ಆಸ್ಟ್ರೇಲಿಯಾ ಪ್ರಧಾನಿ ಭೇಟಿಯಾದ ಆಟಗಾರರು
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐದನೇ ಟೆಸ್ಟ್ ಜನವರಿ 3 ರಂದು ಸಿಡ್ನಿಯಲ್ಲಿ ನಡೆಯಲಿದೆ. ಈ ಟೆಸ್ಟ್ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಈ ವೇಳೆ ಭಾರತ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯನ್ನು ಹೊಂದಿದೆ. ಇನ್ನು ಆಸ್ಟ್ರೇಲಿಯಾ ಐದನೇ ಟೆಸ್ಟ್ ಗೆದ್ದು ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವ ವಿಶ್ವಾಸವನ್ನು ಹೊಂದಿದೆ. ಹೀಗಾಗಿ ಸಿಡ್ನಿ ಟೆಸ್ಟ್ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ. ಆಸ್ಟ್ರೇಲಿಯಾ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದ ಆಟಗಾರರು ಆಸ್ಟ್ರೇಲಿಯಾದ ಪ್ರಧಾನಿ ಆಂಟನಿ ಅಲ್ಬನೀಸ್ ಅವರನ್ನು ಭೇಟಿಯಾದರು. ಇದೀಗ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೇ ತಮ್ಮ ಎಕ್ಸ್ ಹ್ಯಾಂಡಲ್‌ನಿಂದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲು ಭಾರತ ತಂಡದ ಆಟಗಾರರು ಆಸ್ಟ್ರೇಲಿಯಾದ ಪ್ರಧಾನಿಯನ್ನು ಪಿಂಕ್ ಬಾಲ್ ಟೆಸ್ಟ್‌ಗೂ ಮುನ್ನ ಭೇಟಿ ಆಗಿದ್ದರು.

ವೈರಲ್ ಫೋಟೋ
ಆಡಿಲೇಡ್‌ನಲ್ಲಿ ನಡೆದಿದ್ದ ಪಿಂಕ್ ಬಾಲ್ ಟೆಸ್ಟ್‌ಗೂ ಮುನ್ನ ಭಾರತ ಹಾಗೂ ಪಿಎಂ ಇಲೆವೆನ್ ತಂಡಗಳ ನಡುವೆ ಒಂದು ಅಭ್ಯಾಸ ಪಂದ್ಯವು ನಡೆದಿತ್ತು. ಆ ವೇಳೆ ಭಾರತದ ಆಟಗಾರರು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಭೇಟಿಯಾಗಿದ್ದರು. ಈಗ ಪ್ರವಾಸದಲ್ಲಿ ಎರಡನೇ ಬಾರಿ ಭೇಟಿ ಆಗುವ ಅವಕಾಶ ಸಿಕ್ಕಿದೆ.
ಆಸ್ಟ್ರೇಲಿಯಾ ಪ್ರಧಾನಿಯನ್ನು ಭಾರತ ಅಷ್ಟೇ ಅಲ್ಲ ಆತಥೇಯ ತಂಡದ ಆಟಗಾರರು ಸಹ ಭೇಟಿ ಆದರು. ಪ್ರಧಾನಿ ಭೇಟಿಯ ವೇಳೆ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಸೇರಿದಂತೆ ಕಾಂಗರೂ ಪಡೆಯ ಎಲ್ಲ ಆಟಗಾರರು ಕಾಣಿಸಿಕೊಂಡರು. ಪ್ರಧಾನಿ ಆಂಥೋನಿ ಅಲ್ಬನೀಸ್ ಉಭಯ ತಂಡಗಳ ಜೊತೆಗೆ ಫೋಟೋ ತೆಗೆಸಿಕೊಂಡು ಸಾಮಾಜಿಕ ತಾಣದಲ್ಲಿ ಶೇರ್ ಮಾಡಿದ್ದಾರೆ. ಈ ಚಿತ್ರಗಳು ಈಗ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಈ ಫೋಟೋಗಳಿಗೆ ಬಳಕೆ ದಾರರು ತಮ್ಮ ತಮ್ಮ ಅನಿಸಿಕೆ ವ್ಯಕ ಪಡಿಸುತ್ತಾ ಇದ್ದಾರೆ.

ಸರಣಿಯಲ್ಲಿ ಆಸ್ಟ್ರೇಲಿಯಾ ಮುನ್ನಡೆ
ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ನಿರಾಸೆಯನ್ನು ಹೆಚ್ಚಾಗಿ ಕಂಡಿದೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿತು. ಆದರೆ ಆಡಿಲೇಡ್‌ನಲ್ಲಿ ನಡೆದ ಡೇ ಆಂಡ್ ನೈಟ್ ಟೆಸ್ಟ್‌ನಲ್ಲಿ ಸೋಲು ಕಂಡಿತು. ಬ್ರಿಸ್ಬೇನ್‌ನಲ್ಲಿ ನಡೆದ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು. ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಭಾರತ ತಂಡ 184 ರನ್‌ಗಳ ಭಾರಿ ಅಂತರದಿಂದ ಸೋಲನ್ನು ಕಂಡ ನಿರಾಸೆ ಅನುಭವಿಸಿದೆ. ಈಗ ಸಿಡ್ನಿ ಟೆಸ್ಟ್ ಜನವರಿ ಮೂರು ರಂದು ನಡೆಯಲಿದೆ, ಭಾರತ ಸೋಲು ಕಂಡಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದ ಹೊರಗುಳಿಯಬೇಕಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications