ಆಸ್ಟ್ರೇಲಿಯಾ vs ಶ್ರೀಲಂಕಾ: 4ನೇ ಟಿ20 ಪಂದ್ಯ, Live ಸ್ಕೋರ್, ಪ್ಲೇಯಿಂಗ್ XI

ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ನಡೆಯುತ್ತಿದೆ. ಸರಣಿಯಲ್ಲಿ ಮೊದಲ ಮೂರು ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಈಗಾಗಲೇ ಚುಟುಕು ಮಾದರಿಯ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಇದೀಗ ಮತ್ತೊಂದು ಮುಖಾಮುಖಿಯಲ್ಲಿಯೂ ಆಸ್ಟ್ರೇಲಿಯಾ ಆರಂಭಿಕ ಮೇಲುಗೈ ಸಾಧಿಸಿದ್ದು ಸರಣಿಯನ್ನು ವೈಟ್‌ವಾಶ್ ಮಾಡುವತ್ತ ಚಿತ್ತ ನೆಟ್ಟಂತಿದೆ.
ಆಸ್ಟ್ರೇಲಿಯಾ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿದ್ದು ಮೊದಲಿಗೆ ಎದುರಾಳಿ ಶ್ರೀಲಂಕಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಮೆಲ್ಬರ್ನ್‌ನ ಎಂಸಿಜಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲಿಂಗ್ ದಾಳಿಯನ್ನು ಎದುರಿಸಲು ಶ್ರೀಲಂಕಾ ಪಡೆ ತಿಣುಕಾಡುತ್ತಿದ್ದು ಸವಾಲಿನ ಮೊತ್ತ ಪೇರಿಸಲು ಶ್ರಮಿಸುತ್ತಿದೆ.
ಸ್ಕೋರ್‌ಪಟ್ಟಿ ಹೀಗಿದೆ:
ಈ ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಡಕ್ವರ್ತ್ ಲೂಯಿಸ್ ನಿಯಮದಲ್ಲಿ 20 ರನ್‌ಗಳ ಅಂತರದ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾದ ಬಳಿಕ ಸೂಪರ್ ಓವರ್‌ನ್ಲಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿತು. ನಂತರ ಮೂರನೇ ಪಂದ್ಯವನ್ನು ಕೂಡ ಆಸ್ಟ್ರೇಲಿಯಾ 6 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿ ಐದು ಪಂದ್ಯಗಳ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಅಂತಿಮ ಎರಡು ಪಂದ್ಯಗಳಲ್ಲಿ ಶ್ರೀಲಂಕಾ ಗೆಲುವಿನ ನಿರೀಕ್ಷೆಯಲ್ಲಿದ್ದರೂ ಅದಕ್ಕೆ ಪೂರಕ ಪ್ರದರ್ಶನ ನಾಲ್ಕನೇ ಪಂದ್ಯದಲ್ಲ ಬಂದಿಲ್ಲ. ಮೊದಲಿಗೆ ಬ್ಯಾಟಿಂಗ್ ಶರಂಭಿಸಿರುವ ಲಂಕಾ ಪರಿಣಾಮಕಾರಿ ಪ್ರದರ್ಶನ ನೀಡಲು ವಿಫಲವಾಗಿದೆ.
ಆಸ್ಟ್ರೇಲಿಯಾ ಆಡುವ ಬಳಗ: ಬೆನ್ ಮೆಕ್‌ಡರ್ಮಾಟ್, ಆಶ್ಟನ್ ಅಗರ್, ಆರನ್ ಫಿಂಚ್ (ನಾಯಕ), ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಡೇನಿಯಲ್ ಸ್ಯಾಮ್ಸ್, ಜ್ಯೆ ರಿಚರ್ಡ್‌ಸನ್, ಕೇನ್ ರಿಚರ್ಡ್‌ಸನ್, ಆಡಮ್ ಝಂಪಾ
ಬೆಂಚ್: ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ವುಡ್, ಪ್ಯಾಟ್ ಕಮ್ಮಿನ್ಸ್, ಟ್ರಾವಿಸ್ ಹೆಡ್, ಮೊಯಿಸಸ್ ಹೆನ್ರಿಕ್ಸ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ದನುಷ್ಕ ಗುಣತಿಲಕ, ಚರಿತ್ ಅಸಲಂಕ, ಕುಸಲ್ ಮೆಂಡಿಸ್, ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್), ದಾಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಜೆಫ್ರಿ ವಾಂಡರ್ಸೆ, ಮಹೇಶ್ ತೀಕ್ಷಣ, ಲಹಿರು ಕುಮಾರ
ಬೆಂಚ್: ನುವಾನ್ ತುಷಾರ, ಶಿರಾನ್ ಫೆರ್ನಾಂಡೋ, ಕಾಮಿಲ್ ಮಿಶ್ರಾ, ಜನಿತ್ ಲಿಯಾನಗೆ, ಪ್ರವೀಣ್ ಜಯವಿಕ್ರಮ, ಅವಿಷ್ಕ ಫೆರ್ನಾಂಡೋ, ರಮೇಶ್ ಮೆಂಡಿಸ್, ಬಿನೂರ ಫೆರ್ನಾಂಡೋ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications