Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

AUS vs SL: ಪ್ರಥಮ ಟಿ ಟ್ವೆಂಟಿ ಪಂದ್ಯದ ಟಾಸ್ ವರದಿ ಮತ್ತು ಲೈವ್ ಸ್ಕೋರ್ ಮಾಹಿತಿ

Austalia vs Sri Lanka first T20: Toss report, playing 11 and live score

ಇಂಡಿಯನ್ ಪ್ರೀಮಿಯರ್ ಲೀಗ್ ಹದಿನೈದನೇ ಆವೃತ್ತಿ ಮುಕ್ತಾಯವಾದ ಬೆನ್ನಲ್ಲೇ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗಳು ಗರಿಗೆದರಿದ್ದು, ಸಾಲು ಸಾಲು ಸರಣಿಗಳು ಆಯೋಜನೆಯಾಗಿವೆ. ಒಂದೆಡೆ ಇದೇ ಗುರುವಾರದಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ ಟ್ವೆಂಟಿ ಸರಣಿ ಆರಂಭವಾಗುತ್ತಿದ್ದರೆ, ನಾಳೆ ( ಜೂನ್ 8 ) ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಆರಂಭವಾಗುತ್ತಿದೆ. ಇದಕ್ಕೂ ಮುನ್ನ ಇಂದು ( ಜೂನ್ 7 ) ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಿನ ಸರಣಿಗಳಿಗೂ ಚಾಲನೆ ದೊರೆತಿದೆ.

ಹೌದು, ಆಸ್ಟ್ರೇಲಿಯಾ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿದ್ದು, ಮೂರು ಪಂದ್ಯಗಳ ಟಿ ಟ್ವೆಂಟಿ ಸರಣಿ, ಐದು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಗಳಲ್ಲಿ ಭಾಗವಹಿಸುತ್ತಿದೆ. ಮೊದಲಿಗೆ ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ಮೂರು ಪಂದ್ಯಗಳ ಪೈಕಿಯ ಮೊದಲ ಪಂದ್ಯ ಇಂದು ಕೊಲಂಬೊದ ಆರ್ ಪ್ರೇಮದಾಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ.

ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಆರನ್ ಫಿಂಚ್ ಬೌಲಿಂಗ್ ಆಯ್ದುಕೊಂಡಿದ್ದು, ಅತಿಥೇಯ ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಅದರಂತೆ ಮೊದಲು ಸಿಂಹಳೀಯರು ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಪಂದ್ಯದ ಲೈವ್ ಸ್ಕೋರ್ ಮತ್ತು ಆಡುವ ಬಳಗದ ಮಾಹಿತಿ ಕೆಳಕಂಡಂತಿದೆ.

1
53762

ಶ್ರೀಲಂಕಾ ಆಡುವ ಬಳಗ: ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಭಾನುಕಾ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಮಹೀಶ್ ತೀಕ್ಷಣ, ನುವಾನ್ ತುಷಾರ

ಆಸ್ಟ್ರೇಲಿಯಾ ಆಡುವ ಬಳಗ: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ಸನ್, ಜೋಶ್ ಹ್ಯಾಜಲ್‌ವುಡ್

Story first published: Tuesday, June 7, 2022, 19:24 [IST]
Other articles published on Jun 7, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+