ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

30ನೇ ಟೆಸ್ಟ್ ಶತಕ ಸಿಡಿಸಿದ ಸ್ಟೀವ್ ಸ್ಮಿತ್, ದ್ವಿಶತಕದ ಹೊಸ್ತಿಲಲ್ಲಿ ಖವಾಜ: ಉತ್ತಮ ಸ್ಥಿತಿಯಲ್ಲಿ ಆಸಿಸ್ ಪಡೆ

Australia vs South Africa 3rd Test, Steve Smith and Usman Khawaza hits Century, Day 2 Highlights

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದ್ದು ಎರಡನೇ ದಿನದಾಟದಲ್ಲಿ ಆಸ್ಟ್ರೇಲಿಯಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಆಸ್ಟ್ರೇಲಿಯಾ ಪರವಾಗಿ ಆರಂಭಿಕ ಆಟಗಾರ ಉಸ್ಮಾನ್ ಖವಾಜ ಹಾಗೂ ಸ್ಟೀವ್ ಸ್ಮಿತ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ತಂಡ ಬೃಹತ್ ಮೊತ್ತದತ್ತ ಮುನ್ನುಗ್ಗಲು ಕಾರಣವಾಗಿದ್ದಾರೆ.

ಮೊದಲ ದಿನ ಮಂದ ಬೆಳಕಿನ ಕಾರಣದಿಂದಾಗಿ ಕೇವಲ 45 ಓವರ್‌ಗಳ ಆಟ ಮಾತ್ರವೇ ನಡೆದಿತ್ತು. ಎರಡೇ ದಿನದಾಟದಲ್ಲಿ ಉಸ್ಮಾನ್ ಖವಾಜ ಹಾಗೂ ಸ್ಟೀವ್ ಸ್ಮಿತ್ ದಕ್ಷಿಣ ಆಫ್ರಿಕಾ ಬೌಲರ್‌ಗಳ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿದರು. ಎರಡನೇ ದಿನದಾಟದ ಮುಕ್ತಾಯಕ್ಕೆ ಆಸ್ಟ್ರೇಲಿಯಾ ತಂಡ 475 ರನ್‌ಗಳನ್ನು ಗಳಿಸಿದ್ದು ಕೇವಲ 4 ವಿಕೆಟ್ ಕಳೆದುಕೊಂಡಿದೆ. ಉಸ್ಮಾನ್ ಖವಾಜ 195 ರನ್‌ಗಳಿಸಿ ಅಜೇಯವಾಗಿಳಿದಿದ್ದರೆ ಮ್ಯಾಟ್ ರೆನ್‌ಶಾ 5 ರನ್‌ಗಳಿಸಿ ಮತ್ತೊಂದು ತುದಿಯಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.

Rishabh Pant: ರಿಷಬ್‌ ಪಂತ್‌ಗೆ ಲಂಡನ್‌ನಲ್ಲಿ ನಡೆಯಲಿದೆ ಶಸ್ತ್ರಚಿಕಿತ್ಸೆ : 9 ತಿಂಗಳು ಕ್ರಿಕೆಟ್ ಆಡೋದೆ ಅನುಮಾನ!Rishabh Pant: ರಿಷಬ್‌ ಪಂತ್‌ಗೆ ಲಂಡನ್‌ನಲ್ಲಿ ನಡೆಯಲಿದೆ ಶಸ್ತ್ರಚಿಕಿತ್ಸೆ : 9 ತಿಂಗಳು ಕ್ರಿಕೆಟ್ ಆಡೋದೆ ಅನುಮಾನ!

