ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ದಾಖಲೆ ಮುರಿದ ಬಾಬರ್ ಅಜಮ್; ಕೊಹ್ಲಿ ರೆಕಾರ್ಡ್ ಬ್ರೇಕ್ ಆಗುವ ಸಾಧ್ಯತೆ!
ಮೇ 26 ಭಾನುವಾರ, ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಅದ್ಭುತ ಫಾರ್ಮ್ ನಲ್ಲಿದ್ದಾರೆ. ಸದ್ಯ ಪಾಕಿಸ್ತಾನ ತಂಡ ಐದು ಟಿ20 ಪಂದ್ಯಗಳ ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದೆ.
ಶನಿವಾರ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ಎರಡನೇ ಟಿ20 ಪಂದ್ಯವನ್ನು ಆಡಿತ್ತು. ಈ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 183 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಪಾಕಿಸ್ತಾನ 160 ಕ್ಕೆ ಆಲೌಟ್ ಆಗುವ ಮೂಲಕ ಸೋತಿದೆ.

ಆದರೆ ಈ ಪಂದ್ಯದಲ್ಲಿ ಪಾಕ್ ನಾಯಕ ಬಾಬರ್ ಅಜಮ್ 26 ಎಸೆತಗಳಲ್ಲಿ 32 ರನ್ ಗಳಿಸುವ ಮೂಲಕ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ. ಅಲ್ಲದೆ, ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದ್ದಾರೆ.
ಬಾಬರ್ ಅಜಮ್ ಈವರೆಗೆ 111 ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದು, 129.91 ಸ್ಟ್ರೈಕ್ ರೇಟ್‌ನಲ್ಲಿ 3987 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಅವರು 3974 ರನ್‌ಗಳನ್ನು ಹೊಡೆದಿದ್ದಾರೆ. ಹೀಗಾಗಿ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಹೊಡೆದ ಎರಡನೇ ಆಟಗಾರನಾಗಿ ಬಾಬರ್ ಅಜಮ್ ಸಾಧನೆ ಮಾಡಿದ್ದಾರೆ.
ಮತ್ತೊಂದೆಡೆ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 4037 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಈ ದಾಖಲೆಯನ್ನು ಬಾಬರ್ ಬ್ರೇಕ್ ಮಾಡಲು ಕೇವಲ 50 ರನ್‌ಗಳ ಅವಶ್ಯಕತೆ ಇದೆ.
ಟಿ20 ವಿಶ್ವಕಪ್ 2024 ಜೂನ್ 2 ರಿಂದ ಪ್ರಾರಂಭವಾಗಲಿದ್ದು, ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಸೆಣಸಲಿದೆ.
2022ರ ಟಿ20 ವಿಶ್ವಕಪ್‌ನಲ್ಲೂ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ಇದೀಗ ಮತ್ತೊಮ್ಮೆ ಪಾಕಿಸ್ತಾನವನ್ನು ಸೋಲಿಸಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶ ಸಿಕ್ಕಿದೆ. ಜೊತೆಗೆ ಹಲವು ದಾಖಲೆಗಳು ಸೃಷ್ಟಿ ಆಗುವುದನ್ನು ನೋಡುವ ಭಾಗ್ಯ ಅಭಿಮಾನಿಗಳಿಗೆ ಸಿಗಲಿದೆ.
ಟಿ20 ವಿಶ್ವಕಪ್‌ನ ಭಾರತ vs ಪಾಕ್ ತಂಡಗಳು
ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಮೀಸಲು ಆಟಗಾರರು: ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್
ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಅಜಮ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಫಖರ್ ಜಮಾನ್, ಇಮಾದ್ ವಾಸಿಮ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಶಾದಾಬ್ ಖಾನ್, ಸೈಮ್ ಅಯೂಬ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಉಸ್ಮಾನ್ ಖಾನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications