Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ: 2ನೇ ಟೆಸ್ಟ್‌ಗೆ ಭಾರತ ತಯಾರಿ-ವಿಡಿಯೋ

Australia vs India: Team Indias Net Session-Video

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಆರಂಭಿಕ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿರುವ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್‌ನಲ್ಲಿ ತಿರುಗೇಟು ನೀಡಲು ಯೋಚಿಸುತ್ತಿದೆ. ದ್ವಿತೀಯ ಪಂದ್ಯದ ನಿಮಿತ್ತ ಭಾರತ ತಂಡ ತಯಾರಿ ನಡೆಸುತ್ತಿದೆ. ಭಾರತ ತಂಡ ಅಭ್ಯಾಸ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲನೇ ಪಂದ್ಯ ಗೆದ್ದಿರುವ ಆಸ್ಟ್ರೇಲಿಯಾ ಸರಣಿಯಲ್ಲಿ 1-0ಯ ಮುನ್ನಡೆಯಲ್ಲಿದೆ. ಅಸಲಿಗೆ ಮೊದಲ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವೇ 53 ರನ್ ಮುನ್ನಡೆಯಲ್ಲಿತ್ತು. ಆದರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ ಕೇವಲ 36 ರನ್ ಬಾರಿಸಿ ಗೆಲ್ಲುವ ಪಂದ್ಯವನ್ನು ಕೈ ಚೆಲ್ಲಿತ್ತು.

ಭಾರತ-ಆಸ್ಟ್ರೇಲಿಯಾ ದ್ವಿತೀಯ ಟೆಸ್ಟ್‌ ಪಂದ್ಯ ಡಿಸೆಂಬರ್ 26ರಂದು ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭಗೊಳ್ಳಲಿದೆ. ದ್ವಿತೀಯ ಟೆಸ್ಟ್ ಗೆದ್ದರಷ್ಟೇ ಭಾರತಕ್ಕೆ ಟೆಸ್ಟ್‌ ಸರಣಿ ಗೆಲುವಿನಾಸೆ ಜೀವಂತವಾಗಿರಲಿದೆ. ಎರಡನೇ ಟೆಸ್ಟ್ ಕೂಡ ಸೋತರೆ ಭಾರತದಿಂದ ಸರಣಿ ಬಹುತೇಕ ಕೈತಪ್ಪಿದಂತೆಯೇ.

ಆರಂಭಿಕ ಟೆಸ್ಟ್‌ನಲ್ಲಿ ಆಡಿದ್ದ ಭಾರತದ ನಾಯಕ ವಿರಾಟ್ ಕೊಹ್ಲಿ ಇನ್ನುಳಿದ ಯಾವುದೇ ಪಂದ್ಯಗಳಲ್ಲಿ ಆಡುತ್ತಿಲ್ಲ. ಪಿತೃತ್ವ ರಜೆ ಮಂಜೂರು ಮಾಡಿಕೊಂಡಿರುವ ಕೊಹ್ಲಿ ಸರಣಿಯಿಂದ ದೂರ ಉಳಿಯಲಿದ್ದಾರೆ. ಆಸ್ಟ್ರೇಲಿಯಾ ತಂಡದಿಂದ ದ್ವಿತೀಯ ಟೆಸ್ಟ್‌ನಲ್ಲಿ ಡೇವಿಡ್ ವಾರ್ನರ್, ಸೀನ್ ಅಬಾಟ್ ಆಡುತ್ತಿಲ್ಲ.

Story first published: Wednesday, December 23, 2020, 16:02 [IST]
Other articles published on Dec 23, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+