ಇಂಗ್ಲೆಂಡ್ ವಿರುದ್ಧದ ಟಿ20ಐ, ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

ಸಿಡ್ನಿ, ಆಗಸ್ಟ್ 14: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳುವುದಕ್ಕೂ ಮುನ್ನ ಪ್ರಮುಖ ಅಂತಾರಾಷ್ಟ್ರೀಯ ಟೂರ್ನಿಯೊಂದು ನಡೆಯಲಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಟಿ20ಐ ಸರಣಿ ಮತ್ತು ಏಕದಿನ ಸರಣಿಗಳಲ್ಲಿ ಪಾಲ್ಗೊಳ್ಳಲಿವೆ. ಈ ಸರಣಿ ಸಂಬಂಧಿಸಿ ಆಸ್ಟ್ರೇಲಿಯಾ ತಂಡ ಪ್ರಕಟಗೊಂಡಿದೆ.
ಇಂಗ್ಲೆಂಡ್‌ಗೆ ಪ್ರವಾಸ ಕೈಗೊಳ್ಳುವ ಆಸ್ಟ್ರೇಲಿಯಾ ತಂಡ ಅಲ್ಲಿ ಸೆಪ್ಟೆಂಬರ್ 4ರಿಂದ ಸೆಪ್ಟೆಂಬರ್ 16ರ ವರೆಗೆ 3 ಪಂದ್ಯಗಳ ಟಿ20 ಮತ್ತು 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಪ್ರವಾಸ ಸರಣಿಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಶುಕ್ರವಾರ (ಆಗಸ್ಟ್ 14) 21 ಮಂದಿಯ ತಂಡ ಪ್ರಕಟಿಸಿದೆ.
ಆಸ್ಟ್ರೇಲಿಯಾ-ಇಂಗ್ಲೆಂಡ್ ಪ್ರವಾಸ ಸರಣಿ ಮುಗಿದು ಕೆಲವೇ ದಿನಗಳಲ್ಲಿ ಅಂದರೆ ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿರುವುದರಿಂದ ಐಪಿಎಲ್ ಮೊದಲ ವಾರದಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಆಟಗಾರರು ಆಡುತ್ತಿಲ್ಲ ಎನ್ನಲಾಗುತ್ತಿದೆ. ಐಪಿಎಲ್‌ಗೂ ಮುನ್ನ ಆಟಗಾರರು 14 ದಿನಗಳ ಕ್ವಾರಂಟೈನ್ ಪಾಲಿಸಬೇಕಿರುವುದರಿಂದ ಐಪಿಎಲ್ ಮೊದಲ ವಾರ ಆಸೀಸ್-ಇಂಗ್ಲೆಂಡ್ ಆಟಗಾರರಿಗೆ ಆಡಲಾಗುತ್ತಿಲ್ಲ (ಯಾವ ತಂಡದ ಯಾರೆಲ್ಲ ಆಟಗಾರರು ಐಪಿಎಲ್ ಮೊದಲ ವಾರದಲ್ಲಿ ಆಡುತ್ತಿಲ್ಲ ಎಂಬ ಸಂಪೂರ್ಣ ಮಾಹಿತಿ ಕೆಳಗಿನ ಸ್ಟೋರಿ ಲಿಂಕ್‌ನಲ್ಲಿದೆ).
ಇಂಗ್ಲೆಂಡ್ ಪ್ರವಾಸಕ್ಕೆ ಆಸ್ಟ್ರೇಲಿಯಾ ತಂಡ (ಟಿ20ಐ, ಏಕದಿನ ಸರಣಿಗಾಗಿ)
ಆ್ಯರನ್ ಫಿಂಚ್, ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಝಲ್ವುಡ್, ಶೇನ್ ಲ್ಯಾಬುಸ್‌ಚಾಗ್ನೆ, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ರಿಲೆ ಮೆರೆಡಿತ್, ಜೋಶ್ ಫಿಲಿಪ್, ಡೇನಿಯಲ್ ಸ್ಯಾಮ್ಸ್, ಕೇನ್ ರಿಚರ್ಡ್‌ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್ , ಆಂಡ್ರ್ಯೂ ಟೈ, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಮ್ ಜಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications