For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಪಾಕಿಸ್ತಾನ 2ನೇ ಟೆಸ್ಟ್: ಬಾಬರ್, ರಿಜ್ವಾನ್ ಭರ್ಜರಿ ಶತಕ: ರೋಚಕ ಟೈ ಮಾಡಿಕೊಂಡ ಪಾಕಿಸ್ತಾನ

Australia vs Pakistan test: Babar and Rizwan century, 2nd ends in a draw

ಕರಾಚಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಹೋರಾಟ ಮಾಡಿದ ಪಾಕಿಸ್ತಾನ ಪಂದ್ಯವನ್ನು ರೋಚಕವಾಗಿ ಟೈ ಮಾಡಿಕೊಂಡಿದೆ. ಆರಂಭಿಕ ಆಟಗಾರ ಅಬ್ದುಲ್ಲಾ ಶಫೀಕ್ 96 ರನ್ ಹಾಗೂ ನಾಯಕ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಭರ್ಜರಿ ಶತಕದ ನೆಲವಿನಿಂದ ಪಾಕಿಸ್ತಾನ ಅಂತಿಮ ದಿನದಾಟದಲ್ಲಿ ಅಮೋಘ ಹೋರಾಟವನ್ನು ಪ್ರದರ್ಶಿಸಿ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬಾಬರ್ ಅಜಮ್ ಕೇವಲ 4 ರನ್‌ಗಳಿಂದ ದ್ವಿಶತಕ ವಂಚಿತವಾಗಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಪಾಕಿಸ್ತಾನ ತಂಡಕ್ಕೆ 506 ರನ್‌ಗಳ ಬೃಹತ್ ಗುರಿಯನ್ನು ನಿಗದಿಪಡಿಸಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 148 ರನ್‌ಗಳಿಗೆ ಆಲೌಟ್ ಆಗಿದ್ದ ಪಾಕಿಸ್ತಾನ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಆಸಿಸ್ ಬೌಲಿಂಗ್ ಪಡೆಗೆ ಸುಲಭ ತುತ್ತಾಗಲಿದ್ದಾರೆ ಎಂದು ಬಹುತೇಕ ಕ್ರಿಕೆಟ್ ಪ್ರೇಮಿಗಳು ಭಾವಿಸಿದ್ದರು. ಆದರೆ ಪಾಕಿಸ್ತಾನದ ಬ್ಯಾಟರ್‌ಗಳು ಅದ್ಭುತವಾದ ಪ್ರತಿರೋಧವನ್ನು ಒಡ್ಡುವ ಮೂಲಕ ಪಂದ್ಯವನ್ನು ರಕ್ಷಣೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರಂಭದಿಂದಲೇ ಯಶಸ್ಸು ಸಾಧಿಸುತ್ತಾ ಬಂದಿತ್ತು. ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ್ದ ಆಸ್ಟ್ರೇಲಿಯಾ 556 ರನ್‌ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಮೊದಲ ದಿನ ಹಾಗೂ ಎರಡನೇ ದಿನ ಪಾಕಿಸ್ತಾನದ ಬೌಲರ್‌ಗಳನ್ನು ಆಸ್ಟ್ರೇಲಿಯಾ ದಾಂಡಿಗರು ಸಂಪೂರ್ಣವಾಗಿ ಬೆವರಿಳಿಸುವಲ್ಲಿ ಯಶಸ್ವಿಯಾದರು. ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಅದ್ಭುತ ಫಾರ್ಮ್ ಮುಂದುವರಿಸಿದ್ದು ಭರ್ಜರಿ ಶತಕ ದಾಖಲಿಸುವಲ್ಲಿ ಯಶಸ್ವಿಯಾದರು. ಖವಾಜ 160 ರನ್‌ಗಳಿಸಿ ವಿಕೆಟ್ ಒಪ್ಪಿಸಿದ್ದರು. ಸ್ಟೀವ್ ಸ್ಮಿತ್ 72 ರನ್‌ಗಳ ಕೊಡುಗೆ ನೀಡಿದರೆ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ 93 ರನ್‌ಗಳಿಸಿ ಔಟಾದರು. ಈ ಮೂಲಕ 7 ರನ್‌ಗಳಿಂದ ಶತಕವಂಚಿತರಾಗಿದ್ದಾರೆ. ಅಂತಿಮವಾಗಿ 189 ಓವರ್‌ಗಳ ಕಾಲ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 559/9 ರನ್‌ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಪಾಕಿಸ್ತಾನ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 148 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಪ್ರವಾಸಿ ಆಸಿಸ್ ಪಡೆ 408 ರನ್‌ಗಳ ಬೃಹತ್ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಈ ಮೂಲಕ ಆತಿಥೇಯರಿಗೆ ಸಂಕಷ್ಟಕ್ಕೆ ದೂಡಿತ್ತು. ರಾವಲ್ಪಿಂಡಿ ಟೆಸ್ಟ್ ಪಂದ್ಯದಲ್ಲಿ ಅಬ್ಬರಿಸಿದ್ದ ಪಾಕಿಸ್ತಾನದ ಅಗ್ರ ಕ್ರಮಾಂಕದ ಆಟಗಾರರು ಕರಾಚಿ ಟೆಸ್ಟ್ ಮೊದಲ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ನಾಯಕ ಬಾಬರ್ ಅಜಂ ಗಳಿಸಿದ 36 ರನ್ ಪಾಕಿಸ್ತಾನದ ಪರವಾಗಿ ದಾಖಲಾದ ಅತಿ ಹೆಚ್ಚಿನ ಮೊತ್ತವಾಗಿತ್ತು. ಅಂತಿಮವಾಗಿ 148 ರನ್‌ಗಳಿಗೆ ಆಲೌಟ್ ಆಯಿತು.

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ 408 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದ ಹೊರತಾಗಿಯೂ ಆಸ್ಟ್ರೇಲಿಯಾ ಫಾಲೋಆನ್ ಹೇರದೆ ಬ್ಯಾಟಿಂಗ್ ನಡೆಸಲು ಆರಂಭಿಸಿತು. 2ನೇ ಇನ್ನಿಂಗ್ಸ್‌ನಲ್ಲಿ 97 ರನ್‌ಗಳಿಸಿದ ನಂತರ ನಾಲ್ಕನೇ ದಿನ ಆಸಿಸ್ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ 506 ರನ್‌ಗಳ ಬೃಹತ್ ಗುರಿಯನ್ನು ಪಾಕಿಸ್ತಾನಕ್ಕೆ ಆಸ್ಟ್ರೇಲಿಯಾ ನಿಗದಿಪಡಿಸಿತ್ತು. ಈ ಸವಾಲನ್ನು ಸ್ವೀಕರಿಸಿದ ಪಾಕಿಸ್ತಾನ 21 ರನ್‌ಗಳಾಗುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು.

ಆದರೆ ನಾಯಕ ಬಾಬರ್ ಅಜಮ್, ಆರಂಭಿಕ ಆಟಗಾರ ಅಬ್ದುಲ್ಲಾ ಶಫೀಕ್ ದ್ವಿಶತಕದ ಜೊತೆಯಾಟ ನೀಡುವ ಮೂಲಕ ತಂಡವನ್ನು ಕುಸಿತದಿಂದ ಕಾಪಾಡಿದರು. ನಂತರ ಮೊಹಮ್ಮದ್ ರಿಜ್ವಾನ್ ಕೂಡ ಕ್ರೀಸ್‌ನಲ್ಲಿ ನೆಲಕಚ್ಚಿ ನಿಲ್ಲುವ ಮೂಲಕ ಆಸಿಸ್ ಬೌಲರ್‌ಗಳಿಗೆ ಸವಾಲಾದರು. ಬಾಬರ್ ಅಜಮ್ ವಿಕೆಟ್ ಕಳೆದುಕೊಂಡ ನಂತರ ಪಾಕಿಸ್ತಾನ ಸಣ್ಣ ಕುಸಿತವನ್ನು ಅನುಭವಿಸಿದರು ಕೂಡ ರಿಜ್ವಾನ್ ಆಸಿಸ್ ಗೆಲುವಿಗೆ ಅಡ್ಡಿಯಾದರು. ಅಂತಿಮವಾಗಿ ಪಾಕಿಸ್ತಾನ 443 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆಸ್ಟ್ರೇಲಿಯಾ ಪರವಾಗಿ ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ 4 ವಿಕೆಟ್ ಪಡೆದು ಪಾಕ್ ಬ್ಯಾಟರ್‌ಗಳನ್ನು ಕಾಡಿದರು.

ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಹೀಮ್ ಅಶ್ರಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ನೌಮಾನ್ ಅಲಿ,ಸಾಜಿದ್ ಖಾನ್
ಬೆಂಚ್: ಇಫ್ತಿಕರ್ ಅಹ್ಮದ್, ನಸೀಮ್ ಶಾ, ಶಾನ್ ಮಸೂದ್, ಮೊಹಮ್ಮದ್ ವಾಸಿಂ ಜೂನಿಯರ್, ಸೌದ್ ಶಕೀಲ್, ಹಾರಿಸ್ ರೌಫ್, ಜಾಹಿದ್ ಮಹಮೂದ್

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮಿಚೆಲ್ ಸ್ವೆಪ್ಸನ್
ಬೆಂಚ್: ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಆಷ್ಟನ್ ಅಗರ್, ಮಾರ್ಕ್ ಸ್ಟೆಕೆಟೀ, ಸ್ಕಾಟ್ ಬೋಲ್ಯಾಂಡ್

Story first published: Wednesday, March 16, 2022, 19:28 [IST]
Other articles published on Mar 16, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+