IND vs AUS: ಅಕ್ಷರ್-ಅಶ್ವಿನ್; ಆಸೀಸ್ ವಿರುದ್ಧ 8ನೇ ವಿಕೆಟ್‌ಗೆ ಶತಕದ ಜೊತೆಯಾಟ ನೀಡಿದ ಭಾರತದ 4ನೇ ಜೋಡಿ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಎರಡೂ ತಂಡಗಳ ಮೊದಲ ಇನ್ನಿಂಗ್ಸ್ ಮುಕ್ತಾಯಕ್ಕೆ ಪ್ರವಾಸಿ ತಂಡ 1 ರನ್ ಮುನ್ನಡೆ ಸಾಧಿಸಿತು.
ಇನ್ನು ಎರಡನೇ ದಿನದ ಅಂತಿಮ ಅವಧಿಯಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ ಪ್ರವಾಸಿ ಆಸ್ಟ್ರೇಲಿಯಾ ತಂಡವು 61 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದೆ. ಅಂತಿಮವಾಗಿ ಎರಡನೇ ದಿನದಾಟದ ಮುಕ್ತಾಯಕ್ಕೆ ಆಸ್ಟ್ರೇಲಿಯಾ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 62 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.
ಇದಕ್ಕೂ ಮುನ್ನ ಭಾರತದ ಬ್ಯಾಟಿಂಗ್ ಇನ್ನಿಂಗ್ಸ್‌ನಲ್ಲಿ ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ 114 ರನ್ ಕಲೆ ಹಾಕುವ ಮೂಲಕ, ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 8ನೇ ವಿಕೆಟ್‌ಗೆ ಭಾರತ ತಂಡದ ಪರ ಶತಕದ ಜೊತೆಯಾಟ ನೀಡಿದ ನಾಲ್ಕನೇ ಜೋಡಿ ಎನಿಸಿದರು.
ಭಾರತ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಕಳೆದುಕೊಂಡು 124 ರನ್‌ಗಳ ಹಿನ್ನಡೆಯಲ್ಲಿದ್ದಾಗ, ಈ ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಜೊತೆಗೂಡಿದರು. ಈ ಜೋಡಿಯನ್ನು ಬೇರ್ಪಡಿಸಲು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು 71 ಎಸೆತಗಳಲ್ಲಿ ಐದು ಬೌಂಡರಿಗಳ ಸಹಾಯದಿಂದ 37 ರನ್ ಗಳಿಸಿದ್ದ ರವಿಚಂದ್ರನ್ ಅಶ್ವಿನ್ ಅವರನ್ನು ಔಟ್ ಮಾಡಿದರು. ಆಗ ಭಾರತ ತಂಡದ ಹಿನ್ನಡೆ 10 ರನ್‌ಗಳಿಗೆ ಇಳಿದಿತ್ತು.

ಇನ್ನು ಅಕ್ಷರ್ ಪಟೇಲ್ 115 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ 74 ರನ್ ಗಳಿಸಿ ಟಾಡ್ ಮರ್ಫಿ ಬೌಲಿಂಗ್‌ನಲ್ಲಿ ಔಟಾದರು.
ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಅವರ 114 ರನ್‌ಗಳ ಜೊತೆಯಾಟವು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಎಂಟನೇ ವಿಕೆಟ್‌ಗೆ ಮೂರನೇ ಅತಿ ಹೆಚ್ಚು ಜೊತೆಯಾಟವೆನಿಸಿತು.
ಹರ್ಭಜನ್ ಸಿಂಗ್ ಮತ್ತು ಸಚಿನ್ ತೆಂಡೂಲ್ಕರ್ ಜೋಡಿ ಜನವರಿ, 2008ರಲ್ಲಿ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಎಂಟನೇ ವಿಕೆಟ್‌ಗೆ 129 ರನ್ ಜೊತೆಯಾಟ ನೀಡಿರುವುದು ಮೊದಲ ಸ್ಥಾನದಲ್ಲಿದೆ.
ಇನ್ನು ಕರ್ಸನ್ ಘಾವ್ರಿ ಮತ್ತು ಸೈಯದ್ ಕಿರ್ಮಾನಿ ಜೋಡಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನವೆಂಬರ್, 1979ರಲ್ಲಿ ಆಸ್ಟ್ರೇಲಿಯಾ ವಿರುದ್ಧ 127 ರನ್‌ಗಳ ಜೊತೆಯಾಟ ನೀಡಿದೆ.
ನಂತರ, ಹರ್ಭಜನ್ ಸಿಂಗ್ ಮತ್ತು ಅನಿಲ್ ಕುಂಬ್ಳೆ ಜೋಡಿ ಎಂಟನೇ ವಿಕೆಟ್‌ಗೆ 2008ರ ಜನವರಿಯಲ್ಲಿ ಅಡಿಲೇಡ್ ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 107 ರನ್‌ಗಳ ಜೊತೆಯಾಟ ನೀಡಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಸದ್ಯ ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಬ್ಯಾಟ್‌ನೊಂದಿಗೆ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ನಾಗ್ಪುರ ಟೆಸ್ಟ್‌ನಲ್ಲಿ ಅಕ್ಷರ್ ಪಟೇಲ್ 84 ರನ್ ಬಾರಿಸಿದ್ದರು. ನಂತರ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಐಸಿಸಿ ಟೆಸ್ಟ್ ಆಲ್‌ರೌಂಡರ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ 10ರೊಳಗೆ ಪ್ರವೇಶ ಪಡೆದರು.
ಇನ್ನು ರವಿಚಂದ್ರನ್ ಅಶ್ವಿನ್ ಬ್ಯಾಟ್‌ನೊಂದಿಗೆ ಉತ್ತಮ ಪ್ರದರ್ಶನ ನೀಡುವುದರ ಜೊತೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 450 ವಿಕೆಟ್‌ಗಳನ್ನು ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications