IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ: 2 ಕನ್ನಡಿಗರಿಗೆ ಅವಕಾಶ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯವನ್ನು ಗೆದ್ದ ಮಾನ ಉಳಿಸಿಕೊಳ್ಳಲು ಭಾರತ ಪ್ಲ್ಯಾನ್ ಮಾಡಿದೆ. ಇನ್ನು ಈ ಪಂದ್ಯದಲ್ಲಿ ಜಯ ಸಾಧಿಸಿ ಕ್ಲೀನ್ ಸ್ವೀಪ್ ಸಾಧನೆ ಮಾಡುವ ಆಸೆ ಆಸ್ಟ್ರೇಲಿಯಾ ತಂಡದ್ದಾಗಿದೆ. ರೋಚಕತೆ ಹುಟ್ಟಿಸುವ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು 7 ವಿಕೆಟ್‌ಗಳಿಂದ ಸೋತಿರುವ ಭಾರತ, ಎರಡನೇ ಏಕದಿನ ಪಂದ್ಯದಲ್ಲಿ ಪುಟಿದೇಳುವ ಕನಸು ಹೊಂದಿತ್ತು. ಆದರೆ ಆಡಿಲೇಡ್‌ನಲ್ಲಿ ನಡೆದ ಪಂದ್ಯದಲ್ಲೂ ಭಾರತ 2 ವಿಕೆಟ್‌ಗಳಿಂದ ಸೋಲು ಕಂಡಿದೆ. ಹೀಗಾಗಿ ಮೂರನೇ ಏಕದಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟ್‌ನಿಂದ ರನ್ ಬರುವುದು ಅನಿವಾರ್ಯವಾಗಿದೆ.

ಪರ್ತ್ ಹಾಗೂ ಆಡಿಲೇಡ್‌ನಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿ ಸೊನ್ನೆ ಸುತ್ತಿದ್ದ ವಿರಾಟ್ ಕೊಹ್ಲಿ, ತಮ್ಮ ಏಕದಿನ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಡಕ್ ಔಟ್ ಆಗಿದ್ದರು. ಹೀಗಾಗಿ ಮೂರನೇ ಏಕದಿನ ಪಂದ್ಯದಲ್ಲಿ ಮಿಂಚಿ ಅಬ್ಬರಿಸುವ ಅನಿವಾರ್ಯತೆ ಇದೆ. ಇನ್ನು 7 ತಿಂಗಳು ಬಳಿಕ ಮೈದಾನಕ್ಕೆ ಮರಳಿರುವ ರೋಹಿತ್ ಶರ್ಮಾ ಆಡಿಲೇಡ್‌ನಲ್ಲಿ ನಡೆದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಅಬ್ಬರಿಸಿದ್ದರು. ಮೂರನೇ ಪಂದ್ಯದಲ್ಲಿ ಇವರು ಇದೇ ರೀತಿ ಪ್ರದರ್ಶನ ನೀಡುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ಅವಕಾಶವನ್ನು ಇವರು ಪಡೆಯುವ ಸಾಧ್ಯತೆ ಇದೆ.
2 ಬದಲಾವಣೆ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕಾಗಿ ಭಾರತ ಎರಡು ಬದಲಾವಣೆಗಳೊಂದಿಗೆ ಕಣಕ್ಕೆ ಇಳಿಯಲಿದೆ. ಕಳೆದ ಎರಡೂ ಪಂದ್ಯಗಳಲ್ಲಿ ಅವಕಾಶ ಪಡೆದಿದ್ದ ಅರ್ಷದೀಪ್ ಸಿಂಗ್ ಬದಲಿಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣಾ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಪರ್ತ್‌ನಲ್ಲಿ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ನಿತೀಶ್ ಕುಮಾರ್ ರೆಡ್ಡಿಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಸ್ಥಾನದಲ್ಲಿ ಕುಲ್‌ದೀಪ್ ಯಾದವ್ ಅವರಿಗೆ ಚಾನ್ಸ್ ನೀಡಲಾಗಿದೆ.
ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಪ್ರಸಿದ್ಧ್ ಕೃಷ್ಣಾ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕಾನೊಲಿ, ಮಿಚೆಲ್ ಓವೆನ್, ನಾಥನ್ ಎಲ್ಲಿಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್,
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications