ಬಾಕ್ಸಿಂಗ್ ಡೇ ಟೆಸ್ಟ್ ವೇಳೆ 30,000 ಅಭಿಮಾನಿಗಳಿಗೆ ವೀಕ್ಷಿಸಲು ಅನುಮತಿ

ಮೆಲ್ಬರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ವೇಳೆ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಪಂದ್ಯ ವೀಕ್ಷಿಸಲು ದಿನಕ್ಕೆ 30,000 ಕ್ರಿಕೆಟ್ ಅಭಿಮಾನಿಗಳಿಗೆ ಆಸ್ಟ್ರೇಲಿಯಾ ಅನುಮತಿ ನೀಡಿದೆ. ಆಸ್ಟ್ರೇಲಿಯಾದಲ್ಲಿ ಜನ ಸಂದಣಿಗೆ ಸಂಬಂಧಿಸಿದ ನಿರ್ಬಂಧವನ್ನು ಗುರುವಾರ (ಡಿಸೆಣಬರ್ 10) ಸಡಿಲಿಸಿರುವುದರಿಂದ ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅನುಮತಿಸಲಾಗಿದೆ.
ಭಾರತ-ಆಸ್ಟ್ರೇಲಿಯಾ ಪಂದ್ಯಗಳಿಗೆ ಆರಂಭದಲ್ಲಿ 25,000 ಅಭಿಮಾನಿಗಳಿಗೆ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ಆದರೆ ಕಳೆದ 41 ದಿನಗಳಿಂದ ದಕ್ಷಿಣ ರಾಜ್ಯದಲ್ಲಿ ಒಂದೇ ಒಂದು ಹೊಸ ಕೋವಿಡ್-19 ಪ್ರಕರಣ ಕಾಣಿಸಿಕೊಂಡಿಲ್ಲ ಎಂದು ವಿಕ್ಟೋರಿಯಾ ಕ್ರೀಡಾ ಸಚಿವ ಮಾರ್ಟಿನ್ ಪಕುಲಾ ಖಾತರಿಪಡಿಸಿರುವುದರಿಂದ ವೀಕ್ಷಕರ ಸಂಖ್ಯೆಯನ್ನು ಏರಿಸಲಾಗಿದೆ.
ಭಾರತ ಕ್ರಿಕೆಟ್ ತಂಡದ ಆಸ್ಟ್ರೇಲಿಯಾ ಪ್ರವಾಸ ಸರಣಿಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ದ್ವಿತೀಯ ಟೆಸ್ಟ್ ಪಂದ್ಯ ನಡೆಯಲಿರುವ ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂಗೆ ಬಹುದಿನಗಳ ಬಳಿಕ ಅಭಿಮಾನಿಗಳು ಪ್ರವೇಶಿಸಲಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಈ ಸ್ಟೇಡಿಯಂನಲ್ಲಿ ನಡೆದಿದ್ದ ಮಹಿಳಾ ವಿಶ್ವಕಪ್ ಫೈನಲ್ ವೇಳೆ 86,000 ಅಭಿಮಾನಿಗಳು ಪಂದ್ಯ ವೀಕ್ಷಿಸಿದ್ದರು.
ಪ್ರವಾಸಿ ಭಾರತ ತಂಡ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ 2-1ರ ಜಯ ದಾಖಲಿಸಿತ್ತು. ಅದಕ್ಕೂ ಮೊದಲು ನಡೆದ ಏಕದಿನ ಸರಣಿ 2-1ರಿಂದ ಆಸ್ಟ್ರೇಲಿಯಾ ವಶವಾಗಿತ್ತು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿ ಕುತೂಹಲ ಮೂಡಿಸಿದೆ. ಕಳೆದ ವರ್ಷ ಕೊಹ್ಲಿ ಪಡೆ ಈ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications