ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್‌ ಗರ್ವ ಭಂಗ: ಅಂತಿಮ ಏಕದಿನ ಪಂದ್ಯದಲ್ಲೂ ಆಸ್ಟ್ರೇಲಿಯಾಗೆ ಅಮೋಘ ವಿಜಯ

Australia won 3rd ODI match against England by 221 runs, won series by 3-0

ಟಿ20 ವಿಶ್ವಕಪ್ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಇಂಗ್ಲೆಂಡ್ ತಂಡಕ್ಕೆ ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ ದೊಡ್ಡ ಆಘಾತ ನೀಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ತಂಡದ ವಿರುದ್ಧ ಕ್ಲೀನ್‌ಸ್ವೀಪ್ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಅಂತಿಮ ಏಕದಿನ ಪಂದ್ಯದಲ್ಲಿಯೂ ಸರ್ವಾಂಗೀಣ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಭಾರೀ ಅಂತರದಿಂದ ಗೆದ್ದು ಬೀಗಿದೆ.

ಮೊದಲಿಗೆ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡದ ಪರವಾಗಿ ಆರಂಭಿಕರಾದ ಡೇವಿಡ್ ವಾರ್ನರ್ ಹಾಗೂ ಟ್ರೇವಿಸ್ ಹೆಡ್ ಅಮೋಘ ಜೊತೆಯಾಟ ಪ್ರದರ್ಶಿಸಿದ ಕಾರಣ ಆಸ್ಟ್ರೇಲಿಯಾದ ಬೃಹತ್ ಮೊತ್ತಕ್ಕೆ ಕಾರಣವಾದರು. ಈ ಇಬ್ಬರು ಆಟಗಾರರ ಶತಕದ ನೆರವಿನಿಂದಾಗಿ ಆಸ್ಟ್ರೇಲಿಯಾ ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾದ ಕಾರಣ 48 ಓವರ್‌ಗಳಲ್ಲಿ 355 ರನ್‌ಗಳನ್ನು ಗಳಿಸಿತು. ಡಿಎಲ್‌ಎಸ್ ನಿಯಮದ ಆಧಾರದಲ್ಲಿ 364 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಕೇವಲ 142 ರನ್‌ಗಳನ್ನು ಗಳಿಸಿ ಆಲೌಟ್ ಆಯಿತು. ಹೀಗಾಗಿ ಭರ್ಜರಿ 221 ರನ್‌ಗಳ ಅಂತರದಿಂದ ಆಸ್ಟ್ರೇಲಿಯಾ ಗೆಲುವು ಸಾಧಿಸಿದೆ.

Vijay Hajare Trophy: ಜಾರ್ಖಂಡ್ ವಿರುದ್ಧ ಸೋತು ನಾಕೌಟ್ ರೇಸ್‌ನಿಂದ ಹೊರಬಿದ್ದ ದೆಹಲಿVijay Hajare Trophy: ಜಾರ್ಖಂಡ್ ವಿರುದ್ಧ ಸೋತು ನಾಕೌಟ್ ರೇಸ್‌ನಿಂದ ಹೊರಬಿದ್ದ ದೆಹಲಿ

ಇಂಗ್ಲೆಂಡ್ ದಾಳಿ ಪುಡಿಗಟ್ಟಿದ ಆರಂಭಿಕರು

ಇಂಗ್ಲೆಂಡ್ ದಾಳಿ ಪುಡಿಗಟ್ಟಿದ ಆರಂಭಿಕರು

ಆಸ್ಟ್ರೇಲಿಯಾದ ಆರಂಭಿಕ ಜೋಡಿಯಾದ ಟ್ರೆವೀಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಇಂಗ್ಲೆಂಡ್ ಬೌಲಿಂಗ್ ದಾಳಿಯನ್ನು ಸಂಪೂರ್ಣವಾಗಿ ಪುಡಿಗಟ್ಟಿದರು. ಈ ಜೋಡಿ 38 ಓವರ್‌ಗಳಲ್ಲಿ 269 ರನ್‌ಗಳನ್ನು ಪೇರಿಸಿತು. ಟ್ರೆವಿಸ್ ಹೆಡ್ ಈ ಪಂದ್ಯದಲ್ಲಿ ಭರ್ಜರಿ 152 ರನ್‌ಗಳನ್ನು ಬಾರಿಸಿದರೆ ಡೇವಿಡ್ ವಾರ್ನರ್ 106 ರನ್‌ಗಳಿಸಿದರು. ನಂತರ ಕಣಕ್ಕಿಳಿದ ಸ್ಟೀವ್ ಸ್ಮಿತ್, ಮಿಚೆಲ್ ಮಾರ್ಶ್ ಕೂಡ ವೇಗವಾಗಿ ರನ್‌ಗಳನ್ನು ಬಾರಿಸುವ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಅಂತಿಮವಾಗಿ ಮಳೆಯಿಂದ ಪಂದ್ಯಕ್ಕೆ ಸ್ಥಗಿತವಾಗುವ ಸಂದರ್ಭದಲ್ಲಿ ಆಸ್ಟ್ರೇಲಿಯಾ ತಂಡ 48 ಓವರ್‌ಗಳಲ್ಲಿ 355 ರನ್‌ಗಳನ್ನು ಗಳಿಸಿತು. ಡಕ್ವರ್ತ್ ಲೂಯೀಸ್ ನಿಯಮದ ಆಧಾರದಲ್ಲಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 364 ರನ್‌ಗಳ ಗುರಿ ನಿಗದಿ ಪಡಿಸಲಾಯಿತು.

