3ನೇ ಟೆಸ್ಟ್‌ಗೆ ಆಸೀಸ್ ತಂಡ ಪ್ರಕಟ, ಭಾರತದಲ್ಲೂ ಪ್ರಮುಖ ಬದಲಾವಣೆ!

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ರೋಚಕವೆನಿಸುತ್ತಾ ಸಾಗುತ್ತಿದೆ. ಆರಂಭಿಕ ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್‌ಗಳಿಂದ ಗೆದ್ದಿತ್ತು. ಆರಂಭಿಕ ಸೋಲಿಗೆ ತಿರುಗೇಟು ನೀಡಿರುವ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್‌ನಲ್ಲಿ 8 ವಿಕೆಟ್‌ಗಳಿಂದ ಗೆಲುವನ್ನಾಚರಿಸಿತ್ತು. ಹೀಗಾಗಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯೀಗ 1-1ರಿಂದ ಸಮಬಲಗೊಂಡಿದೆ. ಮೂರನೇ ಪಂದ್ಯ ಜನವರಿ 7ರಂದು ಸಿಡ್ನಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಆರಂಭಿಕ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಲ್ಲಿ ಬದಲಾವಣೆಗಳಾಗಿದ್ದವು. ಮುಖ್ಯವಾಗಿ ದ್ವಿತೀಯ ಟೆಸ್ಟ್‌ನಲ್ಲಿ ಭಾರತ ತಂಡದಲ್ಲಿ ದೊಡ್ಡ ಬದಲಾವಣೆಯಾಗಿತ್ತು. ಮೂರನೇ ಟೆಸ್ಟ್‌ನಲ್ಲೂ ಎರಡೂ ತಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ.
ಭಾರತ ಮತ್ತು ಆಸ್ಟ್ರೇಲಿಯಾ ಮೂರನೇ ಟೆಸ್ಟ್‌ನಲ್ಲಿ ಎರಡೂ ತಂಡಗಳಲ್ಲಾಗಬಹುದಾದ ಪ್ರಮುಖ ಬದಲಾವಣೆಗಳ ಮಾಹಿತಿ ಕೆಳಗಿದೆ. ಮೂರನೇ ಟೆಸ್ಟ್‌ಗೆ ಪ್ರಕಟಿತ ಆಸ್ಟ್ರೇಲಿಯಾ ತಂಡವೂ ಕೆಳಗಿದೆ.

ಆಸ್ಟ್ರೇಲಿಯಾ ತಂಡದಲ್ಲಾಗುವ ಚೇಂಜಸ್
* ಮೂರನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡಕ್ಕೆ ಪ್ರಮುಖ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಬರಲಿದ್ದಾರೆ. ಜೊತೆಗೆ ವಿಲ್ ಪುಕೊವ್ಸ್ಕಿ ಮತ್ತು ಸೀನ್ ಅಬಾಟ್ ಕೂಡ ತಂಡಕ್ಕೆ ಮರಳಲಿದ್ದಾರೆ.
* ಮೂರನೇ ಟೆಸ್ಟ್‌ಗೆ ಆಸ್ಟ್ರೇಲಿಯಾದ 18 ಜನರ ತಂಡದಿಂದ ಆರಂಭಿಕ ಬ್ಯಾಟ್ಸ್‌ಮನ್ ಜೋ ಬರ್ನ್ಸ್ ಕೈ ಬಿಡಲಾಗಿದೆ.

ಭಾರತ ತಂಡದಲ್ಲಿ ಬದಲಾವಣೆ
* ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್‌ಗೆ ಭಾರತ ತಂಡದಲ್ಲೂ ಪ್ರಮುಖ ಬದಲಾವಣೆಯಾಗಲಿದೆ. ಭಾರತದ ಪ್ರಮುಖ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮೂರನೇ ಟೆಸ್ಟ್‌ನಲ್ಲಿ ಆಡಲಿದ್ದಾರೆ.
* ಆಸ್ಟ್ರೇಲಿಯಾ ವಿರುದ್ಧದ ನಿಯಮಿತ ಓವರ್‌ಗಳ ಸರಣಿಯಲ್ಲಿ ಆಡಿದ್ದ ವೇಗಿ ಟಿ ನಟರಾಜನ್ ಅವರು ಮೂರನೇ ಟೆಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ.

3ನೇ ಟೆಸ್ಟ್‌ನ ಪ್ರಮುಖ ಮಾಹಿತಿ
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಜನವರಿ 7ರಂದು ಭಾರತೀಯ ಕಾಲಮಾನ 5:00 AMಗೆ ಆರಂಭವಾಗಲಿದೆ. ಕೊನೇ ಟೆಸ್ಟ್ ಪಂದ್ಯ ಜನವರಿ 15ರಂದು ಬ್ರಿಸ್ಬೇನ್‌ನ ಗಬ್ಬಾ ಸ್ಟೇಡಿಯಂನಲ್ಲಿ ಆರಂಭಗೊಳ್ಳಲಿದೆ.

3ನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ತಂಡ
ಟಿಮ್ ಪೈನ್ (ಸಿ), ಸೀನ್ ಅಬಾಟ್, ಪ್ಯಾಟ್ ಕಮ್ಮಿನ್ಸ್, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಝಲ್ವುಡ್, ಟ್ರಾವಿಸ್ ಹೆಡ್, ಮೊಯಿಸಸ್ ಹೆನ್ರಿಕ್ಸ್, ಮಾರ್ನಸ್ ಲ್ಯಾಬುಶೇನ್, ನೇಥನ್ ಲಿಯಾನ್, ಮೈಕೆಲ್ ನೇಸರ್, ಜೇಮ್ಸ್ ಪ್ಯಾಟಿನ್ಸನ್, ವಿಲ್ ಪುಕೊವ್ಸ್ಕಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications