ವಿಡಿಯೋ

Australia vs India 3rd Test: Steve Smith takes unbelievable catch to out Cheteshwar Pujara stuns cricket world

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಕಷ್ಟದಲ್ಲಿದೆ. ಬ್ಯಾಟಿಂಗ್‌ನಲ್ಲಿ ಎರಡು ಇನ್ನಿಂಗ್ಸ್‌ನಲ್ಲಿಯೂ ಕಳಪೆ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಆಸ್ಟ್ರೇಲಿಯಾಗೆ ಸುಲಭ ಗುರಿ ನೀಡಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಪರವಾಗಿ ಚೇತೇಶ್ವರ್ ಪೂಜಾರ ಮಾತ್ರವೇ ಹೋರಾಟದ ಪ್ರದರ್ಶನ ನೀಡಿದ್ದು ಅರ್ಧ ಶತಕ ಸಿಡಿಸಿದರು.

ಆದರೆ ಚೇತೇಶ್ವರ್ ಪೂಜಾರ ಅರ್ಧ ಶತಕ ಸಿಡಿಸಿದ ಬಳಿಕ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಪಡೆದ ಅಮೋಘ ಕ್ಯಾಚ್‌ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಟೀಮ್ ಇಂಡಿಯಾದ ಹೋರಾಟ ಬಹುತೇಕ ಅಂತ್ಯವಾಯಿತು. ನಾಥನ್ ಲಿಯಾನ್ ಎಸೆದ ಎಸೆತದಲ್ಲಿ ಚೇತೇಶ್ವರ್ ಪೂಜಾರ ವಿಕೆಟ್ ಕಳೆದುಕೊಂಡಿದ್ದಾರೆ.

ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗ ಮೊದಲ ಇನ್ನಿಂಗ್ಸ್‌ನಲ್ಲಿ ಕುಸಿತ ಕಂಡಂತೆಯೇ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಕುಸಿತ ಕಾಣುತ್ತಾ ಸಾಗಿತ್ತು. ಆದರೆ ಒಂದು ತುದಿಯಲ್ಲಿ ಚೇತೇಶ್ವರ್ ಪೂಜಾರ ಗಟ್ಟಿಯಾಗಿ ನೆಲೆಯೂರಿದ್ದರು. 142 ಎಸೆತಗಳನ್ನು ಎದುರಿಸಿದ್ದ ಚೇತೇಶ್ವರ್ ಪೂಜಾರ 59 ರನ್‌ಗಳಿಸಿದ್ದಾರೆ. ಇದರಲ್ಲಿ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿ ತಂಡಕ್ಕೆ ನೆಲವಾದರು. ಆದರೆ ಇನ್ನಿಂಗ್ಸ್‌ನ 57ನೇ ಓವರ್‌ನಲ್ಲಿ ಪೂಜಾರ ನಾಥನ್ ಲಿಯಾನ್ ಎಸೆತದಲ್ಲಿ ಬಲಿಯಾದರು.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ನಾಥನ್ ಲಿಯಾನ್ ಭಾರತ ತಂಡಕ್ಕೆ ಅಕ್ಷರಶಃ ಸಿಂಹಸ್ವಪ್ನವಾಗಿ ಕಾಡಿದ್ದಾರೆ. ಭಾರತದ ಬರೊಬ್ಬರಿ 8 ಆಟಗಾರರು ಲಿಯಾನ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಸೇರಿಕೊಂಡರು. ಈ ಮೂಲಕ ನಾಥನ್ ಲಿಯಾನ್ ಈ ಪಂದ್ಯದಲ್ಲಿ ಒಟ್ಟು 11 ವಿಕೆಟ್ ಸಂಪಾದಿಸುವಲ್ಲಿ ಯಶಸ್ವಿಯಾದರು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಗಳಿಸಿದ್ದು ಕೇವಲ 109 ರನ್ ಮಾತ್ರ. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 197 ರನ್‌ಗಳಿಸಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡಕ್ಕೆ ತಿರುಗೇಟು ನೀಡಲಿದೆ ಎಂದು ಭಾವಿಸಿದ್ದ ಅಭಿಮಾನಿಗಳಿಗೆ ಭಾರತದ ಬ್ಯಾಟಿಂಗ್ ವಿಭಾಗ ಮತ್ತೊಮ್ಮೆ ನಿರಾಸೆ ಮಾಡಿದ್ದು ಆಸ್ಟ್ರೇಲಿಯಾ ತಂಡದ ಗೆಲುವಿಗೆ 75 ರನ್‌ಗಳ ಸುಲಭ ಗುರಿ ನಿಗದಿಪಡಿಸಿದೆ.

ಇತ್ತಂಡಗಳ ಸ್ಕ್ವಾಡ್
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (WK), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಕುಲದೀಪ್ ಯಾದವ್, ಸೂರ್ಯಕುಮಾರ್ ಯಾದವ್, ಜಯದೇವ್ ಉನದ್ಕತ್

ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (WK), ಮಿಚೆಲ್ ಸ್ಟಾರ್ಕ್, ಅಥಾನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕನ್ನೇಮನ್
ಬೆಂಚ್: ಮಿಚೆಲ್ ಸ್ವೆಪ್ಸನ್, ಮ್ಯಾಟ್ ರೆನ್ಶಾ, ಸ್ಕಾಟ್ ಬೋಲ್ಯಾಂಡ್, ಲ್ಯಾನ್ಸ್ ಮೋರಿಸ್

Story first published: Thursday, March 2, 2023, 17:50 [IST]
Other articles published on Mar 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+