IND vs ODI: ಭಾರತದ ವಿರುದ್ಧ ಟಾಸ್ ಗೆದ್ದ ಆಸೀಸ್ ಬೌಲಿಂಗ್ ಆಯ್ಕೆ: ನಿತೀಶ್ ಪದಾರ್ಪಣೆ
ಬಹು ನಿರೀಕ್ಷಿತ ಆಸ್ಟ್ರೇಲಿಯಾ ಪ್ರವಾಸ ಆರಂಭವಾಗಿದೆ. ಪ್ರವಾಸದಲ್ಲಿ ಭಾರತ ತಂಡ ಮೊದಲು ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಪಂದ್ಯಕ್ಕಾಗಿ ಪರ್ತ್ ಮೈದಾನ ಸಜ್ಜಾಗಿದೆ. ಏಕದಿನ ಫಾರ್ಮೆಟ್‌ನಲ್ಲೂ ಟೀಮ್ ಇಂಡಿಯಾವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಅವರಿಂದ ಕಸಿದುಕೊಂಡಿರುವ ನಾಯಕತ್ವ ಸ್ಥಾನದಲ್ಲಿ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿದೆ. ಭಾರತದ ಪರ ನಿತೀಶ್ ಕುಮಾರ್ ರೆಡ್ಡಿ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.
ಟೀಮ್ ಇಂಡಿಯಾ ಪರ ಮೂರು ಆಲ್‌ರೌಂಡರ್‌ಗಳು ಹಾಗೂ ಇಬ್ಬರು ವೇಗಿದ ಬೌಲರ್‌ಗಳು ಕಣಕ್ಕೆ ಇಳಿಯಲಿದ್ದಾರೆ. 7 ತಿಂಗಳು ಬಳಿಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಏಕದಿನ ಫಾರ್ಮೆಟ್‌ಗೆ ಎಂಟ್ರಿ ನೀಡಲಿದ್ದಾರೆ. ಇವರಿಬ್ಬರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಇಬ್ಬರೂ ಆಟಗಾರರ ಆಟವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಒಬ್ಬನೇ ಕನ್ನಡಿಗನಿಗೆ ಅವಕಾಶ
ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಒಬ್ಬನೇ ಕನ್ನಡಿಗ ಅವಕಾಶ ಪಡೆದಿದ್ದಾರೆ. ವಿಕೆಟ್ ಕೀಪರ್ ಅನುಭವಿ ಬ್ಯಾಟರ್ ರೂಪದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇವರು ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾಗಲಿದ್ದಾರೆ. ಈ ಮೂಲಕ ಧ್ರುವ್ ಜುರೇಲ್ ಅವರು ಪದಾರ್ಪಣೆ ಮಾಡುವ ಕನಸು ಕೊಂಚ ದೂರ ಸರಿದಿದೆ. ಕರ್ನಾಟಕದ ಸ್ಟಾರ್ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ತಮ್ಮ ಅವಕಾಶಕ್ಕಾಗಿ ಇನ್ನು ಕಾಯಬೇಕಾಗುತ್ತದೆ.
ನಿತೀಶ್ ಪದಾರ್ಪಣೆ
ಟೀಮ್ ಇಂಡಿಯಾದ ಪರ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಈಗಾಗಲೇ ಪದಾರ್ಪಣೆ ಮಾಡಿರುವ ಸ್ಟಾರ್ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಏಕದಿನ ಫಾರ್ಮೆಟ್‌ಗೂ ಪದಾರ್ಪಣೆ ಮಾಡಿದ್ದಾರೆ. ನಿತೀಶ್ ಇದುವರೆಗೆ ಭಾರತೀಯ ತಂಡಕ್ಕಾಗಿ ಒಂಬತ್ತು ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 386 ರನ್ ಗಳಿಸಿದ್ದಾರೆ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದು ಶತಕವನ್ನೂ ಗಳಿಸಿದ್ದಾರೆ. ಇವರನ್ನು ಟೀಮ್ ಮ್ಯಾನೇಜ್ಮೆಂಟ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ತಯಾರಿ ಮಾಡುತ್ತಿದೆ ಎಂದು ತೋರುತ್ತಿದೆ. ಭಾರತ ಈ ಪಂದ್ಯಕ್ಕಾಗಿ ವಾಷಿಂಗ್ಟನ್ ಸುಂದರ್ ಹಾಗೂ ಅಕ್ಷರ್ ಪಟೇಲ್ ಅವರು ಸ್ಪಿನ್ ಬೌಲರ್ ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವೇಗದ ಬೌಲರ್‌ಗಳ ರೂಪದಲ್ಲಿ ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ತಂಡದ ಬಲ ತುಂಬಲಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ, ಶುಬ್ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ರೆಡ್ಡಿ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಮ್ಯಾಟ್ ಶಾರ್ಟ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ಮ್ಯಾಟ್ ರೆನ್‌ಶಾ, ಮಿಚ್ ಓವನ್, ಕೂಪರ್ ಕಾನೊಲಿ, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್, ಮ್ಯಾಟ್ ಕುಹ್ನೆಮನ್, ಜೋಶ್ ಹ್ಯಾಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications