ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಪಾಕಿಸ್ತಾನ: ಬೌಲರ್‌ಗಳಿಗೆ ನರಕ ದರ್ಶನ, ನಿರೀಕ್ಷೆಯಂತೇ ಮೊದಲ ಟೆಸ್ಟ್ ನೀರಸ ಡ್ರಾ!

Australia vs Pakistan 1st test, Rawalpindi test ended in draw

ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನೀರಸ ಡ್ರಾ ಕಂಡಿದೆ. ರಾವಲ್ಪಿಂಡಿಯ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯ ಬೌಲರ್‌ಗಳ ಪಾಲಿಗ ಅಕ್ಷರಶಃ ದುಸ್ವಪ್ನವಾಗಿ ಕಾಡಿದೆ. ಆಸ್ಟ್ರೇಲಿಯಾ ತಂಡ ಎರಡನೇ ಇನ್ನಿಂಗ್ಸ್ ಆಡುವ ಅವಕಾಶವೂ ಸಿಗದಂತೆ ಈ ಪಂದ್ಯ ಡ್ರಾ ಫಲಿತಾಂಶವನ್ನು ಕಂಡಿದೆ. ಎರಡನೇ ಇನ್ನಿಂಗ್ಸ್‌ನಲ್ಲಿಯೂ ಪಾಕಿಸ್ತಾನ ಆರಂಭಿಕರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಅಜೇಯ ದ್ವಿಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಪಂದ್ಯ ಡ್ರಾ ಫಲಿತಾಂಶವನ್ನು ಪಡೆದಿದೆ.

ಈ ಟೆಸ್ಟ್ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ 476 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇಮಾಮ್ ಉಲ್ ಹಕ್ ಹಾಗೂ ಅಜರ್ ಅಲಿ ಬೃಹತ್ ಶತಕಗಳಿಸಿದರು. ಇಮಾಮ್ ಉಲ್ ಹಕ್ 157 ರನ್‌ ಬಾರಿಸಿದರೆ ಅಜರ್ ಅಲಿ 185 ರನ್ ಸಿಡಿಸಿದರು. ಈ ಮೂಲಕ ಕೇವಲ 4 ವಿಕೆಟ್ ಕಳೆದುಕೊಂಡು ಪಾಕ್ 476 ರನ್‌ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

100ನೇ ಟೆಸ್ಟ್ ಬಳಿಕ ಕೋಚ್ ಹಾಗೂ ಬಿಸಿಸಿಐಗೆ ಕೃತಜ್ಞತೆ ತಿಳಿಸಿದ ವಿರಾಟ್ ಕೊಹ್ಲಿ100ನೇ ಟೆಸ್ಟ್ ಬಳಿಕ ಕೋಚ್ ಹಾಗೂ ಬಿಸಿಸಿಐಗೆ ಕೃತಜ್ಞತೆ ತಿಳಿಸಿದ ವಿರಾಟ್ ಕೊಹ್ಲಿ

ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ದಿಟ್ಟ ಹೋರಾಟವನ್ನು ಪ್ರದರ್ಶಿಸಿತು. ಆರಂಭಿಕ ಆಟಗಾರರಾದ ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಾಸ್ ಲ್ಯಾಬುಶೈನ್ ಅವರಿಂದ ಉತ್ತಮ ಪ್ರತಿರೋಧ ವ್ಯಕ್ತವಾಯಿತು. ಇದರ ಪರಿಣಾಮವಾಗಿ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 459 ರನ್‌ಗಳಿಸಿ ಆಲೌಟ್ ಆಯಿತು. ಊದನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡ ಆಲೌಟ್ ಆಗುವ ಮೂಲಕ ಪಂದ್ತ ಡ್ರಾದತ್ತ ಮುಖ ಮಾಡಿರುವುದು ಸ್ಪಚ್ಟವಾಗಿತ್ತು.

ನಂತರ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸಿದ ಪಾಕಿಸ್ತಾನದ ಪರವಾಗಿ ಆರಂಭಿಕರಿಬ್ಬರು ಕುಡ ಅಜೇಯ ಶತಕ ದಾಖಲಿಸಿದ್ದಾರೆ. ಅಬ್ದುಲ್ಲಾ ಶಫೀಕ್ ಅಜೇಯ 136 ರನ್‌ಗಳಿಸಿದ್ದರೆ ಇಮಾಮ್ ಉಲ್ ಹಕ್ 111 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದೆ.

ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಪರವಾಗಿ ನಾಲ್ಕು ಶತಕಗಳು ದಾಖಲಾಗಿದೆ. ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಎರಡೂ ಇನ್ನಿಂಗ್ಸ್‌ನಲ್ಲಿಯೂ ಶತಕಗಳಿಸಿ ಮಿಂಚಿದರು. ಇನ್ನು ಆಸ್ಟ್ರೇಲಿಯಾ ಪರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಒಟ್ಟು 8 ಬೌಲರ್‌ಗಳು ದಾಳಿಗೆ ಇಳಿದಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ 9 ಬೌಲರ್‌ಗಳು ದಾಳಿಗೆ ಇಳಿದಿದ್ದು ವಿಶೇಷವಾಗಿದೆ.

ಐಪಿಎಲ್: ಕೊನೆಗೂ ನೂತನ ನಾಯಕನ ಘೋಷಣೆಯ ದಿನಾಂಕ ಪ್ರಕಟಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರುಐಪಿಎಲ್: ಕೊನೆಗೂ ನೂತನ ನಾಯಕನ ಘೋಷಣೆಯ ದಿನಾಂಕ ಪ್ರಕಟಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ನೌಮನ್ ಅಲಿ, ಸಾಜಿದ್ ಖಾನ್, ನಸೀಮ್ ಶಾ, ಶಾನ್ ಅಫ್ರಿದಿ
ಬೆಂಚ್: ಮೊಹಮ್ಮದ್ ವಾಸಿಂ ಜೂನಿಯರ್, ಶಾನ್ ಮಸೂದ್, ಸೌದ್ ಶಕೀಲ್, ಜಾಹಿದ್ ಮಹಮೂದ್

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಮೈಕೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟ್, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಮಿಚೆಲ್ ಸ್ವೆಪ್ಸನ್, ಜೋಶ್ ಇಂಗ್ಲಿಷ್

Story first published: Wednesday, March 9, 2022, 9:36 [IST]
Other articles published on Mar 9, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X