ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ರೋಹಿತ್ ಶರ್ಮಾ ಹೆಸರಿಗೆ ಕೆಟ್ಟ ದಾಖಲೆ

Australia vs India: 6 Times Nathan Lyon Dismissing Rohit Sharma in Tests

ಬ್ರಿಸ್ಬೇನ್: ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಹೆಸರಿಗೆ ಕೆಟ್ಟ ದಾಖಲೆಯೊಂದು ಸೇರ್ಪಡೆಯಾಗಿದೆ. ಶನಿವಾರ (ಜನವರಿ 16) ನಡೆದ ಭಾರತ-ಆಸ್ಟ್ರೇಲಿಯಾ ನಾಲ್ಕನೇ ಮತ್ತು ಕೊನೇಯ ಟೆಸ್ಟ್‌ನಲ್ಲಿ ಶರ್ಮಾ ಬೇಡದ ದಾಖಲೆಗೆ ಕಾರಣರಾಗಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಒಬ್ಬನೇ ಬೌಲರ್‌ಗೆ ಹೆಚ್ಚು ಬಾರಿ ವಿಕೆಟ್ ಒಪ್ಪಿಸಿದ ದಾಖಲೆ ಶರ್ಮಾ ನಿರ್ಮಿಸಿದ್ದಾರೆ.

ಆಸ್ಟ್ರೇಲಿಯಾ ಮಾಧ್ಯಮಗಳ ಅಸಲಿಯತ್ತು ಬಿಚ್ಚಿಟ್ಟ ಕೆವಿನ್ ಪೀಟರ್ಸನ್!ಆಸ್ಟ್ರೇಲಿಯಾ ಮಾಧ್ಯಮಗಳ ಅಸಲಿಯತ್ತು ಬಿಚ್ಚಿಟ್ಟ ಕೆವಿನ್ ಪೀಟರ್ಸನ್!

ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 74 ಎಸೆತಗಳಲ್ಲಿ 44 ರನ್ ಬಾರಿಸಿ ಆಸೀಸ್ ಸ್ಪಿನ್ನರ್ ನೇಥನ್ ಲಿಯಾನ್ ಓವರ್‌ನಲ್ಲಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ಶರ್ಮಾ ಹೆಸರಿನಲ್ಲಿ ಬೇಡದ ದಾಖಲೆ ನಿರ್ಮಾಣವಾಗಿದೆ.

ನೀವೂ ಕೋಟ್ಯಾಧಿಪತಿಯಾಗಬಹುದು; ಹಣ ಗಳಿಸಲು ಇಲ್ಲಿದೆ ಸುಲಭ ದಾರಿ!ನೀವೂ ಕೋಟ್ಯಾಧಿಪತಿಯಾಗಬಹುದು; ಹಣ ಗಳಿಸಲು ಇಲ್ಲಿದೆ ಸುಲಭ ದಾರಿ!

ಟೆಸ್ಟ್‌ ಕ್ರಿಕೆಟ್‌ನಲ್ಲಿ ಶರ್ಮಾ ಹೆಚ್ಚು ಬಾರಿ ವಿಕೆಟ್‌ ಒಪ್ಪಿಸಿದ ಅಂಕಿ-ಅಂಶಗಳನ್ನು ಗಮನಿಸಿದರೆ ಶರ್ಮಾ ವಿಕೆಟ್ ಹೆಚ್ಚು ಸಾರಿ ಕೆಡವಿದ್ದು ನೇಥನ್ ಅವರೇ. ಟೆಸ್ಟ್‌ನಲ್ಲಿ ಲಿಯಾನ್ ಅವರ 258 ಎಸೆತಗಳನ್ನು ಎದುರಿಸಿರುವ ಹಿಟ್‌ಮ್ಯಾನ್‌ ರೋಹಿತ್ ಒಟ್ಟು 6 ಸಾರಿ ವಿಕೆಟ್ ನೀಡಿದ್ದಾರೆ.

ಐಪಿಎಲ್ ಹರಾಜಿಗೆ ಅರ್ಜುನ್ ತೆಂಡೂಲ್ಕರ್ ಅರ್ಹ, ಎಂಐ ಆರಿಸುತ್ತಾ?ಐಪಿಎಲ್ ಹರಾಜಿಗೆ ಅರ್ಜುನ್ ತೆಂಡೂಲ್ಕರ್ ಅರ್ಹ, ಎಂಐ ಆರಿಸುತ್ತಾ?

ನೇಥನ್ ಲಿಯಾನ್ ಬಿಟ್ಟರೆ ಟೆಸ್ಟ್‌ನಲ್ಲಿ ರೋಹಿತ್ ಅವರನ್ನು ಹೆಚ್ಚು ಬಾರಿ ಪೆವಿಲಿಯನ್‌ಗೆ ಅಟ್ಟಿದ್ದೆಂದರೆ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೋ ರಬಾಡ. ರಬಾಡ ಒಟ್ಟು 204 ಎಸೆತಗಳಲ್ಲಿ ಶರ್ಮಾ ಅವರನ್ನು 5 ಬಾರಿ ಔಟ್ ಮಾಡಿದ್ದಾರೆ. ಅದು ಬಿಟ್ಟರೆ ದಕ್ಷಿಣ ಆಫ್ರಿಕಾದ ಮತ್ತೊಬ್ಬ ವೇಗಿ ವರ್ನಾನ್ ಫಿಲಾಂಡರ್ 131 ಎಸೆತಗಳಲ್ಲಿ 3 ಸಾರಿ ಔಟ್ ಮಾಡಿದ್ದಾರೆ.

Story first published: Monday, January 18, 2021, 14:12 [IST]
Other articles published on Jan 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X