ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಮೊದಲ ಪಂದ್ಯದ ಟಾಸ್ ರಿಪೋರ್ಟ್ ಆಡುವ ಬಳಗ

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ತಂಡಗಳ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಿದೆ. ಈ ಸರಣಿಯ ಮೊದಲ ಪಂದ್ಯ ಇಂದಿನಿಂದ ಆರಂಭವಾಗಿದ್ದು ಪರ್ತ್ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ಆಯೋಜನೆಯಾಗಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದಿದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಆರಂಭದಲ್ಲಿ ಬೌಲಿಂಗ್ ದಾಳಿ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡ ಮಂಗಳವಾರವೇ ತನ್ನ ಆಡುವ ಬಳಗವನ್ನು ಪ್ರಕಟಿಸಿತ್ತು. ಜೋಶ್ ಹೇಜಲ್‌ವುಡ್ ಆಡುವ ಬಳಗವನ್ನು ಸೇರಿಕೊಂಡಿದ್ದು ಸ್ಕಾಟ್ ಬೊಲಾಂಡ್ ಹಾಗೂ ಮಾರ್ಕಸ್ ಹ್ಯಾರಿಸ್ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆಡುವ ಬಳಗದಿಂದ ಹೊರಗುಳಿದಿರುವ ಆಟಗಾರರಾಗಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ತಂಡದಲ್ಲಿ ಡೆವೊನ್ ಥಾಮಸ್, ರೇಮನ್ ರೈಫರ್, ಶಮರ್ ಬ್ರೂಕ್ಸ್, ಆಂಡರ್ಸನ್ ಫಿಲಿಪ್ ಆಡುವ ಬಳಗದಿಂದ ಹೊರಗುಳಿದಿರುವ ಆಟಗಾರರಾಗಿದ್ದಾರೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
54098

ತವರಿನಲ್ಲೇ ನಡೆದ ಟಿ20 ವಿಶ್ವಕಪ್‌ನಲ್ಲಿ ಲೀಗ್ ಹಂತದಿಂದಲೇ ಹೊರಬಿದ್ದಿದ್ದ ಆಸ್ಟ್ರೇಲಿಯಾ ತಂಡ ಬಳಿಕ ನಡೆದ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ವೈಟ್‌ವಾಶ್ ಮೂಲಕ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಇದೀಗ ಟೆಸ್ಟ್ ಸರಣಿಯಲ್ಲಿ ಮತ್ತೆ ಆಸಿಸ್ ಪಡೆ ಅಗ್ನಿ ಪರೀಕ್ಷೆಗೆ ಇಳಿದಿದ್ದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಹಂತದಲ್ಲಿ ಆಡಲು ಆಸಿಸ್ ಪಡೆಗೆ ಈ ಸರಣಿ ಮಹತ್ವದ್ದಾಗಿದೆ.

ಆಸ್ಟ್ರೇಲಿಯಾ ಆಡುವ ಬಳಗ: ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮಾರ್ಕಸ್ ಹ್ಯಾರಿಸ್

ವೆಸ್ಟ್ ಇಂಡೀಸ್: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಎನ್ಕ್ರುಮಾ ಬೊನ್ನರ್, ಜೆರ್ಮೈನ್ ಬ್ಲಾಕ್‌ವುಡ್, ರೋಸ್ಟನ್ ಚೇಸ್, ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೇಡನ್ ಸೀಲ್ಸ್
ಬೆಂಚ್: ಡೆವೊನ್ ಥಾಮಸ್, ರೇಮನ್ ರೀಫರ್, ಶಮರ್ ಬ್ರೂಕ್ಸ್, ಆಂಡರ್ಸನ್ ಫಿಲಿಪ್

For Quick Alerts
ALLOW NOTIFICATIONS
For Daily Alerts
Story first published: Wednesday, November 30, 2022, 7:46 [IST]
Other articles published on Nov 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X