ಬ್ಯಾಟಿಂಗ್‌ನಲ್ಲೂ ಇಂಗ್ಲೆಂಡ್ ಕಳಪೆ

ಬ್ಯಾಟಿಂಗ್‌ನಲ್ಲೂ ಇಂಗ್ಲೆಂಡ್ ಕಳಪೆ

ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ ಬ್ಯಾಟಿಂಗ್‌ನಲ್ಲಿಯೂ ಹೀನಾಯ ಪ್ರದರ್ಶನ ನೀಡಿತು. ಜೇಸನ್ ರಾಯ್ ಅವರ 33 ರನ್ ಇಂಗ್ಲೆಂಡ್ ಪರ ದಾಖಲಾದ ಅತಿ ಹೆಚ್ಚಿನ ಮೊತ್ತವಾಗಿದೆ. ಅಗ್ರ ಕ್ರಮಾಂಕದ ಆಟಗಾರರು ವೇಗಿಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರೆ ಸ್ಪಿನ್ನರ್ ಆಡಂ ಜಂಪಾ ಮದ್ಯಮ ಕ್ರಮಾಂಕದ ಆಟಗಾರರ ವಿರುದ್ಧ ಯಶಸ್ಸು ಸಾಧಿಸಿದರು. ಆಡಂ ಜಂಪಾ 4 ವಿಕೆಟ್ ಪಡೆದರೆ ಪ್ಯಾಟ್ ಕಮ್ಮಿನ್ಸ್ ಹಾಗೂ ಶಾನ್ ಅಬಾಟ್ ತಲಾ 2 ವಿಕೆಟ್ ಪಡೆದುಕೊಂಡರು. ಅಂತಿಮವಾಗಿ 142 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ಈ ಮೂಲಕ 221 ರನ್‌ಗಳ ಬೃಹತ್ ಸೋಲು ಅನುಭವಿಸಿದೆ.

ಕ್ಲೀನ್ ಸ್ವೀಪ್ ಸಾಧಿಸಿದ ಆಸ್ಟ್ರೇಲಿಯಾ

ಕ್ಲೀನ್ ಸ್ವೀಪ್ ಸಾಧಿಸಿದ ಆಸ್ಟ್ರೇಲಿಯಾ

ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಮೂರು ಪಂದ್ಯದಲ್ಲಿಯೂ ಗೆಲುವು ಸಾಧಿಸಿದಂತಾಗಿದೆ. ಈ ಮೂಲಕ ಇಂಗ್ಲೆಂಡ್ ತಂಡ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಅಂತರದಿಂದ ಆಸ್ಟ್ರೇಲಿಯಾ ಗೆಲುವು ಸಾಧಿಸಿದರೆ ಎರಡನೇ ಪಂದ್ಯದಲ್ಲಿ 72 ರನ್‌ಗಳ ಅಂತರದಿಂದ ಗೆದ್ದುಕೊಂಡಿತ್ತು. ಇದೀಗ 221 ರನ್‌ಗಳ ಭಾರೀ ಗೆಲುವು ಸಾಧಿಸಿದೆ. ಈ ಸರಣಿಯ ಮೂರು ಪಂದ್ಯಗಳಲ್ಲಿಯೂ ಇಂಗ್ಲೆಂಡ್ ಎಲ್ಲಾ ವಿಭಾಗದಲ್ಲಿಯೂ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ.

ಇತ್ತಂಡಗಳ ಆಡುವ ಬಳಗ

ಇತ್ತಂಡಗಳ ಆಡುವ ಬಳಗ

ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಟ್ರೇವಿಸ್ ಹೆಡ್, ಸ್ಟೀವ್ ಸ್ಮಿತ್, ಮಾರ್‌ನಾಸ್ ಲ್ಯಾಬುಶೈನ್, ಅಲೆಕ್ಸ್ ಕ್ಯಾರಿ(ವಿಕೆಟ್ ಕೀಪರ್), ಮಿಚೆಲ್ ಮಾರ್ಶ್, ಮಾರ್ಕಸ್ ಸ್ಟೋಯ್ನಿಸ್, ಶಾನ್ ಅಬಾಟ್, ಪ್ಯಾಟ್ ಕಮ್ಮಿನ್ಸ್(ನಾಯಕ), ಆಡಂ ಜಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಜೋಶ್ ಇಂಗ್ಲಿಸ್, ಕ್ಯಾಮರೂನ್ ಗ್ರೀನ್, ರಿಲೇ ಮೆರಿಡಿತ್, ಮೆಜೆನ್ಜಿ ಹಾರ್ವೆ

ಇಂಗ್ಲೆಂಡ್ ಆಡುವ ಬಳಗ: ಜೇಸನ್ ರಾಯ್, ಡೇವಿಡ್ ಮಲನ್, ಜೇಮ್ಸ್ ವಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್(ನಾಯಕ ಮತ್ತು ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಸ್ಯಾಮ್ ಕರನ್, ಲಿಯಾಮ್ ಡಾವ್ಸನ್, ಡೇವಿಡ್ ವಿಲ್ಲೆ, ಒಲ್ಲಿ ಸ್ಟೋನ್, ಮೊಯೀನ್ ಅಲಿ, ಫಿಲಿಪ್ ಸಾಲ್ಟ್
ಬೆಂಚ್: ಆದಿಲ್ ರಶೀದ್, ಕ್ರಿಸ್ ಜೋರ್ಡನ್, ಲ್ಯೂಕ್ ವುಡ್

Story first published: Tuesday, November 22, 2022, 18:18 [IST]
Other articles published on Nov 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X