AUS vs WI 2nd Test : ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಎರಡನೇ ಪಂದ್ಯದ ಟಾಸ್ ರಿಪೋರ್ಟ್ ಆಡುವ ಬಳಗ

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅಡಿಲೇಡ್ ಓವಲ್‌ನಲ್ಲಿ ಈ ಪಂದ್ಯ ಆಯೋಜನೆಯಾಗಿದ್ದು ಆತಿಥೇಯ ಆಸ್ಟ್ರೇಲಿಯಾ ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ವಿಂಡೀಸ್ ಪಡೆ ಬೌಲಿಂಗ್ ದಾಳಿಗೆ ಇಳಿದಿದೆ.
ಇನ್ನು ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದಲ್ಲಿ ಎರಡು ಇಬ್ಬರು ಆಟಗಾರರು ಪದಾರ್ಪಣೆ ಮಾಡುತ್ತಿದ್ದಾರೆ. ಡೆವೋನ್ ಥಾಮಸ್ ಹಾಗೂ ಮಾರ್ಕೊನೋ ಮೈಂಡ್ಲಿ ವೆಸ್ಟ್ ಇಂಡೀಸ್ ಟೆಸ್ಟ್ ತಂಡದಲ್ಲಿ ಚೊಚ್ಚಲ ಬಾರಿಗೆ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಆಸ್ಟ್ರೇಲಿಯಾ ತಂಡದ ಖಾಯಂ ನಾಯಕ ಪ್ಯಾಟ್ ಕಮ್ಮಿನ್ಸ್ ಗಾಯದ ಕಾರಣ ಈ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ. ಹೀಗಾಗಿ ಉಪ ನಾಯಕ ಸ್ಟೀವ್ ಸ್ಮಿತ್ ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುತ್ತಿದ್ದಾರೆ.
Live ಸ್ಕೋರ್ ಹೀಗಿದೆ
ಇನ್ನು ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಅಮೋಘ ಪ್ರದರ್ಶನ ನೀಡಿ ಗೆಲುವು ಸಾಧಿಸಿತ್ತು. ಮಾರ್ನಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್ ಅವರ ಅಮೋಘ ದ್ವಿಶತಕದ ಕಾರಣದಿಂದಾಗಿ ಆಸಿಸ್ ಪಡೆ ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತ ದಾಖಲಿಸಿತ್ತು. ಬೌಲಿಂಗ್‌ನಲ್ಲಿಯೂ ಆಸಿಸ್ ಬಳಗ ಮೇಲುಗೈ ಸಾಧಿಸಿದ ಕಾರಣ ಆ ಪಂದ್ಯದಲ್ಲಿ 164 ರನ್‌ಗಳ ಬೃಹತ್ ಅಂತರದಿಂದ ಆಸ್ಟ್ರೇಲಿಯಾ ಗೆಲುವು ಸಾಧಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ವೈಟ್‌ವಾಶ್ ಮಾಡುವ ಗುಡಿಯಿಟ್ಟುಕೊಂಡು ಕಣಕ್ಕಿಳಿದಿದೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮೈಕೆಲ್ ನೆಸರ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
ಬೆಂಚ್: ಮಾರ್ಕಸ್ ಹ್ಯಾರಿಸ್, ಲ್ಯಾನ್ಸ್ ಮೋರಿಸ್
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಶಮರ್ ಬ್ರೂಕ್ಸ್, ಜೆರ್ಮೈನ್ ಬ್ಲಾಕ್‌ವುಡ್, ಡೆವೊನ್ ಥಾಮಸ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ರೋಸ್ಟನ್ ಚೇಸ್, ಅಲ್ಜಾರಿ ಜೋಸೆಫ್, ಆಂಡರ್ಸನ್ ಫಿಲಿಪ್, ಮಾರ್ಕ್ವಿನೋ ಮಿಂಡ್ಲಿ
ಬೆಂಚ್: ಕೈಲ್ ಮೇಯರ್ಸ್, ಕೆಮರ್ ರೋಚ್, ಜೇಡನ್ ಸೀಲ್ಸ್, ರೇಮನ್ ರೈಫರ್, ಎನ್ಕ್ರುಮಾ ಬೋನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications