For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಪಾಕಿಸ್ತಾನ: ಮೊದಲ ಟೆಸ್ಟ್, ಟಾಸ್ ವರದಿ, Live ಸ್ಕೋರ್ ಹಾಗೂ ಪ್ಲೇಯಿಂಗ್ XI

Australia vs Pakistan 1st test, Day 1, Toss report, Live score and Playing XI, Rawalpindi

24 ವರ್ಷಗಳ ನಂತರ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ಪಾಕಿಸ್ತಾನದ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮೊದಲ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಪಾಕ್ ದಾಂಡಿಗರನ್ನು ಮೊದಲಿಗೆ ಕಟ್ಟಿ ಹಾಕುವ ಪ್ರಯತ್ನ ಆರಂಭಿಸಿದೆ.

ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಎರಡೂ ತಂಡಗಳು ವಿಭಿನ್ನ ಸಂಯೋಜನೆಯೊಂದಿಗೆ ಕಣಕ್ಕಿಳಿಯುತ್ತಿದೆ. ಪಾಕಿಸ್ತಾನ ಪಡೆ ಮೂವರು ಸ್ಪಿನ್ನರ್‌ಗಳೊಂದಿಗೆ ಆಡಲಿಳಿದಿದ್ದರೆ ಆಸ್ಟ್ರೇಲಿಯಾ ಎಂದಿನಂತೆಯೇ ನಾಲ್ವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್‌ನೊಂದಿಗೆ ದಾಳಿಗೆ ಇಳಿದಿದೆ.

ಸ್ಕೋರ್‌ಕಾರ್ಡ್ ಹೀಗಿದೆ:

1
52518

ಇನ್ನು ಉಪಖಂಡದಲ್ಲಿ ಹಿನ್ನಡೆ ಸಾಧಿಸುತ್ತಿರುವ ಆಸ್ಟ್ರೇಲಿಯಾ ತಂಡ ಪಾಕಿಸ್ತಾನ ಪ್ರವಾಸದಲ್ಲಿ ಮತ್ತೆ ಉಒಖಂಡದಲ್ಲಿ ಪ್ರಾಬಲ್ಯ ಸಾಧಿಸಬೇಕೆಂಬ ಛಲದೊಂದಿಗೆ ಕಣಕ್ಕಿಳಿದಿದೆ. ಸ್ವತಃ ಆಸಿಸ್ ನಾಯಕ ಪ್ಉಆಟ್ ಕಮ್ಮಿನ್ಸ್ ಕೂಡ ಈ ಬಗ್ಗೆ ಮಾತನಾಡಿದ್ದು ನಮ್ಮ ಯೋಜನೆ ಪಾಕಿಸ್ತಾನದೊಂದಿಗೆ ಪ್ರವಾಸದೊಂದಿಗೆ ಆರಂಭವಾಗುತ್ತದೆ ಎಂದಿದ್ದರು. ಹೀಗಾಗಿ ಪಾಕಿಸ್ತಾನ ಪ್ರವಾಸದಲ್ಲಿ ಆಸಿಸ್ ತಮಡದ ಪ್ರದರ್ಶನ ಕುತೂಹಲ ಮೂಡಿಸಿದೆ.

ಇನ್ನು ಈ ಸುರಕ್ಷತೆಯ ಕಾರಣದಿಂದಾಗಿ ಈ ಸರಣಿಗೆ ಸಾಕಷ್ಟು ಭದ್ರತೆಯನ್ನು ನೀಡಲಾಗಿದೆ. ಅದರಲ್ಲೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸದಸ್ಯರು ವಾಸ್ತವ್ಯ ಹೊಂದಿರುವ ಹೋಟೆಲ್ ಹಾಗೂ ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ಪೊಲೀಸ್ ಹಾಗೂ ಸಶಸ್ತ್ರಪಡೆಗಳ ಸಿಬ್ಬಂದಿಗಳು ಭಾರೀ ಪ್ರಮಾಣದಲ್ಲಿದ್ದು ಭದ್ರತೆಯನ್ನು ನೋಡಿಕೊಳ್ಳುತ್ತಿದ್ದಾರೆ.

ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ನೌಮನ್ ಅಲಿ, ಸಾಜಿದ್ ಖಾನ್, ನಸೀಮ್ ಶಾ, ಶಾನ್ ಅಫ್ರಿದಿ
ಬೆಂಚ್: ಮೊಹಮ್ಮದ್ ವಾಸಿಂ ಜೂನಿಯರ್, ಶಾನ್ ಮಸೂದ್, ಸೌದ್ ಶಕೀಲ್, ಜಾಹಿದ್ ಮಹಮೂದ್

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಮೈಕೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟ್, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಮಿಚೆಲ್ ಸ್ವೆಪ್ಸನ್, ಜೋಶ್ ಇಂಗ್ಲಿಷ್

Story first published: Friday, March 4, 2022, 10:55 [IST]
Other articles published on Mar 4, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+