ಭಾರತ vs ಆಸ್ಟ್ರೇಲಿಯಾ: ಕ್ವಾರಂಟೈನ್ ಆರಂಭಿಸಿದ ರೋಹಿತ್ ಶರ್ಮಾ

ಸಿಡ್ನಿ: ಆಸ್ಟ್ರೇಲಿಯಾ ತಲುಪಿರುವ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 14 ದಿನಗಳ ಕ್ವಾರಂಟೈನ್ ಆರಂಭಿಸಿದ್ದಾರೆ. ಡಿಸೆಂಬರ್ 17ರಿಂದ ಶರ್ಮಾ ಕ್ವಾರಂಟೈನ್ ಶುರುವಾಗಿದೆ. ಭಾರತ-ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಡಿಸೆಂಬರ್ 17ರಿಂದ ಆರಂಭಗೊಂಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ವೇಳೆ ಹ್ಯಾಮ್‌ಸ್ಟ್ರಿಂಗ್‌ಗೆ ಒಳಗಾಗಿದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಐಪಿಎಲ್ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರಲಿಲ್ಲ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ರೋಹಿತ್ ಚೇತರಿಸಿಕೊಳ್ಳುತ್ತಿದ್ದರು.
ಡಿಸೆಂಬರ್ 15ರಂದು ದುಬೈ ಮೂಲಕ ಆಸ್ಟ್ರೇಲಿಯಾ ಪ್ರಯಾಣ ಬೆಳೆಸಿದ್ದ ರೋಹಿತ್, ಡಿಸೆಂಬರ್ 16ರಂದು ಸಿಡ್ನಿ ತಲುಪಿದ್ದರು. ಮರುದಿನದಿಂದ ಶರ್ಮಾ ಅವರ ಕ್ವಾರಂಟೈನ್ ಶುರುವಾಗಿದೆ. ಮೂರನೇ ಟೆಸ್ಟ್ ವೇಳೆಗೆ ಶರ್ಮಾ ಕ್ವಾರಂಟೈನ್ ಅವಧಿ ಪೂರ್ಣಗೊಳ್ಳಲಿದೆ.
ಆಸ್ಟ್ರೇಲಿಯಾಕ್ಕೆ ಪ್ರವಾಸ ಬಂದಿರುವ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1ರಿಂದ ಸೋಲು, ಟಿ20ಐ ಸರಣಿಯಲ್ಲಿ 2-1ರ ಗೆಲುವು ಕಂಡಿತ್ತು. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಕುತೂಹಲ ಮೂಡಿಸಿದೆ. ಇತ್ತಂಡಗಳ ಮಧ್ಯೆ ಈಗಾಗಲೇ ಆರಂಭಿಕ ಪಂದ್ಯವಾಗಿ ಪಿಂಕ್‌ಬಾಲ್ ಟೆಸ್ಟ್ ನಡೆಯುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications