Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS Semi-Final: ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಮುಂಬೈ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಣ ಮಹಿಳಾ ಏಕದಿನ ವಿಶ್ವಕಪ್‌ ಎರಡನೇ ಸೆಮಿಫೈನಲ್‌ ಪಂದ್ಯ ಗುರುವಾರ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಮಹತ್ವದ ಫೈನಲ್‌ಗೆ ಪ್ರವೇಶ ಪಡೆಯುವ ಕನಸು ಉಭಯ ತಂಡಗಳದ್ದಾಗಿದೆ. ಲೀಗ್‌ ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿರುವ ಭಾರತ, ಪುಟಿದೇಳುವ ವಿಶ್ವಾಸವನ್ನು ಹೊಂದಿದೆ. ಸೆಮಿಫೈನಲ್‌ ಪಂದ್ಯದಲ್ಲಿ ಮಹತ್ವದ ಟಾಸ್‌ ಗೆದ್ದ ಆಸೀಸ್‌ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಭಾರತದ ಸ್ಮೃತಿ ಮಂಧಾನ ಅವರ ಮೇಲೆ ನೆಟ್ಟಿರಲಿವೆ. ಇವರು ಆಸ್ಟ್ರೇಲಿಯಾ ವಿರುದ್ಧ ಈ ಹಿಂದೆ ಆಡಿದ 5 ಪಂದ್ಯಗಳಲ್ಲೂ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಮಹತ್ವದ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿನಿಂತು ತಂಡಕ್ಕೆ ನೆರವಾಗುವ ಆಸೆ ಸ್ಮೃತಿ ಅವರದ್ದಾಗಿದೆ. ಇನ್ನು ಸ್ಮೃತಿ ಅವರೊಂದಿಗೆ ಇನಿಂಗ್ಸ್‌ ಆರಂಭಿಸುವುದು ಯಾರು ಎಂಬ ಪ್ರಶ್ನೆಗೂ ಉತ್ತರ ಸಿಕ್ಕಿದೆ.

Australia W Win Toss Elect to Bat vs India W in Crucial ODI World Cup Semi-Final

ಭಾರತ ತಂಡ ಮಹತ್ವದ ಪಂದ್ಯಕ್ಕಾಗಿ ಮೂರು ಬದಲಾವಣೆಗಳನ್ನು ಮಾಡಿಕೊಂಡಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಪ್ರತಿಕಾ ರಾವಲ್‌ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇವರ ಬದಲಿಗೆ ಶೆಫಾಲಿ ವರ್ಮಾ ತಂಡವನ್ನು ಸೇರಿಕೊಂಡಿದ್ದಾರೆ. ಇನ್ನು ವಿಕೆಟ್‌ ಕೀಪರ್ ಬ್ಯಾಟರ್ ರಿಚಾ ಘೋಷ್‌ ಸಂಪೂರ್ಣ ಫಿಟ್ ಆಗಿದ್ದು, ತಂಡಕ್ಕೆ ಎಂಟ್ರಿ ಪಡೆದಿದ್ದಾರೆ. ಹರ್ಲಿನ್‌ ಡಿಯೋಲ್ ಬದಲಿಗೆ ಕ್ರಾಂತಿ ಗೌಡ್ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಸ್ಥಾನ ಪಡೆದಿದ್ದ ಉಮಾ ಛೆಟ್ರಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಭಾರತ ಮಹತ್ವದ ಪಂದ್ಯಕ್ಕಾಗಿ 6 ಬೌಲರ್‌ಗಳನ್ನು ಕಣಕ್ಕೆ ಇಳಿಸಿದೆ.

ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಅಮನ್ಜೋತ್ ಕೌರ್, ಹರ್ಮನ್ಪ್ರೀತ್ ಕೌರ್ (ಕ್ಯಾಪ್ಟನ್), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಧಾ ಯಾದವ್, ಕ್ರಾಂತಿ ಗೌಡ್, ಶ್ರೀ ಚರಣಿ, ರೇಣುಕಾ ಸಿಂಗ್.

ಆಸ್ಟ್ರೇಲಿಯಾ ತಂಡ: ಅಲಿಸಾ ಹೀಲಿ (ನಾಯಕಿ ಮತ್ತು ವಿಕೆಟ್ ಕೀಪರ್), ಫೋಬೆ ಲಿಚ್‌ಫೀಲ್ಡ್, ಎಲಿಸ್ ಪೆರ್ರಿ, ಬೆತ್ ಮೂನಿ, ಅನ್ನಾಬೆಲ್ ಸದರ್ಲ್ಯಾಂಡ್, ಆಶ್ಲೀ ಗಾರ್ಡ್ನರ್, ತಹ್ಲಿಯಾ ಮೆಕ್‌ಗ್ರಾತ್, ಸೋಫಿ ಮೊಲಿನಿಯಕ್ಸ್, ಕಿಮ್ ಗಾರ್ತ್, ಅಲಾನಾ ಕಿಂಗ್, ಮೇಗನ್ ಶುಟ್

Story first published: Thursday, October 30, 2025, 14:35 [IST]
Other articles published on Oct 30, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+