ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಸರಣಿ ಗೆದ್ದ ಟೀಮ್ ಇಂಡಿಯಾಕ್ಕೆ ಬಿಸಿಸಿಐನಿಂದ ಭರ್ಜರಿ ಗಿಫ್ಟ್‌

Australia vs India: BCCI announces Rs 5 crore as team bonus

ಬ್ರಿಸ್ಬೇನ್: ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ಮಂಗಳವಾರ (ಜನವರಿ 19) ಮುಕ್ತಾಯಗೊಂಡ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಮತ್ತು ಕೊನೇಯ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾ 3 ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಟೆಸ್ಟ್‌ ಸರಣಿ 2-1ರಿಂದ ಭಾರತದ ವಶವಾಗಿದೆ.

ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್

ತೀವ್ರ ಕುತೂಹಲ ಮೂಡಿಸಿದ್ದ ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ಗೆಲ್ಲುತ್ತಿರುವುದು ಇದು ಸತತ ಎರಡನೇ ಬಾರಿ. 2018-19ರಲ್ಲೂ ವಿರಾಟ್ ಕೊಹ್ಲಿ ಪಡೆ ಚೊಚ್ಚಲ ಬಾರಿಗೆ ಇದೇ ಟೆಸ್ಟ್ ಸರಣಿಯನ್ನು 2-1ರಿಂದ ಗೆದ್ದು ಇತಿಹಾಸ ನಿರ್ಮಿಸಿತ್ತು. ಈ ಸಾರಿ ಅಜಿಂಕ್ಯ ರಹಾನೆ ನಾಯಕತ್ವದ ಭಾರತ ತಂಡ ಈ ಸಾಧನೆ ಮಾಡಿದೆ.

ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯದ ಸ್ಕೋರ್‌ಕಾರ್ಡ್ ಇಲ್ಲಿದೆ

1
48443

ಐತಿಹಾಸಿಕ ಸಾಧನೆಯೊಂದಿಗೆ ಹಿರಿಮೆಗೆ ಕಾರಣವಾಗಿರುವ ಟೀಮ್ ಇಂಡಿಯಾಕ್ಕೆ ಬಿಸಿಸಿಐ 5 ಕೋ.ರೂ. ಬೋನಸ್ ಘೋಷಿಸಿದೆ. 'ಟೀಮ್ ಬೋನಸ್ ಆಗಿ ಭಾರತ ತಂಡಕ್ಕೆ ಬಿಸಿಸಿಐ 5 ಕೋ.ರೂ. ಘೋಷಿಸುತ್ತಿದೆ. ಇದು ಭಾರತೀಯ ಕ್ರಿಕೆಟ್‌ಗೆ ವಿಶೇಷ ಕ್ಷಣ. ಟೀಮ್ ಇಂಡಿಯಾದಿಂದ ಅದ್ಭುತ ಪ್ರದರ್ಶನ,' ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಟ್ವೀಟ್ ಮಾಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಪ್ರಧಾನಿ ಮೋದಿಯಿಂದ ಶುಭಾಶಯಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಪ್ರಧಾನಿ ಮೋದಿಯಿಂದ ಶುಭಾಶಯ

ರೋಚಕ ಹಂತಕ್ಕೆ ತಲುಪಿದ್ದ ನಾಲ್ಕನೇ ಪಂದ್ಯದಲ್ಲಿ, ಮೊದಲನೇ ಇನ್ನಿಂಗ್ಸ್‌ನಲ್ಲಿ ವಾಷಿಂಗ್ಟನ್ ಸುಂದರ್ 62, ಶಾರ್ದೂಲ್ ಠಾಕೂರ್ 67, ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶುಬ್ಮನ್ ಗಿಲ್ 91, ಚೇತೇಶ್ವರ ಪೂಜಾರ 56, ರಿಷಭ್ ಪಂತ್ 89 ರನ್‌, ಮೊಹಮ್ಮದ್ ಸಿರಾಜ್ 5 ವಿಕೆಟ್ ಮುರಿದು ತಂಡದ ಗೆಲುವಿಗೆ ಕಾರಣರಾಗಿದ್ದರು.

Story first published: Tuesday, January 19, 2021, 16:30 [IST]
Other articles published on Jan 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X