For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಪಾಕಿಸ್ತಾನ, ಟೆಸ್ಟ್ ಸರಣಿ: ನೀರಸ ಡ್ರಾದತ್ತ ಮೊದಲ ಪಂದ್ಯ: Live ಸ್ಕೋರ್

Australia vs Pakistan 1st test, Day 5, Live score and Playing XI, Rawalpindi

ಪಾಕಿಸ್ತಾನ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ತಂಡ ಪಾಕಿಸ್ತಾನದ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ 459 ರನ್‌ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 17 ರನ್‌ಗಳ ಹಿನ್ನಡೆ ಅನುಭವಿಸಿದೆ. ಅಂತಿಮ ದಿನದಾಟವಾಗಿರುವ ಕಾರಣ ಡ್ರಾಗೊಳ್ಳುವುದು ನಿಚ್ಚಳವಾಗಿದೆ. ಭೋಜನ ವಿರಾಮದ ವೇಳೆಗೆ ಪಾಕಿಸ್ತಾನ ಎರಡನೇ ಇನ್ನಿಂಗ್ಸ್‌ನಲ್ಲಿ 93 ರನ್‌ಗಳ ಮುನ್ನಡೆಯಲ್ಲಿದೆ.

476 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಪಾಕಿಸ್ತಾನ ನಂತರ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ದಿಟ್ಟ ಹೋರಾಟವನ್ನು ಪ್ರದರ್ಶಿಸಿತು. ಆರಂಭಿಕ ಆಟಗಾರರಾದ ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಾಸ್ ಲ್ಯಾಬುಶೈನ್ ಅವರಿಂದ ಉತ್ತಮ ಪ್ರತಿರೋಧ ವ್ಯಕ್ತವಾಯಿತು. ಇದರ ಪರಿಣಾಮವಾಗಿ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 459 ರನ್‌ಗಳಿಸಿ ಆಲೌಟ್ ಆಗಿದೆ. ಆದರೆ ಅದಾಗಲೇ ನಾಲ್ಕು ದಿನಗಳು ಸಂಪೂರ್ಣವಾಗಿರುವ ಕಾರಣ ಪಂದ್ಯ ಫಲಿತಾಂಶ ಪಡೆಯುವ ಯಾವುದೇ ಸಾಧ್ಯತೆಗಳು ಇಲ್ಲ.

ಸ್ಕೋರ್‌ಕಾರ್ಡ್ ಹೀಗಿದೆ:

1
52518

ಇನ್ನು ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಪಾಕಿಸ್ತಾನದ ಪರವಾಗಿ ಇಬ್ಬರು ಆಟಗಾರರು ಶತಕ ದಾಖಲಿಸಿ ಮಿಂಚಿದ್ದರು. ಇಮಾಮ್ ಉಲ್ ಹಕ್ ಹಾಗೂ ಅಜರ್ ಅಲಿ ಬೃಹತ್ ಶತಕಗಳಿಸಿದರು. ಇಮಾಮ್ ಉಲ್ ಹಕ್ 157 ರನ್‌ ಬಾರಿಸಿದರೆ ಅಜರ್ ಅಲಿ 185 ರನ್ ಸಿಡಿಸಿದರು. ಈ ಮೂಲಕ ಕೇವಲ 4 ವಿಕೆಟ್ ಕಳೆದುಕೊಂಡು ಪಾಕ್ 476 ರನ್‌ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ನೌಮನ್ ಅಲಿ, ಸಾಜಿದ್ ಖಾನ್, ನಸೀಮ್ ಶಾ, ಶಾನ್ ಅಫ್ರಿದಿ

ಬೆಂಚ್: ಮೊಹಮ್ಮದ್ ವಾಸಿಂ ಜೂನಿಯರ್, ಶಾನ್ ಮಸೂದ್, ಸೌದ್ ಶಕೀಲ್, ಜಾಹಿದ್ ಮಹಮೂದ್

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್

ಬೆಂಚ್: ಮೈಕೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟ್, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಮಿಚೆಲ್ ಸ್ವೆಪ್ಸನ್, ಜೋಶ್ ಇಂಗ್ಲಿಷ್

Story first published: Tuesday, March 8, 2022, 13:22 [IST]
Other articles published on Mar 8, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+