For Quick Alerts
ALLOW NOTIFICATIONS  
For Daily Alerts
 

ICC Trophy: ಪಾಂಟಿಂಗ್, ಧೋನಿ ಹಿಂದಿಕ್ಕಿ ದಾಖಲೆ ಬರೆದ ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿ ಮೆಗ್ ಲ್ಯಾನ್ನಿಂಗ್

Australia Womens Team Captain Meg Lanning Overtake Ricky Ponting And MS Dhoni In Captaincy Record

ಭಾನುವಾರ, ಫೆಬ್ರವರಿ 26ರಂದು ದಕ್ಷಿಣ ಆಫ್ರಿಕಾದಲ್ಲಿ ಮುಕ್ತಾಯಗೊಂಡ 2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ತಂಡವನ್ನು ಸೋಲಿಸಿ ಆಸ್ಟ್ರೇಲಿಯಾ ಮಹಿಳಾ ತಂಡ ಸತತ ಮೂರನೇ ಬಾರಿಗೆ ಹಾಗೂ ಒಟ್ಟಾರೆ ಆರನೇ ಬಾರಿಗೆ ಟಿ20 ವಿಶ್ವಕಪ್ ಪ್ರಶಸ್ತಿ ಎತ್ತಿ ಹಿಡಿಯಿತು.

ಅಂತಿಮ ಹಣಾಹಣಿ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯ ಮಹಿಳಾ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಕಲೆ ಹಾಕಿತು. ನಂತರ ದಕ್ಷಿಣ ಆಫ್ರಿಕಾ ಮಹಿಳಾ ತಂಡವನ್ನು 137 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿ, 19 ರನ್ ಅಭೂತಪೂರ್ವ ಗೆಲುವು ದಾಖಲಿಸಿತು. ದಕ್ಷಿಣ ಆಫ್ರಿಕಾದ ಐಸಿಸಿ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.

PSL: ಪಾಕಿಸ್ತಾನದ ಪಿಎಸ್ಎಲ್‌ನಲ್ಲಿ ಲಕ್ಷಾಂತರ ರೂ. ಮೌಲ್ಯದ ಸಿಸಿಟಿವಿ ಕ್ಯಾಮೆರಾ ಕಳವು; ಪಿಸಿಬಿಗೆ ಮುಖಭಂಗ

ಇದೇ ವೇಳೆ ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿ ಮೆಗ್ ಲ್ಯಾನ್ನಿಂಗ್ ಇದೀಗ ಕ್ರಿಕೆಟ್ ಇತಿಹಾಸದಲ್ಲಿ ನಾಯಕಿಯಾಗಿ ಅತಿ ಹೆಚ್ಚು ಐಸಿಸಿ ಟ್ರೋಫಿಗಳನ್ನು ಗೆದ್ದ ದಾಖಲೆ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಗೆಲ್ಲುವ ಮೂಲಕ ಮೆಗ್ ಲ್ಯಾನ್ನಿಂಗ್ ಈ ಮೈಲಿಗಲ್ಲನ್ನು ಸ್ಥಾಪಿಸಿದರು.

Australia Womens Team Captain Meg Lanning Overtake Ricky Ponting And MS Dhoni In Captaincy Record

ನಾಯಕಿಯಾಗಿ ಮೆಗ್ ಲ್ಯಾನ್ನಿಂಗ್ ಒಟ್ಟು ಐದು ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದು, ಅವುಗಳೆಂದರೆ 2022ರ ಐಸಿಸಿ ಏಕದಿನ ವಿಶ್ವಕಪ್, 2014, 2018, 2020 ಮತ್ತು 2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಒಳಗೊಂಡಿದೆ. ಇದು ಮೆಗ್ ಲ್ಯಾನ್ನಿಂಗ್‌ರನ್ನು ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕಿಯನ್ನಾಗಿ ಮಾಡಿದೆ.

ಮೆಗ್ ಲ್ಯಾನ್ನಿಂಗ್ ಅವರು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಪುರುಷರ ತಂಡವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಕೀರ್ತಿ ರಿಕಿ ಪಾಂಟಿಂಗ್‌ಗೆ ಸಲ್ಲುತ್ತದೆ. ತಮ್ಮ ನಾಯಕತ್ವದದಲ್ಲಿ ಒಟ್ಟು 4 ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದಾರೆ. ಅದರಲ್ಲಿ 2003, 2007ರ ಏಕದಿನ ವಿಶ್ವಕಪ್ ಮತ್ತು 2006, 2009ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲುವು ಸೇರಿವೆ.

Australia Womens Team Captain Meg Lanning Overtake Ricky Ponting And MS Dhoni In Captaincy Record


ಇನ್ನು ಮೂರನೇ ಸ್ಥಾನದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಇದ್ದು, ಎಲ್ಲಾ ಮೂರು ಮಾದರಿಯ ಐಸಿಸಿ ಟ್ರೋಫಿ ಗೆದ್ದ ಏಕೈಕ ನಾಯಕರಾಗಿದ್ದಾರೆ. ಎಂಎಸ್ ಧೊನಿ ನಾಯಕತ್ವದಲ್ಲಿ ಭಾರತ ತಂಡ 2007ರ ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್ ಮತ್ತು ಕೊನೆಯ ಬಾರಿಗೆ 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಕೊಟ್ಟಿದ್ದಾರೆ.

ಶ್ರೀಮಂತ ಕ್ರಿಕೆಟ್ ಇತಿಹಾಸದಲ್ಲಿ ಆಸ್ಟ್ರೇಲಿಯಾದ ಪುರುಷ ಮತ್ತು ಮಹಿಳಾ ತಂಡಗಳು ಒಟ್ಟಾರೆ 21 ಐಸಿಸಿ ಟ್ರೋಫಿಗಳನ್ನು ತಮ್ಮ ದೇಶಕ್ಕೆ ಕೊಂಡೊಯ್ದಿವೆ.

Story first published: Monday, February 27, 2023, 10:41 [IST]
Other articles published on Feb 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+