AUS vs WI 2nd Test : ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್: ಬೃಹತ್ ಮೊತ್ತದತ್ತ ಆಸಿಸ್ ಪಡೆ, 2ನೇ ದಿನದಾಟ Live score

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ಮೊದಲ ದಿನದಾಟದಲ್ಲಿ ಆಸಿಸ್ ಪಡೆ ಭ್ಜರಿ ಬ್ಯಾಟಿಂಗ್ ನಡೆಸಿದ್ದು ಮತ್ತೊಮ್ಮೆ ದೊಡ್ಡ ಮೊತ್ತದತ್ತ ಮುನ್ನುಗ್ಗುವುದು ಸ್ಪಷ್ಟವಾಗಿದೆ. ಮಾರ್ನಸ್ ಲ್ಯಾಬುಶೈನ್ ಹಾಗೂ ಟ್ರೆವಿಸ್ ಹೆಡ್ ಅವರ ಭರ್ಜರಿ ಶತಕ ಆಸಿಸ್ ಪಡೆಯ ಮೊದಲ ದಿನದ ಯಶಸ್ಸಿಗೆ ಕಾರಣವಾಗಿದೆ.
ಆಸಿಸ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 21 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಉಸ್ಮಾನ್ ಖವಾಜ ಹಾಗೂ ಮಾರ್ನಸ್ ಲ್ಯಾಬುಶೈನ್ ಎರಡನೇ ವಿಕೆಟ್‌ಗೆ ಉತ್ತಮ ಜೊತೆಯಾಟ ನೀಡಿದರು. ಉಸ್ಮಾನ್ ಖವಾಜ 62 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಬಳಿಕ ಬಂದ ನಾಯಕ ಸ್ಟೀವ್ ಸ್ಮಿತ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಬಳಿಕ ಟ್ರೆವಿಸ್ ಹೆಡ್ ಮಾರ್ನಸ್ ವಿಂಡೀಸ್ ಬೌಲಿಂಗ್ ವಿಭಾಗಕ್ಕೆ ಕಾಡಿದರು.
Live ಸ್ಕೋರ್‌ಕಾರ್ಡ್ ಹೀಗಿದೆ
ಈ ಜೋಡಿ ಈಗಾಗಲೇ ದ್ವಿಶತಕದ ಜೊತೆಯಾಟವನ್ನು ನೀಡಿದ್ದು ಎರಡನೇ ದಿನಕ್ಕೆ ಆಟವನ್ನು ಕಾಯ್ದಿರಿಸಿದ್ದರು. ಇಬ್ಬರು ಆಟಗಾರು ಕೂಡ ಶತಕ ಸಿಡಿಸಿದ್ದು ಮಾರ್ನಸ್ 120 ರನ್‌ಗಳಿಸಿ ಅಜೇಯವಾಗುಳಿದರೆ ಟ್ರೆವಿಸ್ ಹೆಡ್ ಮೊದಲ ದಿನದಾಟದಲ್ಲಿ 114 ರನ್‌ಗಳಿಸಿದ್ದಾರೆ. ಇನ್ನು ಮಾರ್ನಸ್ ಲ್ಯಾಬುಶೈನ್ ಸತತ ಮೂರನೇ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ಮಿಂಚಿದ್ದು ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಬಾರಿಸಿದ್ದ ಅವರು ಎರಡೇ ಇನ್ನಿಂಗ್ಸ್‌ನಲ್ಲಿ ಅಜೇಯ ಶತಕ ಬಾರಿಸಿದ್ದರು.
ಇನ್ನು ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 330 ರನ್‌ಗಳಿಸಿದ್ದು 3 ವಿಕೆಟ್ ಕಳೆದುಕೊಂಡಿತು. ವೆಸ್ಟ್ ಇಂಡೀಸ್ ಪರ ಅಲ್ಜರಿ ಜೋಸೆಫ್, ಜೇಸನ್ ಹೋಲ್ಡರ್ ಹಾಗೂ ಡೆವೋನ್ ಥಾಮಸ್ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮೈಕೆಲ್ ನೆಸರ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಮಾರ್ಕಸ್ ಹ್ಯಾರಿಸ್, ಲ್ಯಾನ್ಸ್ ಮೋರಿಸ್
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಶಮರ್ ಬ್ರೂಕ್ಸ್, ಜೆರ್ಮೈನ್ ಬ್ಲಾಕ್‌ವುಡ್, ಡೆವೊನ್ ಥಾಮಸ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ರೋಸ್ಟನ್ ಚೇಸ್, ಅಲ್ಜಾರಿ ಜೋಸೆಫ್, ಆಂಡರ್ಸನ್ ಫಿಲಿಪ್, ಮಾರ್ಕ್ವಿನೋ ಮಿಂಡ್ಲಿ
ಬೆಂಚ್: ಕೈಲ್ ಮೇಯರ್ಸ್, ಕೆಮರ್ ರೋಚ್, ಜೇಡನ್ ಸೀಲ್ಸ್, ರೇಮನ್ ರೈಫರ್, ಎನ್ಕ್ರುಮಾ ಬೋನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications