ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್‌: ಸೋಲಿನ ಸೇಡು ತೀರಿಸಿಕೊಂಡ ಕಾಂಗರೂಗಳು

Australia vs West Indies: Australia beat West Indies by 6 wickets to win ODI series

ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ತಂಡ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಹೀನಾಯವಾಗಿ ಸೋತಿತ್ತು. ಟಿ ಟ್ವೆಂಟಿ ಸ್ಪೆಷಲಿಸ್ಟ್ಸ್ ಎಂದೇ ಖ್ಯಾತಿಯನ್ನು ಪಡೆದಿರುವ ವೆಸ್ಟ್ ಇಂಡೀಸ್ ತಂಡ ಆಸ್ಟ್ರೇಲಿಯಾ ತಂಡವನ್ನು 4-1 ಅಂತರದಲ್ಲಿ ಮಣಿಸಿ ಟಿ ಟ್ವೆಂಟಿ ಸರಣಿಯನ್ನು ತನ್ನದಾಗಿಸಿಕೊಂಡಿತ್ತು.

ವಿಡಿಯೋ: ಸೂರ್ಯಕುಮಾರ್ ಯಾದವ್ ಅರ್ಧಶತಕದ ಬೆನ್ನಲ್ಲೇ ವಿಕೆಟ್ ಒಪ್ಪಿಸಿದ್ದಕ್ಕೆ ದ್ರಾವಿಡ್ ಬೇಸರವಿಡಿಯೋ: ಸೂರ್ಯಕುಮಾರ್ ಯಾದವ್ ಅರ್ಧಶತಕದ ಬೆನ್ನಲ್ಲೇ ವಿಕೆಟ್ ಒಪ್ಪಿಸಿದ್ದಕ್ಕೆ ದ್ರಾವಿಡ್ ಬೇಸರ

ಟಿ ಟ್ವೆಂಟಿ ಸರಣಿಯ ಕೊನೆಯ ಪಂದ್ಯದಲ್ಲಿ ತಂಡದ ನಾಯಕ ಆ್ಯರೋನ್ ಫಿಂಚ್ ಮೊಣಕೈ ಗಾಯಕ್ಕೆ ತುತ್ತಾದ ಕಾರಣ ಏಕದಿನ ಸರಣಿಗೆ ಆಸ್ಟ್ರೇಲಿಯದ ಅಲೆಕ್ಸ್ ಕ್ಯಾರಿಯನ್ನು ನಾಯಕನನ್ನಾಗಿ ನೇಮಿಸಲಾಯಿತು. ಟಿ ಟ್ವೆಂಟಿ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಸೋತು ಕಂಗಾಲಾಗಿದ್ದ ಕಾಂಗರೂಗಳು 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದಿಂದ ಜಯ ಸಾಧಿಸುವುದರ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡು ಟಿ ಟ್ವೆಂಟಿ ಸರಣಿಯ ಸೋಲಿನ ಸೇಡನ್ನು ತೀರಿಸಿಕೊಂಡಿದೆ.

