ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸೀಸ್ ವಿರುದ್ಧದ 3ನೇ ಟೆಸ್ಟ್‌ಗೆ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಗಳು ಪ್ರಕಟ!

Australia vs India: Changes in Indias playing XI for The Third Test match against Australia

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಕುತೂಹಲಕಾರಿ ಟೆಸ್ಟ್ ಸರಣಿ ನಡೆಯುತ್ತಿದೆ. ಆರಂಭಿಕ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ 8 ವಿಕೆಟ್‌ಗಳ ಸುಲಭ ಜಯ ಗಳಿಸಿದ್ದರೆ, ದ್ವಿತೀಯ ಪಂದ್ಯದಲ್ಲಿ 8 ವಿಕೆಟ್ ಸುಲಭ ಗೆಲುವು ದಾಖಲಿಸುವುದರೊಂದಿಗೆ ಟೀಮ್ ಇಂಡಿಯಾ ಮೊದಲ ಪಂದ್ಯದ ಸೋಲಿಗೆ ಮುಯ್ಯಿ ತೀರಿಸಿಕೊಂಡಿತ್ತು. ಮೂರನೇ ಪಂದ್ಯ ಜನವರಿ 7ರ ಗುರುವಾರ ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ಆರಂಭಗೊಳ್ಳಲಿದೆ.

ಐತಿಹಾಸಿಕ ದಾಖಲೆ ನಿರ್ಮಿಸಿದ ಪಾಕಿಸ್ತಾನ ಕ್ರಿಕೆಟರ್ ಫವಾದ್ ಆಲಂ!ಐತಿಹಾಸಿಕ ದಾಖಲೆ ನಿರ್ಮಿಸಿದ ಪಾಕಿಸ್ತಾನ ಕ್ರಿಕೆಟರ್ ಫವಾದ್ ಆಲಂ!

ನಾಲ್ಕು ಪಂದ್ಯಗಳ ಈ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯೀಗ 1-1ರಿಂದ ಸಮಬಲಗೊಂಡಿರುವುದರಿಂದ ಮೂರನೇ ಪಂದ್ಯಕ್ಕೆ ಭಾರತ-ಆಸ್ಟ್ರೇಲಿಯಾ ಎರಡೂ ತಂಡಗಳು ಪ್ರಮುಖ ಬದಲಾವಣೆಗಳನ್ನು ಮಾಡಿಕೊಂಡಿವೆ.

ಪತ್ನಿ ರಿತಿಕಾಗೆ ಕಿರಿಕಿರಿ ನೀಡುವ ರೋಹಿತ್‌ ಶರ್ಮಾರ 2 ಕೆಟ್ಟ ಅಭ್ಯಾಸಗಳಿವು!ಪತ್ನಿ ರಿತಿಕಾಗೆ ಕಿರಿಕಿರಿ ನೀಡುವ ರೋಹಿತ್‌ ಶರ್ಮಾರ 2 ಕೆಟ್ಟ ಅಭ್ಯಾಸಗಳಿವು!

ಸರಣಿ ಗೆಲ್ಲುವತ್ತ ಕಣ್ಣಿಟ್ಟಿರುವ ಅಜಿಂಕ್ಯ ರಹಾನೆ ಪಡೆ 3ನೇ ಟೆಸ್ಟ್‌ಗೆ ಪ್ಲೇಯಿಂಗ್ XIನಲ್ಲಿ ಗಮನಾರ್ಹ ಬದಲಾವಣೆ ಮಾಡಿಕೊಂಡಿರುವುದು ಘೋಷಿಸಲ್ಪಟ್ಟಿದೆ.

ಆಸ್ಟ್ರೇಲಿಯಾ ತಂಡದ ಚೇಂಜಸ್‌

ಆಸ್ಟ್ರೇಲಿಯಾ ತಂಡದ ಚೇಂಜಸ್‌

* ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡಕ್ಕೆ ಪ್ರಮುಖ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಬರಲಿದ್ದಾರೆ. ಜೊತೆಗೆ ಯುವ ಬ್ಯಾಟ್ಸ್‌ಮನ್ ವಿಲ್ ಪುಕೋವ್‌ಸ್ಕಿ ಮತ್ತು ಮಧ್ಯಮ ವೇಗಿ ಸೀನ್ ಅಬಾಟ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.
* ಮೂರನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟಗೊಂಡಿದ್ದು, 18 ಜನರ ತಂಡದಿಂದ ಆರಂಭಿಕ ಬ್ಯಾಟ್ಸ್‌ಮನ್ ಜೋ ಬರ್ನ್ಸ್ ಅವರನ್ನು ಹೊರಗಿಡಲಾಗಿದೆ.

3ನೇ ಟೆಸ್ಟ್‌ ಆರಂಭದ ಸಮಯ

3ನೇ ಟೆಸ್ಟ್‌ ಆರಂಭದ ಸಮಯ

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಟೆಸ್ಟ್‌ ಪಂದ್ಯ ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಜನವರಿ 7ರಂದು ಭಾರತೀಯ ಕಾಲಮಾನ 5:00 AMಗೆ ಆರಂಭವಾಗಲಿದೆ. ಕೊನೇ ಟೆಸ್ಟ್‌ ಪಂದ್ಯ ಜನವರಿ 15ರಂದು ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ಆರಂಭಗೊಳ್ಳಲಿದೆ.

ಭಾರತದಲ್ಲಿ ಮುಖ್ಯ ಬದಲಾವಣೆಗಳು

ಭಾರತದಲ್ಲಿ ಮುಖ್ಯ ಬದಲಾವಣೆಗಳು

* ಟೀಮ್ ಇಂಡಿಯಾದ ಪ್ರಮುಖ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಅವರು ಬುಧವಾರ (ಡಿಸೆಂಬರ್ 30) ಭಾರತ ತಂಡವನ್ನು ಸೇರಿಕೊಂಡಿದ್ದಾರೆ. 3ನೇ ಟೆಸ್ಟ್‌ನಲ್ಲಿ ರೋಹಿತ್ ಕಣಕ್ಕಿಳಿಯಲಿದ್ದು, ಮತ್ತೊಬ್ಬ ಆರಂಭಿಕ ಬ್ಯಾಟ್ಸ್‌ಮನ್‌ ಮಯಾಂಕ್ ಅಗರ್ವಾಲ್ ಪ್ಲೇಯಿಂಗ್‌ XIನಿಂದ ಹೊರ ಬಿದ್ದಿದ್ದಾರೆ.
* 3ನೇ ಟೆಸ್ಟ್‌ಗಾಗಿ ಭಾರತದ ಪ್ಲೇಯಿಂಗ್‌ XIನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಹನುಮ ವಿಹಾರಿ ಸ್ಥಾನವನ್ನು ಕನ್ನಡಿಗ ಕೆಎಲ್ ರಾಹುಲ್ ಆವರಿಸಿಕೊಂಡಿದ್ದಾರೆ.
* ಗಾಯಗೊಂಡಿರುವ ವೇಗಿ ಉಮೇಶ್ ಯಾದವ್ ಬದಲಿಗೆ ವೇಗಿ ಟಿ ನಟರಾಜನ್ ಆಡಲಿದ್ದಾರೆ. ನಟರಾಜನ್ ಅವರು 3ನೇ ಪಂದ್ಯದ ಮೂಲಕ ಟೆಸ್ಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.

ಆಸ್ಟ್ರೇಲಿಯಾ ಪ್ರಕಟಿತ ತಂಡ

ಆಸ್ಟ್ರೇಲಿಯಾ ಪ್ರಕಟಿತ ತಂಡ

ಟಿಮ್ ಪೈನ್ (ಸಿ), ಸೀನ್ ಅಬಾಟ್, ಪ್ಯಾಟ್ ಕಮ್ಮಿನ್ಸ್, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಝಲ್ವುಡ್, ಟ್ರಾವಿಸ್ ಹೆಡ್, ಮೊಯಿಸಸ್ ಹೆನ್ರಿಕ್ಸ್, ಮಾರ್ನಸ್ ಲ್ಯಾಬುಶೇನ್, ನೇಥನ್ ಲಿಯಾನ್, ಮೈಕೆಲ್ ನೇಸರ್, ಜೇಮ್ಸ್ ಪ್ಯಾಟಿನ್ಸನ್, ವಿಲ್ ಪುಕೊವ್ಸ್ಕಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್.

Story first published: Thursday, December 31, 2020, 10:13 [IST]
Other articles published on Dec 31, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X