ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್ ಗೆದ್ದಾಗ ತಂಡದ ಭಾಗವಾಗಿದ್ದ ಸ್ಟಾರ್ ಆಟಗಾರ ಹಠಾತ ನಿವೃತ್ತಿ ಘೋಷಿಸಿದ್ದಾರೆ. ಆಸೀಸ್ 2021ರಲ್ಲಿ ತವರಿನಲ್ಲಿ ನಡೆದ ವಿಶ್ವಕಪ್ ಗೆಲ್ಲುವಲ್ಲಿ ಮ್ಯಾಥ್ಯೂ ವೇಡ್ ನಿರ್ಣಾಯಕ ಪಾತ್ರವನ್ನು ವಹಿಸಿದ್ದರು. ವೇಡ್ ನಿರ್ಧಾರ ನಿಜಕ್ಕೂ ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. ವೇಡ್ ಆಸ್ಟ್ರೇಲಿಯಾ ಪರ ಮೂರು ಫಾರ್ಮೆಟ್‌ಗಳಲ್ಲಿ ಆಡಿ ಸೈ ಎನಿಸಿಕೊಂಡಿದ್ದರು.
ಆಸ್ಟ್ರೇಲಿಯಾ ಪರ ಮ್ಯಾಥ್ಯೂ ವೇಡ್ 2011ರಲ್ಲಿ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಅವರು ಆಸೀಸ್ ಪರ 92 ಟಿ20 ಪಂದ್ಯಗಳಲ್ಲಿ ಬ್ಯಾಟ್ ಮಾಡಿದ್ದಾರೆ. ಅಲ್ಲದೆ 134.15 ಸ್ಟ್ರೈಕ್ ರೇಟ್‌ನಲ್ಲಿ 1202 ರನ್ ಗಳಿಸಿದ್ದಾರೆ. ಈ ಫಾರ್ಮೆಟ್‌ನಲ್ಲಿ ಇವರು ಮೂರು ಅರ್ಧಶತಕಗಳನ್ನು ಸಹ ಸಿಡಿಸಿದ್ದಾರೆ. 2021 ರ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಒತ್ತಡದ ಸನ್ನಿವೇಶದಲ್ಲಿ ಮ್ಯಾಥ್ಯೂ ವೇಡ್ ಆಡಿದ ಧಾಟಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಮ್ಯಾಥ್ಯೂ ವೇಡ್ ಒಬ್ಬ ಕಲಾತ್ಮಕ ಆಟಗಾರ. ಇವರು ತಮ್ಮ ಧಮಾಕೆದಾರ ಬ್ಯಾಟಿಂಗ್‌ನಿಂದ ತಮ್ಮ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ ಪ್ಲೇಯರ್. ಇವರು ಆಸ್ಟ್ರೇಲಿಯಾ ಪರ 36 ಟೆಸ್ಟ್ ಪಂದ್ಯಗಳನ್ನು ಆಡಿದ್ದು 29.87ರ ಸರಾಸರಿಯಲ್ಲಿ 1613 ರನ್ ಕಲೆ ಹಾಕಿದ್ದಾರೆ. ಇದರಲ್ಲಿ 4 ಶತಕ ಹಾಗೂ 5 ಅರ್ಧಶತಕಗಳು ಸೇರಿವೆ. ಇನ್ನು 97 ಏಕದಿನ ಪಂದ್ಯಗಳನ್ನು ಆಡಿರುವ ಮ್ಯಾಥ್ಯೂ ವೇಡ್ 1867 ರನ್ ಕಲೆ ಹಾಕಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ 11 ಅರ್ಧಶತಕ ಸೇರಿದೆ.
ಕಳೆದ ಕೆಲವು ವರ್ಷಗಳಿಂದ ನಾನು ಉತ್ತಮವಾಗಿ ಆಡುತ್ತಿದ್ದೇನೆ. ಮತ್ತು ನಾನು ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಗಿತ್ತು. ಫಿನಿಷರ್ ಪಾತ್ರದಲ್ಲಿ ನಾನು ಮುಂದುವರೆಯಬೇಕು ಎಂದು ಅವರು ಬಯಸಿದ್ದರು. ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಸೋಲು ಕಂಡ ಬಳಿಕ, ನನ್ನ ವೃತ್ತಿಜೀವನ ಮುಗಿದಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇ ಎಂದು ತಿಳಿಸಿದ್ದಾರೆ.

ಮ್ಯಾಥ್ಯೂ ವೇಡ್ ನಿವೃತ್ತಿಯನ್ನು ಬಳಿಕವೂ ಅವರು ಟ್ಯಾಸ್ಮೆನಿಯಾ ಮತ್ತು ಹೋಬರ್ಟ್ ಹರಿಕೇನ್ಸ್ ಪರ ಲೀಗ್‌ಗಳಲ್ಲಿ ಆಡಲಿದ್ದಾರೆ. ಇದಲ್ಲದೆ, ನಿವೃತ್ತಿಯ ನಂತರ ಅವರು ಕೋಚಿಂಗ್ ವೃತ್ತಿಯನ್ನು ಮಾಡಲು ನಿರ್ಧರಿಸಿದ್ದಾರೆ. ಪಾಕಿಸ್ತಾನ ವಿರುದ್ಧದ ಟಿ20 ಸರಣಿಗೆ ಅವರನ್ನು ವಿಕೆಟ್ ಕೀಪಿಂಗ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ನೇಮಿಸಲಾಗಿದೆ.