30ನೇ ಶತಕ ಸಿಡಿಸಿದ ಸ್ಟೀವ್ ಸ್ಮಿತ್

30ನೇ ಶತಕ ಸಿಡಿಸಿದ ಸ್ಟೀವ್ ಸ್ಮಿತ್

ಆಸ್ಟ್ರೇಲಿಯಾದ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ತಮ್ಮ ಅಮೋಘ ಫಾರಮ್ ಮುಂದುವರಿಸಿದ್ದು ಮತ್ತೊಂದು ಭರ್ಜರಿ ಶತಕ ಸಿಡಿಸಿದ್ದಾರೆ. ಇದು ಸ್ಟೀವ್ ಸ್ಮಿತ್ ಅವರ 30ನೇ ಟೆಸ್ಟ್ ಶತಕವಾಗಿದೆ. ಈ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಬ್ರಾಡ್ಮನ್ ದಾಖಲೆಯನ್ನು ಸ್ಟೀವ್ ಸ್ಮಿತ್ ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದೆಡೆ ಉಸ್ಮಾನ್ ಖವಾಜ ಕೂಡ ಕಮ್‌ಬ್ಯಾಕ್ ಮಾಡಿದ ಬಳಿಕ ಸ್ಥಿರ ಪ್ರದರ್ಶನ ನೀಡುತ್ತಿದ್ದು ದ್ವಿಶತಕದ ಹೊಸ್ತಿಲಲ್ಲಿದ್ದಾರೆ. ಎರಡನೇ ದಿನದಾಟ ಅಂತ್ಯವಾಗುವ ಸಂದರ್ಭದಲ್ಲಿ ಖವಾಜ ಭರ್ಜರಿ 195 ರನ್‌ಗಳಿಸಿ ಅಜೇಯವಾಗುಳಿದಿದ್ದರು.

ಜಿಂಬಾಬ್ವೆ ತಂಡದಲ್ಲಿ ಸ್ಥಾನ ಪಡೆದ ಮಾಜಿ ಇಂಗ್ಲೆಂಡ್ ಆಟಗಾರ ಗ್ಯಾರಿ ಬ್ಯಾಲೆನ್ಸ್

ಭಿನ್ನವಾಗಿ ಸಂಭ್ರಮಿಸಿದ ಸ್ಟೀವ್ ಸ್ಮಿತ್

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಶತಕ ಸಿಡಿಸಿದ ಬಳಿಕ ಭಿನ್ನವಾಗಿ ಸಂಭ್ರಮಿಸಿದ್ದಾರೆ. ಶತಕ ಸಂಪೂರ್ಣಗೊಳಿಸಿ ಅಭಿಮಾನಿಗಳತ್ತ ಬ್ಯಾಟ್ ಬೀಸಿದ ಸ್ಮಿತ್ ಬಳಿಕ ಡ್ರೆಸ್ಸಿಂಗ್‌ರೂಮ್‌ನತ್ತ ಮುಖ ಮಾಡಿ ಯಂತ್ರವನ್ನು ಸ್ಟಾರ್ಟ್ ಮಾಡುವ ರೀತಿ ಸನ್ನೆ ಮಾಡಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಇನ್ನು ಈ ಪಂದ್ಯದಲ್ಲಿ 192 ಎಸೆತಗಳನ್ನು ಎದುರಿಸಿದ ಸ್ಟೀವ್ ಸ್ಮಿತ್ 104 ರನ್‌ಗಳಿಸಿ ಕೇಶವ್ ಮಹಾರಾಜ್‌ಗೆ ವಿಕೆಟ್ ಒಪ್ಪಿಸಿದ್ದಾರೆ.

ಇತ್ತಂಡಗಳ ಆಡುವ ಬಳಗ

ಇತ್ತಂಡಗಳ ಆಡುವ ಬಳಗ

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮ್ಯಾಟ್ ರೆನ್‌ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಆಷ್ಟನ್ ಅಗರ್, ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮಾರ್ಕಸ್ ಹ್ಯಾರಿಸ್, ಲ್ಯಾನ್ಸ್ ಮೋರಿಸ್

ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಸರೆಲ್ ಎರ್ವೀ, ಹೆನ್ರಿಚ್ ಕ್ಲಾಸೆನ್, ಟೆಂಬಾ ಬವುಮಾ, ಖಯಾ ಜೊಂಡೋ, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಕಿಯಾ, ಸೈಮನ್ ಹಾರ್ಮರ್
ಬೆಂಚ್: ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಲುಂಗಿ ಎನ್ಗಿಡಿ, ಲಿಜಾಡ್ ವಿಲಿಯಮ್ಸ್, ಜೆರಾಲ್ಡ್ ಕೋಟ್ಜಿ

Story first published: Thursday, January 5, 2023, 16:03 [IST]
Other articles published on Jan 5, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X