ಆಸ್ಟ್ರೇಲಿಯಾ vs ಶ್ರೀಲಂಕಾ ಟಿ20 ಸರಣಿ, 3ನೇ ಪಂದ್ಯ: Live ಸ್ಕೋರ್, ಪ್ಲೇಯಿಂಗ್ XI

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಇಂದು ಮೂರನೇ ಪಂದ್ಯ ನಡೆಯುತ್ತಿದೆ. ಕ್ಯಾನ್‌ಬೆರಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಟಿ20 ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ಮೊದಲ ಎರಡು ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದೆ. ಮೊದಲ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದಲ್ಲಿ ಆಸ್ಟ್ರೇಲಿಯಾ ತಂಡ 20 ರನ್‌ಗಳ ಅಂತರದ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯ ರೋಚಕವಾಗಿ ಸಾಗಿ ಟೈನಲ್ಲಿ ಅಂತ್ಯವಾಗಿದ್ದು. ಆದರೆ ಸೂಪರ್ ಓವರ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿ ಫಲಿತಾಂಶವನ್ನು ತನ್ನತ್ತ ಮಾಡಿಕೊಂಡಿತ್ತು. ಹೀಗಾಗಿ ಸರಣಿಯಲ್ಲಿ ಹಿನ್ನಡೆಯ ಅಂತರವನ್ನು ಕಡಿಮೆ ಮಾಡಿಕೊಳ್ಳಲು ಪ್ರವಾಸಿ ಶ್ರೀಲಂಕಾ ಈ ಪಂದ್ಯದಲ್ಲಿ ಪ್ರಯತ್ನಿಸುತ್ತಿದೆ.
ಇನ್ನು ಈ ಪಂದ್ಯದ ಆರಂಭಕ್ಕೂ ಮುನ್ನ ಶ್ರೀಲಂಕಾ ತಂಡದ ಪ್ರಮುಖ ಆಟಗಾರ ಆಲ್‌ರೌಂಡರ್ ವನಿಂದು ಹಸರಂಗ ಕೋವಿಡ್ 19ಗೆ ತುತ್ತಾಗಿರುವುದು ಪರೀಕ್ಷೆಯಲ್ಲಿ ಪತ್ತೆಯಾಗಿತ್ತು. ಹೀಗಾಗಿ ಈ ಸರಣಿಯಿಂದ ವನಿಂದು ಹಸರಂಗ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಇದು ಪ್ರವಾಸಿ ಶ್ರೀಲಂಕಾ ತಂಡಕ್ಕೆ ದೊಡ್ಡ ಹಿನ್ನಡೆಯುಂಟು ಮಾಡಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ
ಆಸ್ಟ್ರೇಲಿಯಾ ಆಡುವ ಬಳಗ: ಆರನ್ ಫಿಂಚ್ (ನಾಯಕ), ಬೆನ್ ಮೆಕ್‌ಡರ್ಮಾಟ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇನಿಯಲ್ ಸ್ಯಾಮ್ಸ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್‌ಸನ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಮೋಸೆಸ್ ಹೆನ್ರಿಕ್ಸ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಝೈ ರಿಚರ್ಡ್ಸನ್
ಶ್ರೀಲಂಕಾ ಆಡುವ ಬಳಗ: ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್), ದಾಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನ, ಜೆಫ್ರಿ ವಾಂಡರ್ಸೆ, ದುಷ್ಮಂತ ಚಮೀರ, ಮಹೀಶ್ ತೀಕ್ಷಣ, ನುವಾನ್ ತುಷಾರ ಆಡುತ್ತಿದ್ದಾರೆ
ಬೆಂಚ್: ಅವಿಷ್ಕಾ ಫೆರ್ನಾಂಡೊ, ರಮೇಶ್ ಮೆಂಡಿಸ್, ಲಹಿರು ಕುಮಾರ, ಪ್ರವೀಣ್ ಜಯವಿಕ್ರಮ, ಜನಿತ್ ಲಿಯಾನಗೆ, ಕಾಮಿಲ್ ಮಿಶ್ರಾ, ಶಿರಾನ್ ಫೆರ್ನಾಂಡೊ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications