Aus vs Pak 1st Test: 2ನೇ ದಿನದಾಟದಂತ್ಯಕ್ಕೆ ಪಾಕಿಸ್ತಾನ 476/4 ರನ್‌ಗಳಿಗೆ ಡಿಕ್ಲೇರ್

ರಾವಲ್ಪಿಂಡಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ 4 ವಿಕೆಟ್ ಕಳೆದುಕೊಂಡು 476 ರನ್‌ಗಳಿಗೆ ಡಿಕ್ಲೇರ್ ಘೋಷಿಸಿದೆ. ಎರಡನೇ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ವಿಕೆಟ್ ನಷ್ಟವಿಲ್ಲ 5 ರನ್ ಕಲೆಹಾಕಿದ್ದು, ಲೀಡ್ ಪಡೆಯಲು 471 ರನ್‌ಗಳು ಬಾಕಿ ಉಳಿದಿವೆ.
ಹಲವು ವರ್ಷಗಳ ಪಾಕಿಸ್ತಾನ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಮೊದಲ ಪಂದ್ಯ ಸಾಕಷ್ಟು ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಮೊದಲ ದಿನದಾಟದಲ್ಲಿ ಪಾಕಿಸ್ತಾನ 245 ರನ್‌ಗಳಿಸಿದ್ದು ಕೇವಲ ಒಂದು ವಿಕೆಟ್ ಮಾತ್ರವೇ ಕಳೆದುಕೊಂಡಿತ್ತು. ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಭರ್ಜರಿ ಶತಕ ಗಳಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದರೆ ಅಜರ್ ಅಲಿ 65 ರನ್ ಗಳಿಸಿ ಔಟಾಗದೆ ಉಳಿದಿದ್ದರು.
ಎರಡನೇ ವಿಕೆಟ್‌ಗೆ ದ್ವಿತಶಕದ ಜೊತೆಯಾಟವಾಡಿದ ಈ ಜೋಡಿ ಅತ್ಯಂತ ತಾಳ್ಮೆಯಿಂದ ಆಸ್ಟ್ರೇಲಿಯಾ ಬೌಲರ್‌ಗಳನ್ನ ಎದುರಿಸಿದ್ರು. ಇಮಾಮ್ ಉಲ್ ಹಕ್ 358 ಎಸೆತಗಳನ್ನ ಎದುರಿಸಿ 157 ರನ್ ಕಲೆಹಾಕಿದ್ದಾರೆ. ಇವರ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು 2 ಸಿಕ್ಸರ್‌ಗಳಿದ್ದವು.
ಬೊಂಬಾಟ್ ಬ್ಯಾಟಿಂಗ್ ಮಾಡಿದ ಅಜರ್ ಅಲಿ 361 ಎಸೆತಗಳನ್ನ ಎದುರಿಸಿ 185ರನ್‌ಗೆ ವಿಕೆಟ್ ಒಪ್ಪಿಸುವ ಮೂಲಕ ಕೇವಲ 15ರನ್‌ಗಳಲ್ಲಿ ದ್ವಿಶತಕ ಮಿಸ್ ಮಾಡಿಕೊಂಡ್ರು. ಇವರ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಮತ್ತು 3 ಅಮೋಘ ಸಿಕ್ಸರ್‌ಗಳಿದ್ದವು.
ಈ ಇಬ್ಬರು ಬ್ಯಾಟ್ಸ್‌ಮನ್‌ಗಳ ಪತನದ ಬಳಿಕ ನಾಯಕ ಬಾಬರ್ ಅಜಮ್ 36, ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್ ಅಜೇಯ 29, ಇಫ್ತಿಕರ್ ಅಹಮದ್ ಅಜೇಯ 13 ಕಲೆಹಾಕಿದ ವೇಳೆ ಪಾಕಿಸ್ತಾನ ಡಿಕ್ಲೇರ್ ಮಾಡಿಕೊಂಡಿದೆ. ಇನ್ನು ಮೂರು ದಿನಗಳ ಆಟ ಬಾಕಿ ಉಳಿದಿದ್ದು, ಆಸ್ಟ್ರೇಲಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ರೆ, ಪಂದ್ಯವು ಡ್ರಾನತ್ತ ಸಾಗಬಹುದು.
ಪಾಕಿಸ್ತಾನ ಪ್ಲೇಯಿಂಗ್ 11: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ನೌಮನ್ ಅಲಿ, ಸಾಜಿದ್ ಖಾನ್, ನಸೀಮ್ ಶಾ, ಶಾನ್ ಅಫ್ರಿದಿ
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications