ಜಿಂಬಾಬ್ವೆ ವಿರುದ್ಧದ 2ನೇ ಏಕದಿನ ಪಂದ್ಯ ಗೆದ್ದು ಸರಣಿ ವಶಕ್ಕೆ ಪಡೆದ ಆಸಿಸ್ ಪಡೆ

ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡನೇ ಪಂದ್ಯವನ್ನು ಕೂಡ ಆಸ್ಟ್ರೇಲಿಯಾ ಗೆದ್ದುಕೊಂಡಿದೆ. ಈ ಮೂಲಕ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಕೇವಲ 96 ರನ್‌ಗಳಿಗೆ ಆಲೌಟ್ ಆಗಿದ್ದು ಈ ಮೊತ್ತವನ್ನು ಆಸ್ಟ್ರೇಲಿಯಾ ತಂಡ 14.4 ಓವರ್‌ಗಳಲ್ಲಿ ಬೆನ್ನಟ್ಟುವ ಮೂಲಕ 8 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದೆ.
ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ ಕೇವಲ 96 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಯಾವ ಆಟಗಾರ ಕೂಡ ಆಸಿಸ್ ಬೌಲಿಂಗ್ ದಾಳಿಗೆ ದೊಟ್ಟ ಪ್ರತ್ಯುತ್ತರ ನೀಡಲು ಸಂಪೂರ್ಣವಾಗಿ ವಿಫಲವಾದರು. ಆಸಿಸ್ ವೇಗಿ ಮಿಚೆಲ್ ಸ್ಟಾರ್ಕ್ ಹಾಗು ಸ್ಪಿನ್ನರ್ ಆಡಂ ಜಂಪಾ ತಲಾ ಮುರು ವಿಕೆಟ್ ಪಡೆದು ಆಘಾತ ನೀಡಿದರೆ ಕ್ಯಾಮರೂನ್ ಗ್ರೀನ್ ಎರಡು ವಿಕೆಟ್ ಪಡೆದರು.
ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಆರಂಭಿಕ ಎರಡು ವಿಕೆಟ್‌ಗಳನ್ನು ಶೀಘ್ರವಾಗಿ ಕಳೆದುಕೊಂಡಿತ್ತು. ತಂಡದ ಮೊತ್ತ 16 ಆಗುವಷ್ಟರಲ್ಲಿ ಡೇವಿಡ್ ವಾರ್ನರ್ ಹಾಗೂ ಆರೋನ್ ಫಿಂಚ್ ವಿಕೆಟ್ ಕಳೆದುಕೊಂಡಿದ್ದರು. ನಂತರ ಸ್ಟೀವ್ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ಮುರಿಯದ ಮೂರನೇ ವಿಕೆಟ್‌ಗೆ ತಂಡಕ್ಕೆ ಜಯವನ್ನು ತಂದಿತ್ತಿದ್ದಾರೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು.
ಆಸ್ಟ್ರೇಲಿಯಾ ಪ್ಲೇಯಿಂಗ್ XI: ಆರನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಸೀನ್ ಅಬಾಟ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್
ಜಿಂಬಾಬ್ವೆ ಪ್ಲೇಯಿಂಗ್ XI: ಇನೋಸೆಂಟ್ ಕೈಯಾ, ತಡಿವಾನಾಶೆ ಮರುಮಣಿ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಟೋನಿ ಮುನ್ಯೊಂಗಾ, ಸಿಕಂದರ್ ರಜಾ, ರೆಗಿಸ್ ಚಕಬ್ವಾ (ಸಿ & ಡಬ್ಲ್ಯೂಕೆ), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ರಿಚರ್ಡ್ ಎನ್‌ಗರವ
ಬೆಂಚ್: ವಿಕ್ಟರ್ ನ್ಯುಚಿ, ಬ್ಲೆಸಿಂಗ್ ಮುಜರಾಬಾನಿ, ತಕುದ್ಜ್ವಾನಾಶೆ ಕೈಟಾನೊ, ಕ್ಲೈವ್ ಮದಂಡೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications