Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ vs ಪಾಕಿಸ್ತಾನ: ಮೊದಲ ಟೆಸ್ಟ್, 2ನೇ ದಿನದಾಟದ Live ಸ್ಕೋರ್

Australia vs Pakistan test series 1st test match, Day 2, Live score details Rawalpindi

ಪಾಕಿಸ್ತಾನ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಮೊದಲ ದಿನದಾಟದಲ್ಲಿ ಪಾಕಿಸ್ತಾನ 245 ರನ್‌ಗಳಿಸಿದ್ದು ಕೇವಲ ಒಂದು ವಿಕೆಟ್ ಮಾತ್ರವೇ ಕಳೆದುಕೊಂಡಿತ್ತು. ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಭರ್ಜರಿ ಶತಕ ಗಳಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದರೆ ಅಜರ್ ಅಲಿ 65 ರನ್ ಗಳಿಸಿ ಔಟಾಗದೆ ಉಳಿದಿದ್ದರು.

ರಾವಲ್ಪಿಂಡಿಯ ರಾವಲ್ಪಿಂಡಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲ ದಿನದಾಟದಲ್ಲಿ ಆಸಿಸ್ ಬೌಲರ್‌ಗಳು ಉತ್ತಮ ಯಶಸ್ಸು ಸಾಧಿಸಲು ವಿಫಲವಾಗಿದ್ದಾರೆ. ಆಸ್ಟ್ರೇಲಿಯಾ ತಂಡದ ಅನುಭವಿ ಸ್ಪಿನ್ನರ್ ನಥನ್ ಲಿಯಾನ್ ಮಾತ್ರವೇ ಒಂದು ವಿಕೆಟ್ ಕಬಳಿಸಲು ಯಶಸ್ವಿಯಾದರು.

Live ಸ್ಕೋರ್‌ಕಾರ್ಡ್ ಹೀಗಿದೆ:

1
52518

ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ಎರಡೂ ತಂಡಗಳು ವಿಭಿನ್ನ ಸಂಯೋಜನೆಯೊಂದಿಗೆ ಕಣಕ್ಕಿಳಿದಿದೆ. ಪಾಕಿಸ್ತಾನ ಪಡೆ ಮೂವರು ಸ್ಪಿನ್ನರ್‌ಗಳೊಂದಿಗೆ ಆಡಲಿಳಿದಿದ್ದರೆ ಆಸ್ಟ್ರೇಲಿಯಾ ಎಂದಿನಂತೆಯೇ ನಾಲ್ವರು ವೇಗಿಗಳು ಹಾಗೂ ಓರ್ವ ಸ್ಪಿನ್ನರ್‌ನೊಂದಿಗೆ ದಾಳಿಗೆ ಇಳಿದಿದೆ.

ಇನ್ನು ಈ ಸುರಕ್ಷತೆಯ ಕಾರಣದಿಂದಾಗಿ ಈ ಸರಣಿಗೆ ಸಾಕಷ್ಟು ಭದ್ರತೆಯನ್ನು ನೀಡಲಾಗಿದೆ. ಅದರಲ್ಲೂ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸದಸ್ಯರು ವಾಸ್ತವ್ಯ ಹೊಂದಿರುವ ಹೋಟೆಲ್ ಹಾಗೂ ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ಪೊಲೀಸ್ ಹಾಗೂ ಸಶಸ್ತ್ರಪಡೆಗಳ ಸಿಬ್ಬಂದಿಗಳು ಭಾರೀ ಪ್ರಮಾಣದಲ್ಲಿದ್ದು ಭದ್ರತೆಯನ್ನು ನೋಡಿಕೊಳ್ಳುತ್ತಿದ್ದಾರೆ.

ಪಾಕಿಸ್ತಾನ ಪ್ಲೇಯಿಂಗ್ XI: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಫವಾದ್ ಆಲಂ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ನೌಮನ್ ಅಲಿ, ಸಾಜಿದ್ ಖಾನ್, ನಸೀಮ್ ಶಾ, ಶಾನ್ ಅಫ್ರಿದಿ
ಬೆಂಚ್: ಮೊಹಮ್ಮದ್ ವಾಸಿಂ ಜೂನಿಯರ್, ಶಾನ್ ಮಸೂದ್, ಸೌದ್ ಶಕೀಲ್, ಜಾಹಿದ್ ಮಹಮೂದ್

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಮೈಕೆಲ್ ಮಾರ್ಷ್, ಮಾರ್ಕಸ್ ಹ್ಯಾರಿಸ್, ಮಾರ್ಕ್ ಸ್ಟೆಕೆಟ್, ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಮಿಚೆಲ್ ಸ್ವೆಪ್ಸನ್, ಜೋಶ್ ಇಂಗ್ಲಿಷ್

Story first published: Saturday, March 5, 2022, 10:43 [IST]
Other articles published on Mar 5, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+