ಟೋಕಿಯೋ ಒಲಿಂಪಿಕ್ಸ್ ಹಾಕಿ: ಸ್ಪೇನ್ ವಿರುದ್ಧ ಭಾರತಕ್ಕೆ ಭರ್ಜರಿ ಜಯಟೋಕಿಯೋ ಒಲಿಂಪಿಕ್ಸ್ ಹಾಕಿ: ಸ್ಪೇನ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಮೊದಲನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಆಸ್ಟ್ರೇಲಿಯಾ 133 ರನ್‌ಗಳ ಗೆಲುವನ್ನು ಸಾಧಿಸಿತು ಮತ್ತು ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 4 ವಿಕೆಟ್‍ಗಳ ಗೆಲುವನ್ನು ಸಾಧಿಸುವುದರ ಮೂಲಕ ಸರಣಿ ಸಮಬಲವಾಗಿತ್ತು. ಹೀಗಾಗಿ ಮಂಗಳವಾರ ನಡೆದ ಮೂರನೇ ಏಕದಿನ ಪಂದ್ಯ ಎರಡೂ ತಂಡಗಳಿಗೂ ಸಹ ಅತಿಮುಖ್ಯವಾದ ಪಂದ್ಯವಾಗಿತ್ತು. ಈ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ತತ್ತರಗೊಂಡು ಕೇವಲ 152 ರನ್‌ಗಳಿಗೆ ಆಲ್ಔಟ್ ಆಯಿತು. ವೆಸ್ಟ್ ಇಂಡೀಸ್ ತಂಡದ ಪರ ಎವಿನ್ ಲೆವಿಸ್ ಅಜೇಯ 55 ರನ್ ಬಾರಿಸಿ ಏಕಾಂಗಿ ಹೋರಾಟ ನಡೆಸಿದರು. ಅತ್ತ ಆಸ್ಟ್ರೇಲಿಯಾ ತಂಡದ ಪರ ಮಿಚೆಲ್ ಸ್ಟಾರ್ಕ್ 3 ವಿಕೆಟ್, ಹೇಜಲ್ ವುಡ್, ಆ್ಯಸ್ಟನ್ ಅಗರ್ ಹಾಗೂ ಆ್ಯಡಮ್ ಜಂಪಾ ತಲಾ 2 ವಿಕೆಟ್ ಮತ್ತು ಆ್ಯಸ್ಟನ್ ಟರ್ನರ್ 1 ವಿಕೆಟ್ ಪಡೆದು ಮಿಂಚಿದರು.

'ಆತ ಕೊಹ್ಲಿ, ರೋಹಿತ್‌ಗಿಂತ ಕಡಿಮೆಯೇನಲ್ಲ'; ಟೀಮ್ ಇಂಡಿಯಾದ ಆ ಆಟಗಾರನನ್ನು ಹೊಗಳಿದ ನೆಹ್ರಾ'ಆತ ಕೊಹ್ಲಿ, ರೋಹಿತ್‌ಗಿಂತ ಕಡಿಮೆಯೇನಲ್ಲ'; ಟೀಮ್ ಇಂಡಿಯಾದ ಆ ಆಟಗಾರನನ್ನು ಹೊಗಳಿದ ನೆಹ್ರಾ

ಹಂಗಾಮಿ ಮುಖ್ಯಮಂತ್ರಿಗೆ ಏನೆಲ್ಲಾ ಅಧಿಕಾರ ಇರುತ್ತೆ ಗೊತ್ತಾ? | Oneindia Kannada

153 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ಕೇವಲ 30.3 ಓವರ್‌ಗಳಲ್ಲಿ 4 ವಿಕೆಟ್‍ಗಳನ್ನು ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು. ಆಸ್ಟ್ರೇಲಿಯಾ ತಂಡದ ಪರ ನಾಯಕ ಅಲೆಕ್ಸ್ ಕ್ಯಾರಿ 35, ಮಿಚೆಲ್ ಮಾರ್ಷ್ 29, ಮ್ಯಾಥ್ಯೂ ವೇಡ್ ಅಜೇಯ 51 ಹಾಗೂ ಆ್ಯಸ್ಟನ್ ಅಗರ್ ಅಜೇಯ 19 ರನ್ ಸಿಡಿಸಿ ಆಸ್ಟ್ರೇಲಿಯವನ್ನು ಗೆಲುವಿನ ದಡ ಸೇರಿಸಿದರು. ಆಸ್ಟ್ರೇಲಿಯಾ ತಂಡದ ಆ್ಯಸ್ಟನ್ ಅಗರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ಮಿಚೆಲ್ ಸ್ಟಾರ್ಕ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Story first published: Tuesday, July 27, 2021, 10:38 [IST]
Other articles published on Jul 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X