For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಅಕ್ಷರ್ ಮಿಂಚು, ಮತ್ತೊಂದು ಮೈಲಿಗಲ್ಲು ಸ್ಥಾಪನೆ

Axar Patel got 22 wickets from 5 innings including 3 five-wicket haul

ಅಹ್ಮದಾಬಾದ್: ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದಾಗಿನಿಂದಲೂ ಅಕ್ಷರ್ ಪಟೇಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ್ದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಅಕ್ಷರ್ ಪಟೇಲ್ 2+5 ವಿಕೆಟ್ ಪಡೆದು ಗಮನ ಸೆಳೆದಿದ್ದರು.

ತೃತೀಯ ಟೆಸ್ಟ್‌ನಲ್ಲೂ ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ಮುಂದುವರೆದಿತ್ತು. ಅಹ್ಮದಾಬಾದ್‌ನಲ್ಲಿ ನಡೆದಿದ್ದ ಪಿಂಕ್‌ಬಾಲ್‌ ಟೆಸ್ಟ್‌ನಲ್ಲಿ 6+5 ವಿಕೆಟ್‌ ಉರುಳಿಸಿ ದಾಖಲೆ ನಿರ್ಮಿಸಿದ್ದರು. ಪಿಂಕ್‌ಬಾಲ್ ಟೆಸ್ಟ್‌ನಲ್ಲಿ 10+ ವಿಕೆಟ್ ಪಡೆದ ಮೈಲಿಗಲ್ಲು ಕೂಡ ಸ್ಥಾಪಿಸಿದ್ದರು.

ಅಹ್ಮದಾಬಾದ್‌ನಲ್ಲೇ ನಡೆಯುತ್ತಿರುವ 4ನೇ ಟೆಸ್ಟ್‌ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಅಕ್ಷರ್ 4 ವಿಕೆಟ್ ಪಡೆದಿದ್ದಾರೆ. ಇಲ್ಲಿಗೆ ಇಂಗ್ಲೆಂಡ್ ವಿರುದ್ಧ ಈವರೆಗೆ ಅಕ್ಷರ್ ಒಟ್ಟು 22 ವಿಕೆಟ್ ಪಡೆದಂತಾಗಿದೆ. ಅಂದರೆ ಕೇವಲ 5 ಟೆಸ್ಟ್‌ ಇನ್ನಿಂಗ್ಸ್‌ಗಳಲ್ಲಿ 22 ವಿಕೆಟ್ ಪಡೆದಿದ್ದಾರೆ.

5 ಇನ್ನಿಂಗ್ಸ್‌ಗಳಲ್ಲಿ 22 ವಿಕೆಟ್ ಅಷ್ಟೇ ಅಲ್ಲ, ಇದರಲ್ಲಿ 3 ಇನ್ನಿಂಗ್ಸ್‌ಗಳಲ್ಲಿ 5 ವಿಕೆಟ್‌ಗಳ ದಾಖಲೆಯೂ ನಿರ್ಮಿಸಿದ್ದಾರೆ. ಪಾದಾರ್ಪಣೆ ಟೆಸ್ಟ್‌ ಪಂದ್ಯದಿಂದಲೂ ಅಕ್ಷರ್ ಮಿನುಗುತ್ತಲೇ ಇದ್ದಾರೆ. ಏಕದಿನದಲ್ಲಿ ಒಟ್ಟು 38 ಪಂದ್ಯಗಳನ್ನಾಡಿರುವ ಅಕ್ಷರ್ ಒಟ್ಟು 45 ವಿಕೆಟ್ ದಾಖಲೆ ಹೊಂದಿದ್ದಾರೆ. ಐಪಿಎಲ್‌ನಲ್ಲಿ ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಪಟೇಲ್ ಒಟ್ಟು 97 ಪಂದ್ಯಗಳಲ್ಲಿ 80 ವಿಕೆಟ್ ಪಡೆದಿದ್ದಾರೆ.

Story first published: Thursday, March 4, 2021, 17:31 [IST]
Other articles published on Mar 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+