ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

AUS vs WI 1st Test : ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: 4ನೇ ದಿನದಾಟ, Live ಸ್ಕೋರ್

Australia vs West Indies Perth Test, 4th day Live score details

ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಪರ್ತ್‌ನಲ್ಲಿ ನಡೆಯುತ್ತಿದ್ದು ನಾಲ್ಕನೇ ದಿನದಾಟ ಆರಂಭವಾಗಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತನ್ನ ಸಂಪೂರ್ಣ ಹಿಡಿತವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದು ವಿಂಡೀಸ್ ಪಡೆಯನ್ನು ಸಾಧ್ಯವಾದಷ್ಟು ಬೇಗ ಮಣಿಸುವ ಉತ್ಸಾಹದಲ್ಲಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಆಸ್‌ಟರೇಲಿಯಾ ಬಳಿಕ ಬೌಲಿಂಗ್‌ನಲ್ಲಿಯೂ ಮಿಂಚಿದ್ದ ವೆಸ್ಟ್ ಇಂಡೀಸ್ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಶೀಘ್ರವಾಗಿ ಔಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಇದೀಗ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ನಡೆಸುತ್ತಿದೆ ಆಸ್ಟ್ರೇಲಿಯಾ.

ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಮಾರ್ನಸ್ ಲ್ಯಾಬುಶೈನ್ ಹಾಗೂ ಸ್ಟೀವ್ ಸ್ಮಿತ್ ಅವರ ಅದ್ಭುತ ದ್ವಿಶತಕದ ನೆರವಿನಿಂದಾಗಿ 598 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಬಳಿಕ ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 283 ರನ್‌ಗಳನ್ನು ಮಾತ್ರವೇ ಗಳಿಸಿತು. ನಾಯಕ ಬ್ರಾಥ್‌ವೇಟ್ ಹಾಗೂ ಚೊಚ್ಚಲ ಪಂದ್ಯವನ್ನಾಡುತ್ತಿರುವ ಟಗೆನರೈನ್ ಚಂದರ್‌ಪಾಲ್ ಮಾತ್ರವೇ ಅರ್ಧ ಶತಕ ಸಿಡಿಸಿ ವಿಂಡೀಸ್ ಪರ ಮಿಂಚಿದರು. ಆಸ್ಟ್ರೇಲಿಯಾ ಪರವಾಗಿ ನಾಯಕ ಪ್ಯಾಟ್ ಕಮ್ಮಿನ್ಸ್ ಹಾಗೂ ಮಿಚೆಲ್ ಸ್ಟಾರ್ಕ್ ತಲಾ ಮೂರು ವಿಕೆಟ್ ಸಂಪಾದಿಸಿದ್ದಾರೆ.\

Live ಸ್ಕೋರ್‌ಕಾರ್ಡ್ ಹೀಗಿದೆ

1
54098

ವೆಸ್ಟ್ ಇಂಡೀಸ್ ತಂಡವನ್ನು 283 ರನ್‌ಗಳಿಗೆ ಆಲೌಟ್ ಮಾಡಿದ ಬಳಿಕ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 315 ರನ್‌ಗಳ ದೊಡ್ಡ ಮುನ್ನಡೆ ಸಾಧಿಸಿರುವ ಆಸ್ಟ್ರೇಲಿಯಾ ಅಸಾಧ್ಯ ಗುರಿ ನಿಗದಿಪಡಿಸಿ ಬ್ಯಾಟಿಂಗ್ ನಡೆಸುವ ಸವಾಲು ನೀಡುವ ಸಾಧ್ಯತೆಯಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಉಸ್ಮಾನ್ ಖವಾಜ ಶೀಘ್ರವಾಗಿ ವಿಕೆಟ್ ಕಳೆದುಕೊಂಡಿದ್ದು ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲ್ಯಾಬುಶೈನ್ ನಾಲ್ಕನೇ ದಿನದಾಟ ಆರಂಭಿಸಿದ್ದಾರೆ.

ಆಸ್ಟ್ರೇಲಿಯಾ ಆಡುವ ಬಳಗ: ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮಾರ್ಕಸ್ ಹ್ಯಾರಿಸ್

ವೆಸ್ಟ್ ಇಂಡೀಸ್: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಎನ್ಕ್ರುಮಾ ಬೊನ್ನರ್, ಜೆರ್ಮೈನ್ ಬ್ಲಾಕ್‌ವುಡ್, ರೋಸ್ಟನ್ ಚೇಸ್, ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೇಡನ್ ಸೀಲ್ಸ್
ಬೆಂಚ್: ಡೆವೊನ್ ಥಾಮಸ್, ರೇಮನ್ ರೀಫರ್, ಶಮರ್ ಬ್ರೂಕ್ಸ್, ಆಂಡರ್ಸನ್ ಫಿಲಿಪ್

Story first published: Saturday, December 3, 2022, 8:38 [IST]
Other articles published on Dec 3, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X