For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: 2ನೇ ದಿನದಾಟ, Live ಸ್ಕೋರ್

Australia vs West Indies Perth Test, day 2 Live score details

ಆಸ್ಟ್ರೇಲಿಯಾ ಹಾಗೂ ವೆಸ್ಟ ಇಂಡೀಸ್ ತಂಡಗಳ ಟೆಸ್ಟ್ ಸರಣಿಯಲ್ಲಿ ಮೂಖಾಮುಖಿಯಾಗಿದ್ದು ಮೊದಲ ಪಂದ್ಯ ಪರ್ತ್‌ನಲ್ಲಿ ನಡೆಯುತ್ತಿದೆ. ಎರಡನೇ ದಿನದಾಟ ಆರಂಭವಾಗಿದ್ದು ಆತಿಥೇಯ ಆಸ್ಟ್ರೇಲಿಯಾ ತಂಡ ಅದ್ಭುತ ಮೇಲುಗೈನೊಂದಿಗೆ ಎರಡನೇ ದಿನದಾಟ ಆರಂಭಿಸಿದೆ. ಮೊದಲ ದಿನದಾಟದಲ್ಲಿ ಆಸಿಸ್ ಪಡೆಯಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನ ಬಂದಿತ್ತು.

ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಮೊದಲ ದಿನ ಅದ್ಭುತ ಪ್ರದರ್ಶನ ನೀಡಿದೆ. ಅದರಲ್ಲೂ ಯುವ ಆಟಗಾರ ಮಾರ್ನಸ್ ಲ್ಯಾಬುಶೈನ್ ಅವರು ಅಮೋಘ ಶತಕ ಆಸಿಸ್ ಪಾಲಿಗೆ ನೆರವಾಗಿದೆ. ಅಮೊದಲ ದಿನದಾಟದಲ್ಲಿ ಲ್ಯಾಬುಶೈನ್ 154 ರನ್‌ಗಳಿಸಿ ಅಜೇಯವಾಗುಳಿಸಿದ್ದು ಎರಡನೇ ದಿನಕ್ಕಡ ಆಟವನ್ನು ಕಾಯ್ದಿರಿಸಿದ್ದಾರೆ. ಹೀಗಾಗಿ ಆಸಿಸ್ ಪಡೆ ಬೃಹತ್ ಮೊತ್ತದತ್ತ ಕಣ್ಣಿಟ್ಟಿರುವುದು ಸ್ಪಷ್ಟವಾಗಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
54098

ಆಸ್ಟ್ರೇಲಿಯಾ ತಂಡ ಈ ಪಂದ್ಯದಲ್ಲಿ ಆರಂಭಿಕ ಆಘಾತಕ್ಕೆ ಒಳಗಾಗಿತ್ತು ಅನುಭವಿ ಡೇವಿಡ್. ವಾರ್ನರ್ ತಂಡದ ಮೊತ್ತ ಕೇವಲ 9 ರನ್‌ಗಳಾಗಿದ್ದಾಗಲೇ ವಿಕೆಟದ ಕಳೆದುಕೊಂಡಿದ್ದರು. ಹೀಗಾಗಿ ವಿಂಡೀಸ್ ಬಳಗ ಆಸಿಸ್ ಬ್ಯಾಟಿಂಗ್ ವಿಭಾಗದ ಮೇಲೆ ಮೇಲುಗೈ ಸಾಧಿಸುವ ಮುನ್ಸೂಚನೆ ನೀಡಿತ್ತು. ಆದರೆ ಬಳಿಕ ಉಸ್ಮಾನ್ ಖವಾಜಾಗೆ ಜೊತೆಯಾಟದ ಮಾರ್ನಸ್ ಅದ್ಭುತ ಜೊತೆಯಾಟ ನೀಡಿದರು. ಈ ಜೋಡಿ ಎರಡೇ ವಿಕೆಟ್‌ಗೆ 142 ರ್‌ಗಳ ಬೃಹತ್ ಜೊತೆಯಾಟದಲ್ಲಿ ಭಾಗಿಯಾಯಿತು.

ಬಳಿಕ ಉಸ್ಮಾನ್ ಖವಾಜಾ 65 ರನ್‌ಗಳಿಸಿ ವಿಕೆಟ್ ಕಳೆದುಕಂಡ ನಂತರ ಸ್ಟೀವ್ ಸ್ಮಿತ್ ಮಾರ್ನಸ್‌ಗೆ ಜೊತೆಯಾದರು. ಈ ಜೋಡಿಯಿಂದಲೂ ಕೂಡ ಅಮೋಘ ಜೊತೆಯಾಟ ಬಂದಿದೆ. ಮೊದಲ ದಿನದಾಟದಲ್ಲಿ ಈ ಜೋಡಿ ಅಜೇಯವಾಗುಳಿದು ಬ್ಯಾಟಿಂಗ್ ನಡೆಸಿತು. ಈ ಮೂಲಕ ವಿಂಡೀಸ್ ಬೌಲರ್‌ಗಳು ನಿರಾಸೆ ಅನುಭವಿಸಿದ್ದಾರೆ. ಮಾರ್ನಸ್ ಲ್ಯಾಬುಶೈನ್ 154 ರನ್‌ಗಳಿಸಿ ಅಜೇಯವಾಗುಳಿದರೆ ಸ್ಟೀವ್ ಸ್ಮಿತ್ 59 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಮೊದಲೇ ದಿನದಾಟದ ಅಂತ್ಯದಲ್ಲಿ ಭರ್ಜರಿ ಕೇವಲ 2 ವಿಕೆಟ್ ಕಳೆದುಕೊಂಡು 293 ರನ್‌ಗಳಿಸಿತ್ತು. ಮೂರೇ ದಿನದಾಟದಲ್ಲಿ ಬೃಹತ್ ಮೊತ್ತದ ಸೂಚನೆ ನೀಡಿದೆ.

ಆಸ್ಟ್ರೇಲಿಯಾ ಆಡುವ ಬಳಗ: ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮಾರ್ಕಸ್ ಹ್ಯಾರಿಸ್

ವೆಸ್ಟ್ ಇಂಡೀಸ್: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ಎನ್ಕ್ರುಮಾ ಬೊನ್ನರ್, ಜೆರ್ಮೈನ್ ಬ್ಲಾಕ್‌ವುಡ್, ರೋಸ್ಟನ್ ಚೇಸ್, ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೇಡನ್ ಸೀಲ್ಸ್
ಬೆಂಚ್: ಡೆವೊನ್ ಥಾಮಸ್, ರೇಮನ್ ರೀಫರ್, ಶಮರ್ ಬ್ರೂಕ್ಸ್, ಆಂಡರ್ಸನ್ ಫಿಲಿಪ್

Story first published: Thursday, December 1, 2022, 8:36 [IST]
Other articles published on Dec 1, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+