ಐಸಿಸಿ ನವೆಂಬರ್ ತಿಂಗಳ ಆಟಗಾರ ಪ್ರಶಸ್ತಿ; ಶಾಹೀನ್ ಅಫ್ರಿದಿ ಸೇರಿ 3 ಜನರ ನಾಮನಿರ್ದೇಶನ

ಡಿಸೆಂಬರ್ 6ರ ಮಂಗಳವಾರದಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನವೆಂಬರ್ ತಿಂಗಳ ಆಟಗಾರ ಪ್ರಶಸ್ತಿಗೆ ಮೂರು ಆಟಗಾರರನ್ನು ನಾಮನಿರ್ದೇಶನ ಮಾಡಿದೆ.

ಪಾಕಿಸ್ತಾನ ತಂಡದ ವೇಗಿ ಶಾಹೀನ್ ಶಾ ಆಫ್ರಿದಿ, ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮತ್ತು ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಅವರ ಹೆಸರುಗಳನ್ನು ಐಸಿಸಿ ಹೆಸರಿಸಿದೆ.

IND vs BAN 2nd ODI: ಭಾರತ ಗೆಲ್ಲಲೇಬೇಕಾದ ಪಂದ್ಯಕ್ಕೆ ಮಳೆ ಕಾಟ?; ಹೇಗಿದೆ ಹವಾಮಾನ, ಸಂಭಾವ್ಯ 11ರ ಬಳಗIND vs BAN 2nd ODI: ಭಾರತ ಗೆಲ್ಲಲೇಬೇಕಾದ ಪಂದ್ಯಕ್ಕೆ ಮಳೆ ಕಾಟ?; ಹೇಗಿದೆ ಹವಾಮಾನ, ಸಂಭಾವ್ಯ 11ರ ಬಳಗ

ಜೋಸ್ ಬಟ್ಲರ್ ಮತ್ತು ಆದಿಲ್ ರಶೀದ್ ಕಳೆದ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಂಗ್ಲ ತಂಡವು ಪಾಕಿಸ್ತಾನವನ್ನು ಸೋಲಿಸಿತು.

ಪಾಲ್ ಕಾಲಿಂಗ್‌ವುಡ್ ನಂತರ ಟಿ20 ವಿಶ್ವಕಪ್‌ನ ಇತಿಹಾಸದಲ್ಲಿ ಇಂಗ್ಲೆಂಡ್ ತಂಡವನ್ನು ಚಾಂಪಿಯನ್ ಪಟ್ಟದತ್ತ ಮುನ್ನಡೆಸಿದ ಎರಡನೇ ಆಟಗಾರ ಜೋಸ್ ಬಟ್ಲರ್. ಅಡಿಲೇಡ್ ಓವಲ್‌ನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಜೊಸ್ ಬಟ್ಲರ್ ಕೂಡ ಉತ್ತಮವಾದ ಅಜೇಯ 95 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು.

ಜೋಸ್ ಬಟ್ಲರ್ ನವೆಂಬರ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧ ಎರಡು ಅರ್ಧಶತಕಗಳೊಂದಿಗೆ ಟಿ20 ಪಂದ್ಯಗಳಲ್ಲಿ 207 ರನ್ ಗಳಿಸಿದರು. ಇನ್ನು ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ವಿರುದ್ಧದ ಫೈನಲ್‌ನಲ್ಲಿ ಬ್ಯಾಟಿಂಗ್ ಮಾಡಲು ಕಷ್ಟಕರವಾದ ಪಿಚ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದರು.

ರಮೇಶ್ ಪೊವಾರ್ ಎನ್‌ಸಿಎಗೆ ವರ್ಗಾವಣೆ; ಮಹಿಳಾ ಕ್ರಿಕೆಟ್ ತಂಡಕ್ಕೆ ಹೊಸ ಕೋಚ್ ನೇಮಕರಮೇಶ್ ಪೊವಾರ್ ಎನ್‌ಸಿಎಗೆ ವರ್ಗಾವಣೆ; ಮಹಿಳಾ ಕ್ರಿಕೆಟ್ ತಂಡಕ್ಕೆ ಹೊಸ ಕೋಚ್ ನೇಮಕ

ಮತ್ತೊಂದೆಡೆ, ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್‌ಗೆ ವಿಶ್ವಕಪ್‌ನಲ್ಲಿ ಸೂಪರ್ 12ರ ಇಂಗ್ಲೆಂಡ್‌ನ ಮೊದಲ ಮೂರು ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಆದರೆ, ಈ ಲೆಗ್ ಸ್ಪಿನ್ನರ್ ಶ್ರೀಲಂಕಾ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಫಾರ್ಮ್‌ಗೆ ಮರಳಿದರು. ಅಲ್ಲಿ ಆ ಪಂದ್ಯದಲ್ಲಿ 4-0-16-1ರ ಪ್ರಭಾವಿ ಅಂಕಿಅಂಶಗಳೊಂದಿಗೆ ಪಂದ್ಯ ವಿಜೇತರಾದರು.

ಅಂಧರ ಟಿ20 ವಿಶ್ವಕಪ್: ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ವೀಸಾ ನಿರಾಕರಿಸಿದ ಭಾರತಅಂಧರ ಟಿ20 ವಿಶ್ವಕಪ್: ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ವೀಸಾ ನಿರಾಕರಿಸಿದ ಭಾರತ

ಇನ್ನು ಪಾಕಿಸ್ತಾನ ತಂಡದ ವೇಗಿ ಶಾಹೀನ್ ಶಾ ಅಫ್ರಿದಿ ಕುರಿತು ಹೇಳುವುದಾದರೆ, ಅವರು ಗಾಯದಿಂದ ಹಿಂತಿರುಗಿದ ನಂತರ ಫಾರ್ಮ್‌ಗೆ ಮರಳಲು ಸಮಯವನ್ನು ತೆಗೆದುಕೊಂಡರು. ಆದರೆ ಒಮ್ಮೆ ಅವರು ತಮ್ಮ ಲಯವನ್ನು ಕಂಡುಕೊಂಡರೆ, ಅವರನ್ನು ತಡೆಯಲಾಗುವುದಿಲ್ಲ. ಈ ಎಡಗೈ ವೇಗಿ ಶಾಹೀನ್ ಶಾ ಅಫ್ರಿದಿ ಅವರು ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ವಿರುದ್ಧ 22 ರನ್‌ಗೆ 4 ವಿಕೆಟ್ ಕಬಳಿಸುವುದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದರು.

ಶಾಹೀನ್ ಶಾ ಅಫ್ರಿದಿ 6.15ರ ಎಕಾನಮಿ ದರ ಮತ್ತು 14.09ರ ಸರಾಸರಿಯಲ್ಲಿ 11 ವಿಕೆಟ್‌ಗಳೊಂದಿಗೆ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ಪ್ರಮುಖ ವಿಕೆಟ್ ಟೇಕರ್ ಆಗಿದ್ದರು.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, December 7, 2022, 2:40 [IST]
Other articles published on Dec 7, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X