
ಅದ್ಭುತ ಫಾರ್ಮ್‌ನಲ್ಲಿದ್ದಾರೆ ಬಾಬರ್
ಬಾಬರ್ ಅಜಂ ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಮಿಂಚುತ್ತಿದ್ದಾರೆ. ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿಯೂ ಬಾಬರ್ ಉತ್ತಮ ಪ್ರದರ್ಶನ ನೀಡಿದ್ದರು. ಹಲವು ದಾಖಲೆಗಳನ್ನು ಕುಡ ತಮ್ಮ ಹೆಸರಿನಲ್ಲಿ ಬರೆದುಕೊಂಡಿರುವ ಬಾಬರ್ ಅಜಂ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಯ ಕೆಲ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇದರಲ್ಲಿ ವೇಗವಾಗಿ 10000 ರನ್‌ಗಳಿಸಿದ ದಾಖಲೆ ಕೂಡ ಸೇರಿಕೊಂಡಿದೆ. ಇನ್ನು ಏಕದಿನ ಹಾಗೂ ಟಿ20 ಕ್ರಿಕೆಟ್‌ನ ಶ್ರೇಯಾಂಕಪಟ್ಟಿಯಲ್ಲಿ ಬಾಬರ್ ಅಜಂ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು ಟೆಸ್ಟ್ ಕ್ರಿಕೆಟ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಶ್ರೀಲಂಕಾ ಭರ್ಜರಿ ಬೌಲಿಂಗ್
ಶ್ರೀಲಂಕಾ ತಂಡ ಈ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದೆ. ಪಾಕಿಸ್ತಾನದ ನಾಯಕ ಬಾಬರ್ ಅಜಂ ಮಾತ್ರವೇ ಲಂಕಾ ಬೌಲಿಂಗ್ ದಾಳಿಯನ್ನು ಎದುರಿಸಲು ಶಕ್ತವಾದರು. ಉಳಿದಂತೆ ಯಾವ ಆಟಗಾರ ಕೂಡ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ಉಳಿಯಲು ಸಾಧ್ಯವಾಗಲಿಲ್ಲ. ಶ್ರೀಲಂಕಾದ ಯುವ ಬೌಲರ್ ಪ್ರಬಾತ್ ಜಯಸೂರ್ಯ ಈ ಪಂದ್ಯದಲ್ಲಿಯೂ ಮಿಂಚಿದ್ದು ಮತ್ತೊಮ್ಮೆ ಐದು ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದ್ದಾರೆ.

ಸಾಧಾರಣ ಮೊತ್ತಗಳಿಸಿದ ಶ್ರೀಲಂಕಾ
ಇನ್ನು ಮೊದಲಗೆ ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಮೊದಲ ಇನ್ನಿಂಗ್ಸ್‌ನಲ್ಲಿ ದೊಡ್ಡ ಮೊತ್ತ ಗಳಿಸಲು ವಿಫಲವಾಯಿಯಿ. ಶ್ರೀಲಂಕಾ ತಂಡದ ಒರವಾಗಿ ದಿನೇಶ್ ಚಾಂಡಿಮಲ್ ಮಾತ್ರವೇ ಉತ್ತಮ ಮೊತ್ತ ಗಳಿಸಲು ಯಶಸ್ವಿಯಾದರು. ಚಾಂಡಿಮಲ್ 76 ರನ್‌ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಇದರ ಪರಿಣಾಮವಾಗಿ ಶ್ರೀಲಂಕಾ ಮೊದಲ ಇನ್ನಿಂಗ್ಸ್‌ನಲ್ಲಿ 222 ರನ್‌ಗಳಿಸಿ ಎಲ್ಲಾ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನದ ಪರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಶಾಹಿನ್ ಅಫ್ರಿದಿ ನಾಲ್ಕು ವಿಕೆಟ್ ಪಡೆದು ಸಂಭ್ರಮಿಸಿದರು.

ಇತ್ತಂಡಗಳ ಆಡುವ ಬಳಗ
ಶ್ರೀಲಂಕಾ: ಓಶಾದ ಫೆರ್ನಾಂಡೋ, ದಿಮುತ್ ಕರುಣಾರತ್ನೆ (ನಾಯಕ), ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಾಲ್, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ರಮೇಶ್ ಮೆಂಡಿಸ್, ಮಹೇಶ್ ತೀಕ್ಷಣ, ಪ್ರಭಾತ್ ಜಯಸೂರ್ಯ, ಕಸುನ್ ರಜಿತಾ
ಬೆಂಚ್: ಪಾತುಮ್ ನಿಸ್ಸಾಂಕ, ಕಮಿಂದು ಮೆಂಡಿಸ್, ಅಸಿತ ಫೆರ್ನಾಂಡೋ, ವಿಶ್ವ ಫೆರ್ನಾಂಡೋ, ಜೆಫ್ರಿ ವಾಂಡರ್ಸೆ, ದುನಿತ್ ವೆಲ್ಲಲಾಗೆ, ದಿಲ್ಶಾನ್ ಮಧುಶಂಕ
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಅಘಾ ಸಲ್ಮಾನ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಯಾಸಿರ್ ಶಾ, ಹಸನ್ ಅಲಿ, ಶಾಹೀನ್ ಅಫ್ರಿದಿ, ನಸೀಮ್ ಶಾ
ಬೆಂಚ್: ಫವಾದ್ ಆಲಂ, ನೌಮನ್ ಅಲಿ, ಹಾರಿಸ್ ರೌಫ್, ಸರ್ಫರಾಜ್ ಅಹ್ಮದ್, ಶಾನ್ ಮಸೂದ್, ಸೌದ್ ಶಕೀಲ್, ಫಹೀಮ್ ಅಶ್ರಫ್


Click it and Unblock the Notifications
