For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಶ್ರೀಲಂಕಾ: ಆತ್ಮವಿಶ್ವಾಸದಲ್ಲಿ ಶನಕ ಪಡೆ: ಏಕದಿನ ಸರಣಿಯಲ್ಲಿ ಮೇಲುಗೈ ಸಾಧಿಸುತ್ತಾ ಶ್ರೀಲಂಕಾ

Australia vs Sri Lanka: ODI series, Sri Lanka eye on ODI Series victory

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಬಳಿಕ ಇದೀಗ ಎರಡು ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದೆ. ಪಲ್ಲೆಕೆಲೆಯಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಅದ್ಭುತ ರೀತಿಯಲ್ಲಿ ಗೆದ್ದು ಬೀಗಿರುವ ಶ್ರೀಲಂಕಾ ಏಕದಿನ ಸರಣಿಯಲ್ಲಿಯೂ ಆತ್ಮವಿಶ್ವಾಸದಿಂದ ಕಣಕ್ಕಿಳಿದಿದೆ. ಇನ್ನು ಆಸ್ಟ್ರೇಲಿಯಾ ಕೂಡ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿದಿದ್ದು ಏಕದಿನ ಸರಣಿಯಲ್ಲಿ ಪೈಪೋಟಿಯ ಕದನ ಏರ್ಪಡುವ ನಿರೀಕ್ಷೆಯಿದೆ.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ 2-1 ಅಂತರದಿಂದ ಗೆದ್ದು ಬೀಗಿತ್ತು. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಎಕಟ್‌ಗಳಿಂದ ಭರ್ಜರಿಯಾಗಿ ಗೆದ್ದಿದ್ದರೆ ಎರಡನೇ ಪಂದ್ಯದಲ್ಲಿ ಆಸಿಸ್ 3 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಆದರೆ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ನಾಯಕ ದಾಸುನ್ ಶನಕ ಅವರ ಅಮೋಘ ಪ್ರದರ್ಶನದ ನೆರವಿನಿಂದಾಗಿ ಅಂತಿಮ ಓವರ್‌ನಲ್ಲಿ ರೋಚಕವಾಗಿ ಗೆದ್ದು ಬೀಗಿತ್ತು.

ಇನ್ನು ಐದು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಈ ಸರಣಿಯ ಮೊದಲ ಎರಡು ಪಂದ್ಯಗಳು ಪಲ್ಲೆಕೆಲೆಯಲ್ಲಿ ನಡೆದರೆ ಉಳಿದ ಮೂರು ಪಂದ್ಯಗಳು ಕೊಲಂಬೋದಲ್ಲಿ ನಡೆಯಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿ ಕೂಡ ನಡೆಯಲಿದ್ದು ಎರಡು ಪಂದ್ಯಗಳು ಕೂಡ ಗಾಲೆಯಲ್ಲಿ ಆಯೋಜನೆಯಾಗಲಿದೆ.

ಆಡುವ ಬಳಗ ಹೀಗಿದೆ

ಶ್ರೀಲಂಕಾ: ಪಾತುಂ ನಿಸ್ಸಾಂಕ, ದನುಷ್ಕ ಗುಣತಿಲಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಾಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನ, ದುಷ್ಮಂತ ಚಮೀರ, ದುನಿತ್ ವೆಲ್ಲಲಗೆ, ಮಹೀಶ್ ತೀಕ್ಷಣ
ಬೆಂಚ್: ದಿನೇಶ್ ಚಾಂಡಿಮಲ್, ನಿರೋಶನ್ ಡಿಕ್ವೆಲ್ಲಾ, ರಮೇಶ್ ಮೆಂಡಿಸ್, ಅಸಿತ ಫೆರ್ನಾಂಡೋ, ಭಾನುಕಾ ರಾಜಪಕ್ಸೆ, ಲಹಿರು ಮಧುಶಂಕ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಪ್ರಮೋದ್ ಮದುಶನ್, ನುವಾನ್ ತುಷಾರ

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಜ್ಯೆ ರಿಚರ್ಡ್ಸನ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಮಿಚೆಲ್ ಸ್ವೆಪ್ಸನ್, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್

Story first published: Tuesday, June 14, 2022, 15:37 [IST]
Other articles published on Jun 14, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+